Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:15 - ಕನ್ನಡ ಸಮಕಾಲಿಕ ಅನುವಾದ

15 ಆಗ ಯಾಜಕನು ಒಂದನ್ನು ಪಾಪ ಪರಿಹಾರದ ಬಲಿಗಾಗಿ ಮತ್ತು ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು, ಯಾಜಕನು ಅವನ ಸ್ರಾವಕ್ಕೋಸ್ಕರ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ಅವನಿಗಾಗಿ ದೋಷಪರಿಹಾರ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಯಾಜಕನು ದೋಷಪರಿಹಾರಕ ಬಲಿಗಾಗಿ ಒಂದನ್ನೂ ದಹನಬಲಿಯಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲಿ ಅವನ ಪರವಾಗಿ ದೋಷಪರಿಹಾರ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯಾಜಕನು ದೋಷಪರಿಹಾರಕಯಜ್ಞಕ್ಕಾಗಿ ಒಂದನ್ನೂ ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ಅವನಿಗೋಸ್ಕರ ದೋಷಪರಿಹಾರ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯಾಜಕನು ಈ ಪಕ್ಷಿಗಳಲ್ಲಿ ಒಂದನ್ನು ಪಾಪಪರಿಹಾರಕ ಯಜ್ಞವಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಅರ್ಪಿಸುವನು. ಹೀಗೆ ಯಾಜಕನು ಅವನ ಅಶುದ್ಧವಾದ ಸ್ರಾವಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:15
22 ತಿಳಿವುಗಳ ಹೋಲಿಕೆ  

ಅವರು ಸಮಾಧಾನದ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು. ಯಾಜಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು.


ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.


ತಮ್ಮ ಕೃಪಾ ಮಹಿಮೆಯ ಸ್ತುತಿಗಾಗಿಯೇ ಇವುಗಳನ್ನು ದೇವರು ತಾವು ಪ್ರೀತಿಸುವ ಕ್ರಿಸ್ತನಲ್ಲಿ ನಮಗೆ ಉಚಿತವಾಗಿ ದಯಪಾಲಿಸಿದ್ದಾರೆ.


ಸ್ವರ್ಗದೊಳಗಿಂದ, “ಈತನು ನನ್ನ ಪ್ರಿಯ ಮಗನು. ಈತನನ್ನು ನಾನು ಮೆಚ್ಚಿದ್ದೇನೆ,” ಎಂಬ ಧ್ವನಿ ಕೇಳಿಸಿತು.


ಅವನು ತನ್ನ ದೇವರ ಗೌರವವನ್ನು ಕಾಪಾಡಲು ಆಸಕ್ತನಾಗಿದ್ದು, ಇಸ್ರಾಯೇಲರಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ, ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆ ಮಾಡಿದ್ದೇನೆ,” ಎಂದರು.


ಯಾಜಕನು ಇಸ್ರಾಯೇಲರ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತ ಮಾಡಬೇಕು. ಏಕೆಂದರೆ ಅದು ತಿಳಿಯದೆ ಮಾಡಲಾಗಿತ್ತು. ಆದರೂ ಅವರು ಯೆಹೋವ ದೇವರಿಗೆ ದಹನಬಲಿಯಾಗಿ ತಮ್ಮ ಸಮರ್ಪಣೆಯನ್ನೂ, ತಮ್ಮ ತಪ್ಪಿಗೋಸ್ಕರ ಪಾಪ ಪರಿಹಾರಕ ಬಲಿಯನ್ನೂ ಯೆಹೋವ ದೇವರ ಮುಂದೆ ತರಬೇಕು.


ಅವನು ಯೆಹೋವ ದೇವರ ಮುಂದೆ ಅದನ್ನು ಅರ್ಪಿಸಿ, ಅವಳಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ಅವಳು ತನ್ನ ರಕ್ತಸ್ರಾವದಿಂದಾದ ಅಶುದ್ಧತೆಯಿಂದ ಶುದ್ಧಳಾಗುವಳು. “ ‘ಗಂಡು ಮಗುವನ್ನಾಗಲಿ, ಹೆಣ್ಣು ಮಗುವನ್ನಾಗಲಿ ಹೆತ್ತವಳಿಗೆ ನಿಯಮವು ಇದೆ.


ಇದಲ್ಲದೆ ಸಮಾಧಾನ ಬಲಿಗಳ ಕುರಿಮರಿಯ ಕೊಬ್ಬಿನಂತೆಯೇ, ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು. ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಯೆಹೋವ ದೇವರಿಗೆ ಮಾಡಿದಂತೆಯೇ, ಬಲಿಪೀಠದ ಮೇಲೆ ಅವುಗಳನ್ನು ಸುಡಬೇಕು. ಯಾಜಕನು ಅವನು ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.


ಅವನು ಸಮಾಧಾನ ಬಲಿಯ ಕೊಬ್ಬನ್ನು ತೆಗೆದಂತೆ, ಅದರ ಎಲ್ಲಾ ಕೊಬ್ಬನ್ನು ತೆಗೆಯಬೇಕು. ಯಾಜಕನು ಅದನ್ನು ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯಾಗಿ ಸುಡಬೇಕು. ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.


ಪಾಪ ಪರಿಹಾರದ ಬಲಿಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ, ಈ ಹೋರಿಗೂ ಮಾಡಬೇಕು. ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವರಿಗೆ ಕ್ಷಮಾಪಣೆಯಾಗುವುದು.


“ ‘ಇವುಗಳಿಂದ ನೀವು ಅಶುದ್ಧರಾಗುವಿರಿ. ಅಂದರೆ ಅವುಗಳ ಶವಗಳನ್ನು ಮುಟ್ಟುವವರು ಸಂಜೆಯವರೆಗೂ ಅಶುದ್ಧರಾಗಿರುವರು.


ಯಾರಾದರೂ ಅವುಗಳ ಶವವನ್ನು ಹೊತ್ತರೂ, ಅವರು ಬಟ್ಟೆಗಳನ್ನು ಒಗೆದುಕೊಂಡು ಸಂಜೆಯವರೆಗೂ ಅಶುದ್ಧರಾಗಿರುವರು.


ನಾಲ್ಕು ಕಾಲುಗಳ ಮೇಲೆ ಹೋಗುವ ಎಲ್ಲಾ ಬಗೆಯ ಮೃಗಗಳಲ್ಲಿ ಅಂಗಾಲಿನ ಮೇಲೆ ಹೋಗುವುದೆಲ್ಲವೂ ನಿಮಗೆ ಅಶುದ್ಧವಾಗಿರುವುವು. ಯಾರಾದರೂ ಅವುಗಳ ಶವವನ್ನು ಮುಟ್ಟಿದರೆ ಅವರು ಸಂಜೆಯವರೆಗೂ ಅಶುದ್ಧರಾಗಿರುವರು.


ಅವುಗಳ ಶವವನ್ನು ಹೊರುವವರು ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೂ ಅಶುದ್ಧರಾಗಿರುವರು. ಈ ಪ್ರಾಣಿಗಳು ನಿಮಗೆ ಅಶುದ್ಧವಾದವುಗಳು.


ನೆಲದ ಮೇಲೆ ಹರಿದಾಡುವ ಇವು ನಿಮಗೆ ಅಶುದ್ಧ. ಸತ್ತಿರುವಾಗ ಅವುಗಳನ್ನು ಯಾರಾದರೂ ಮುಟ್ಟಿದರೆ ಅವರು ಸಂಜೆಯವರೆಗೂ ಅಶುದ್ಧರಾಗಿರುವರು.


ಅವು ಸತ್ತು ಹೋಗಿ, ಯಾವುದರ ಮೇಲೆ ಬೀಳುವವೋ ಅವೆಲ್ಲಾ ಅಶುದ್ಧವಾಗಿರುವುದು. ಅದು ಮರದ ಪಾತ್ರೆಯೇ ಆಗಿರಲಿ, ಉಡುಪೇ ಆಗಿರಲಿ, ಚೀಲವೇ ಆಗಿರಲಿ, ಕೆಲಸ ಮಾಡುವ ಯಾವ ವಸ್ತುವಾಗಲಿ, ಅದು ಏನೇ ಆಗಿರಲಿ ಸಂಜೆಯವರೆಗೆ ನೀರಲ್ಲಿ ಇಡುವವರೆಗೆ ಅಶುದ್ಧವಾಗಿರುವುದು. ನಂತರ ಅದು ಶುದ್ಧವಾಗುವುದು.


“ ‘ನೀವು ತಿನ್ನುವ ಯಾವುದಾದರೂ ಪ್ರಾಣಿ ಸತ್ತಿದ್ದರೆ, ಅದರ ಶವವನ್ನು ಮುಟ್ಟಿದವರು ಸಂಜೆಯವರೆಗೆ ಅಶುದ್ಧರಾಗಿರುವರು.


ಯಾರಾದರೂ ಅದರ ಮಾಂಸವನ್ನು ತಿಂದಲ್ಲಿ ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು. ಅದರ ಶವವನ್ನು ಹೊರುವವರೂ ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು.


ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ, ಅವಳು ದಹನಬಲಿಗಾಗಿ ಒಂದು ಪಾಪ ಪರಿಹಾರದ ಬಲಿಗಾಗಿ, ಇನ್ನೊಂದು ಎಂಬಂತೆ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವಳು ಶುದ್ಧಳಾಗುವಳು.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು