ಯಾಜಕಕಾಂಡ 15:24 - ಕನ್ನಡ ಸಮಕಾಲಿಕ ಅನುವಾದ24 “ ‘ಯಾವನಾದರೂ ಅವಳೊಂದಿಗೆ ಸಂಗಮಿಸಿದರೆ ಮತ್ತು ಅವಳ ಸ್ರಾವವು ಅವನಿಗೆ ತಗಲಿದರೆ, ಅವನು ಏಳು ದಿವಸ ಅಶುದ್ಧನಾಗಿರಬೇಕು. ಅವನು ಮಲಗಿಕೊಳ್ಳುವ ಹಾಸಿಗೆಯೆಲ್ಲಾ ಅಶುದ್ಧವಾಗಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಪುರುಷನು ಒಂದು ವೇಳೆ ಅಂಥವಳೊಡನೆ ಸಂಗಮಿಸಿದರೆ, ಅವಳ ಋತುಸ್ರಾವ ಅವನಿಗೆ ತಗುಲಿದರೆ, ಅವನು ಏಳು ದಿನಗಳ ತನಕ ಅಶುದ್ಧನಾಗಿರುವನು. ಅಷ್ಟರಲ್ಲಿ ಅವನು ಯಾವ ಹಾಸಿಗೆಯ ಮೇಲೆ ಮಲಗಿಕೊಂಡರೂ ಅದು ಅಶುದ್ಧವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಪುರುಷನು ಒಂದು ವೇಳೆ ಅಂಥವಳೊಡನೆ ಸಂಗಮಿಸಿ ಅವಳ ರಜಸ್ಸು ಅವನಿಗೆ ತಗಲಿದರೆ ಅವನು ಏಳು ದಿನಗಳ ತನಕ ಅಶುದ್ಧನಾಗಿರುವನು. ಅಷ್ಟರಲ್ಲಿ ಅವನು ಯಾವ ಹಾಸಿಗೆಯ ಮೇಲೆ ಮಲಗಿಕೊಂಡರೂ ಅದು ಅಶುದ್ಧವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಪುರುಷನು ಒಂದು ವೇಳೆ ಅಂಥವಳೊಡನೆ ಸಂಗವಿುಸಿದದರಿಂದ ಅವಳ ರಜಸ್ಸು ಅವನಿಗೆ ತಗಲಿದರೆ ಅವನು ಏಳು ದಿನಗಳ ತನಕ ಅಶುದ್ಧನಾಗಿರುವನು. ಅಷ್ಟರಲ್ಲಿ ಅವನು ಯಾವ ಹಾಸಿಗೆಯ ಮೇಲೆ ಮಲಗಿಕೊಂಡರೂ ಅದು ಅಶುದ್ಧವಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ಪುರುಷನು ಸ್ತ್ರೀಯ ಮುಟ್ಟಿನ ಸಮಯದಲ್ಲಿ ಆಕೆಯೊಡನೆ ಲೈಂಗಿಕ ಸಂಪರ್ಕ ಹೊಂದಿದರೆ, ಆಗ ಅವನು ಏಳು ದಿನಗಳವರೆಗೆ ಅಶುದ್ಧನಾಗಿರುವನು. ಅವನು ಮಲಗಿಕೊಳ್ಳುವ ಪ್ರತಿಯೊಂದು ಹಾಸಿಗೆಯು ಅಶುದ್ಧವಾಗುವುದು. ಅಧ್ಯಾಯವನ್ನು ನೋಡಿ |