ಯಾಜಕಕಾಂಡ 15:26 - ಕನ್ನಡ ಸಮಕಾಲಿಕ ಅನುವಾದ26 ಅವಳ ಸ್ರಾವದ ಎಲ್ಲಾ ದಿನಗಳಲ್ಲಿ ಅವಳು ಮಲಗಿಕೊಳ್ಳುವ ಹಾಸಿಗೆಯು, ಅವಳ ಮುಟ್ಟಿನ ಹಾಸಿಗೆಯಂತೆ ಅಶುದ್ಧವಾಗಿರುವುದು. ಅವಳು ಕುಳಿತುಕೊಳ್ಳುವುದೆಲ್ಲವೂ ಅವಳ ಮುಟ್ಟಿನ ಅಶುದ್ಧತೆಯಂತೆಯೇ ಅಶುದ್ಧವಾಗಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ ಅದು ಮುಟ್ಟಿನ ಕಾಲದಲ್ಲಿ ಮಲಗಿದ ಹಾಸಿಗೆಯಂತೆಯೇ ಅಶುದ್ಧವಾಗುವುದು. ಅವಳು ಯಾವುದರ ಮೇಲೆ ಕುಳಿತುಕೊಂಡರೂ ಅದು ಮುಟ್ಟಿನ ಕಾಲದಲ್ಲಿ ಕುಳಿತುಕೊಂಡ ವಸ್ತುವಿನಂತೆ ಅಶುದ್ಧವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ, ಅದು ಮುಟ್ಟಿನ ಕಾಲದಲ್ಲಿ ಮಲಗಿದ ಹಾಸಿಗೆಯಂತೆಯೇ, ಅಶುದ್ಧವಾಗುವುದು. ಅವಳು ಯಾವುದರ ಮೇಲೆ ಕುಳಿತುಕೊಂಡರೂ ಅದು ಮುಟ್ಟಿನ ಕಾಲದಲ್ಲಿ ಕುಳಿತುಕೊಂಡ ವಸ್ತುವಿನಂತೆ ಅಶುದ್ಧವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ ಅದು ಮುಟ್ಟಿನ ಕಾಲದಲ್ಲಿ ಮಲಗಿದ ಹಾಸಿಗೆಯಂತೆಯೇ ಅಶುದ್ಧವಾಗುವದು. ಅವಳು ಯಾವದರ ಮೇಲೆ ಕೂತುಕೊಂಡರೂ ಅದು ಮುಟ್ಟಿನ ಕಾಲದಲ್ಲಿ ಕೂತುಕೊಂಡ ವಸ್ತುವಿನಂತೆ ಅಶುದ್ಧವಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ, ಅದು ತಿಂಗಳ ಮುಟ್ಟಿನ ಕಾಲದಲ್ಲಿ ಅವಳು ಮಲಗಿರುವ ಹಾಸಿಗೆಯಂತೆಯೇ ಅಶುದ್ಧವಾಗಿರುವುದು. ಅವಳು ಯಾವುದರ ಮೇಲೆ ಕುಳಿತರೂ ಅದು ತಿಂಗಳ ಮುಟ್ಟಿನ ಕಾಲದಲ್ಲಿ ಅವಳು ಕುಳಿತಿದ್ದ ವಸ್ತುವಿನಂತೆಯೇ ಅಶುದ್ಧವಾಗಿರುವುದು. ಅಧ್ಯಾಯವನ್ನು ನೋಡಿ |