Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:29 - ಕನ್ನಡ ಸಮಕಾಲಿಕ ಅನುವಾದ

29 ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು, ದೇವದರ್ಶನದ ಗುಡಾರದ ಬಾಗಿಲ ಬಳಿ ಯಾಜಕನ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ, ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಲಿಗೆ ಯಾಜಕನ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಬಳಿಕ ಎಂಟನೆಯ ದಿನದಲ್ಲಿ ಸ್ತ್ರೀಯು ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಳ್ಳಬೇಕು. ಅವಳು ಅವುಗಳನ್ನು ದೇವದರ್ಶನಗುಡಾರದ ಬಾಗಿಲಲ್ಲಿ ಯಾಜಕನ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:29
8 ತಿಳಿವುಗಳ ಹೋಲಿಕೆ  

“ ‘ಅವಳು ತನ್ನ ಸ್ರಾವದಿಂದ ಶುದ್ಧಳಾದರೆ, ಅವಳು ಶುದ್ಧಳಾದಂದಿನಿಂದ ತನಗಾಗಿ ಏಳು ದಿನಗಳನ್ನು ಲೆಕ್ಕಿಸಬೇಕು.


ಯಾಜಕನು ಒಂದನ್ನು ಪಾಪ ಪರಿಹಾರದ ಬಲಿಗಾಗಿಯೂ, ಇನ್ನೊಂದನ್ನು ದಹನಬಲಿಗಾಗಿಯೂ ಸಮರ್ಪಿಸಬೇಕು, ಯಾಜಕನು ಅವಳಿಗಾಗಿ ಅವಳ ಅಶುದ್ಧತೆಯ ಸ್ರಾವದ ವಿಷಯದಲ್ಲಿ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತ ಮಾಡಬೇಕು.


ಎಂಟನೆಯ ದಿನದಲ್ಲಿ ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಮತ್ತು ಇಸ್ರಾಯೇಲಿನ ಹಿರಿಯರನ್ನೂ ಕರೆದನು.


“ ‘ಮಗನಿಗಾಗಿ ಇಲ್ಲವೆ ಮಗಳಿಗಾಗಿ ಅವಳ ಶುದ್ಧ ದಿನಗಳು ಪೂರ್ತಿಯಾದರೆ, ಅವಳು ದಹನಬಲಿಗಾಗಿ ಒಂದು ವರ್ಷದ ಕುರಿಮರಿಯನ್ನೂ, ಪಾಪ ಪರಿಹಾರದ ಬಲಿಗಾಗಿ ಪಾರಿವಾಳದ ಮರಿಯನ್ನೂ, ಇಲ್ಲವೆ ಬೆಳವಕ್ಕಿಯನ್ನೂ ದೇವದರ್ಶನದ ಗುಡಾರದ ಬಾಗಿಲಲ್ಲಿ ಯಾಜಕನ ಬಳಿಗೆ ತರಬೇಕು.


ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ, ಅವಳು ದಹನಬಲಿಗಾಗಿ ಒಂದು ಪಾಪ ಪರಿಹಾರದ ಬಲಿಗಾಗಿ, ಇನ್ನೊಂದು ಎಂಬಂತೆ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವಳು ಶುದ್ಧಳಾಗುವಳು.’ ”


ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳ ಮರಿಗಳನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲ ಬಳಿ ಯೆಹೋವ ದೇವರ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು.


ಎಂಟನೆಯ ದಿವಸದಲ್ಲಿ ಅವರು ಯಾಜಕನ ಬಳಿಗೆ ಸಭೆಯ ಗುಡಾರದ ಬಾಗಿಲಿಗೆ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು.


ಯೇಸು ದೇವಾಲಯದ ಅಂಗಳದೊಳಗೆ ಹೋಗಿ ಮಾರುತ್ತಿದ್ದವರನ್ನೂ ಕೊಂಡುಕೊಳ್ಳುತ್ತಿದ್ದವರನ್ನೂ ಹೊರಗಟ್ಟಿದರು. ಹಣ ವಿನಿಮಯ ಮಾಡುತ್ತಿದ್ದವರ ಮೇಜುಗಳನ್ನೂ ಪಾರಿವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು