ಯಾಜಕಕಾಂಡ 15:31 - ಕನ್ನಡ ಸಮಕಾಲಿಕ ಅನುವಾದ31 “ ‘ಹೀಗೆ ನೀವು ಇಸ್ರಾಯೇಲರನ್ನು ಅಶುದ್ಧತೆಯಿಂದ ದೂರವಾಗಿರುವಂತೆ ನೋಡಿಕೊಳ್ಳಬೇಕು. ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಅಶುದ್ಧ ಮಾಡದೆ, ತಮ್ಮ ಅಶುದ್ಧತ್ವದಿಂದ ಸಾಯುವುದಿಲ್ಲ.’ ” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 “‘ಇಸ್ರಾಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 “ಇಸ್ರಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾದಾರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಇಸ್ರಾಯೇಲ್ಯರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾದಾರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 “ಆದ್ದರಿಂದ ಅಶುದ್ಧತ್ವದ ಕುರಿತು ನೀವು ಇಸ್ರೇಲರನ್ನು ಎಚ್ಚರಿಸಬೇಕು. ನೀವು ಜನರನ್ನು ಎಚ್ಚರಿಸದಿದ್ದರೆ ಅವರು ನನ್ನ ಪವಿತ್ರ ಗುಡಾರವನ್ನು ಅಶುದ್ಧಮಾಡಿ ಸಾವಿಗೀಡಾಗುವರು.” ಅಧ್ಯಾಯವನ್ನು ನೋಡಿ |