Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:8 - ಕನ್ನಡ ಸಮಕಾಲಿಕ ಅನುವಾದ

8 “ ‘ಶುದ್ಧರಾಗಿರುವವರ ಮೇಲೆ ಸ್ರಾವವಿರುವವನು ಉಗುಳಿದರೆ, ಅವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಶುದ್ಧನಾಗಿರುವವನ ಮೇಲೆ ಸ್ರಾವವುಳ್ಳವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಶುದ್ಧನಾಗಿರುವವನ ಮೇಲೆ ಸ್ರಾವವುಳ್ಳವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಶುದ್ಧನಾಗಿರುವವನ ಮೇಲೆ ಸ್ರಾವವುಳ್ಳವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಸ್ರಾವವುಳ್ಳ ವ್ಯಕ್ತಿ ಶುದ್ಧವ್ಯಕ್ತಿಯ ಮೇಲೆ ಉಗುಳಿದರೆ, ಶುದ್ಧವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ನೀರಿನಿಂದ ಸ್ನಾನಮಾಡಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:8
11 ತಿಳಿವುಗಳ ಹೋಲಿಕೆ  

ಏಕೆಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆಪಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡೆಸುವವರೂ ನಮ್ಮ ಒಬ್ಬರೇ ಕರ್ತ ಆಗಿರುವ ದೇವರನ್ನು ಮತ್ತು ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಲ್ಲಗಳೆಯುವ ಕೆಲವು ಜನರೂ ರಹಸ್ಯವಾಗಿ ಸಭೆಯೊಳಗೆ ಹೊಕ್ಕಿದ್ದಾರೆ. ಇವರು ದಂಡನೆಗೋಸ್ಕರ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ.


“ನಿಮ್ಮನ್ನು ತೊಳೆದುಕೊಂಡು ಶುದ್ಧಮಾಡಿಕೊಳ್ಳಿರಿ. ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟಕೃತ್ಯಗಳನ್ನು ತೆಗೆದುಹಾಕಿರಿ. ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ.


ದೇವರ ಸಮೀಪಕ್ಕೆ ಬನ್ನಿರಿ. ಆಗ ನಿಮ್ಮ ಸಮೀಪಕ್ಕೆ ದೇವರು ಬರುವರು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ. ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.


“ ‘ಸ್ರಾವವಿರುವವನ ಶರೀರವನ್ನು ಮುಟ್ಟುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು ಮತ್ತು ಸಂಜೆಯವರೆಗೆ ಅವರು ಅಶುದ್ಧನಾಗಿರಬೇಕು.


“ ‘ಸ್ರಾವವುಳ್ಳವನು ಏರಿ ಕುಳಿತುಕೊಂಡಿದ್ದ ತಡಿಯು ಅಶುದ್ಧವಾಗಿರುವುದು.


“ ‘ಇವುಗಳಿಂದ ನೀವು ಅಶುದ್ಧರಾಗುವಿರಿ. ಅಂದರೆ ಅವುಗಳ ಶವಗಳನ್ನು ಮುಟ್ಟುವವರು ಸಂಜೆಯವರೆಗೂ ಅಶುದ್ಧರಾಗಿರುವರು.


ಇದಲ್ಲದೆ ಅಪವಿತ್ರನಾದವನು ಮುಟ್ಟುವಂಥಾದ್ದೆಲ್ಲ ಅಪವಿತ್ರವಾಗುವುದು, ಅವನನ್ನು ಮುಟ್ಟಿದವನು ಸಂಜೆಯವರೆಗೆ ಅಪವಿತ್ರನಾಗಿರುವನು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು