Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:11 - ಕನ್ನಡ ಸಮಕಾಲಿಕ ಅನುವಾದ

11 “ಇದಲ್ಲದೆ ಆರೋನನು ಪಾಪ ಪರಿಹಾರದ ಬಲಿಯಾಗಿರುವ ಹೋರಿಯನ್ನು ತಂದು, ತನಗೋಸ್ಕರ ಮತ್ತು ತನ್ನ ಮನೆತನದವರಿಗೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ತನಗೋಸ್ಕರ ದೋಷಪರಿಹಾರಕ ಬಲಿಯಾಗಿ ಆ ಹೋರಿಯನ್ನು ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಆರೋನನು ತನಗಾಗಿ ದೋಷಪರಿಹಾರಕ ಯಜ್ಞದ ಹೋರಿಯನ್ನು ಸಮರ್ಪಿಸಿ ತನಗಾಗಿಯೂ ಮತ್ತು ತನ್ನ ಮನೆತನದವರಿಗಾಗಿಯೂ ದೋಷಪರಿಹಾರವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆರೋನನು ತನಗಾಗಿ ದೋಷಪರಿಹಾರಕ ಬಲಿಯ ಹೋರಿಯನ್ನು ಸಮರ್ಪಿಸಿ ತನ್ನ ಹಾಗು ತನ್ನ ಮನೆತನದವರ ಪರವಾಗಿ ಪ್ರಾಯಶ್ಚಿತ್ತ ವಿಧಿಯನ್ನು ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆರೋನನು ತನಗೋಸ್ಕರವಾದ ದೋಷಪರಿಹಾರಕಯಜ್ಞದ ಹೋರಿಯನ್ನು ಸಮರ್ಪಿಸಿ ತನಗೋಸ್ಕರವೂ ತನ್ನ ಮನೆತನದವರಿಗೋಸ್ಕರವೂ ದೋಷಪರಿಹಾರವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಬಳಿಕ ಆರೋನನು ಹೋರಿಯನ್ನು ತನ್ನ ಪಾಪಪರಿಹಾರಕ ಯಜ್ಞವಾಗಿ ಅರ್ಪಿಸುವನು. ಆರೋನನು ತನಗಾಗಿಯೂ ತನ್ನ ಕುಟುಂಬದವರಿಗಾಗಿಯೂ ಪ್ರಾಯಶ್ಚಿತ್ತ ಮಾಡುವನು. ಆರೋನನು ಹೋರಿಯನ್ನು ತನ್ನ ಪಾಪಪರಿಹಾರಕ ಯಜ್ಞವಾಗಿ ವಧಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:11
6 ತಿಳಿವುಗಳ ಹೋಲಿಕೆ  

“ಇದಲ್ಲದೆ ಆರೋನನು ತನಗೋಸ್ಕರ ಪಾಪ ಪರಿಹಾರದ ಬಲಿಗಾಗಿ ತನ್ನ ಹೋರಿಯನ್ನು ಸಮರ್ಪಿಸಿ, ತನ್ನ ಮನೆಯವರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಬೇಕು.


ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೆ ಒಂದೇ ಸಾರಿ ಪ್ರವೇಶಿಸುತ್ತಿದ್ದನು. ಅವನು ರಕ್ತವನ್ನು ತೆಗೆದುಕೊಳ್ಳದೆ ಎಂದಿಗೂ ಹೋಗುತ್ತಿರಲಿಲ್ಲ. ಬಲಿಯ ರಕ್ತವನ್ನು ತನಗೋಸ್ಕರವೂ ಜನರು ತಿಳಿಯದೆ ಮಾಡಿದ ಪಾಪಗಳಿಗೋಸ್ಕರವೂ ಸಮರ್ಪಿಸುತ್ತಿದ್ದನು.


ಮೊದಲು ತನ್ನ ಸ್ವಂತ ಪಾಪಗಳಿಗಾಗಿಯೂ ಯಜ್ಞಾರ್ಪಣೆ ಮಾಡುವ ಆ ಮಹಾಯಾಜಕರಂತೆ ಯೇಸು ಪ್ರತಿದಿನವೂ ಬಲಿ ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಇವರು ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡಾಗ ಅದನ್ನು ಒಂದೇ ಸಾರಿ ಮಾಡಿ ಮುಗಿಸಿದರು.


“ಈ ಸೂಚನೆಗಳನ್ನು ಸಂಪೂರ್ಣವಾಗಿ ಅನುಸರಿಸಿದ ನಂತರವೇ ಆರೋನನು ಮಹಾಪರಿಶುದ್ಧ ಸ್ಥಳಕ್ಕೆ ಪ್ರವೇಶಿಸಬೇಕು: ಪಾಪ ಪರಿಹಾರದ ಬಲಿಗಾಗಿ ಒಂದು ಹೋರಿಯನ್ನು ಮತ್ತು ದಹನಬಲಿಗಾಗಿ ಒಂದು ಟಗರನ್ನು ತೆಗೆದುಕೊಂಡು ಬರಬೇಕು.


ಹೀಗೆ ಅವನು ಮಹಾಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು. ಇದಲ್ಲದೆ ಸಭೆಯ ಗುಡಾರಕ್ಕಾಗಿಯೂ, ಬಲಿಪೀಠಕ್ಕಾಗಿಯೂ ಪ್ರಾಯಶ್ಚಿತ್ತ ಮಾಡಬೇಕು. ಯಾಜಕರಿಗಾಗಿಯೂ, ಸಭೆಯ ಎಲ್ಲಾ ಜನರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಬೇಕು.


ಮೋಶೆಯು ಆರೋನನಿಗೆ, “ಬಲಿಪೀಠದ ಕಡೆಗೆ ಹೋಗಿ, ಯೆಹೋವ ದೇವರು ಆಜ್ಞಾಪಿಸಿದಂತೆಯೇ ನಿನ್ನ ಪಾಪ ಪರಿಹಾರದ ಬಲಿಯನ್ನೂ ದಹನಬಲಿಯನ್ನೂ ಅರ್ಪಿಸು. ನಿನಗಾಗಿ ಪ್ರಾಯಶ್ಚಿತ್ತವನ್ನು ಮಾಡು, ಜನರ ಸಮರ್ಪಣೆಗಳನ್ನು ಸಮರ್ಪಿಸಿ, ಅವರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು