Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:12 - ಕನ್ನಡ ಸಮಕಾಲಿಕ ಅನುವಾದ

12 ಅವನು ಯೆಹೋವ ದೇವರ ಸನ್ನಿಧಿಯಲ್ಲಿರುವ ಬಲಿಪೀಠದಿಂದ ಬೆಂಕಿಯ ಕೆಂಡಗಳನ್ನು ಧೂಪ ಸುಡುವ ಪಾತ್ರೆಯಲ್ಲಿ ತುಂಬಿಸಿ, ತನ್ನ ಎರಡು ಕೈತುಂಬ ಪರಿಮಳ ಧೂಪದ್ರವ್ಯದ ಚೂರ್ಣವನ್ನು ತೆಗೆದುಕೊಂಡು, ತೆರೆಯನ್ನು ದಾಟಿ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನು ತನಗೋಸ್ಕರ ಹೋರಿಯನ್ನು ವಧಿಸಿದ ಮೇಲೆ ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ, ಪರಿಮಳಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ಅವುಗಳನ್ನು ತೆರೆಯೊಳಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವನು ತನಗೋಸ್ಕರವಾದ ಆ ಹೋರಿಯನ್ನು ವಧಿಸಿದ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ವೇದಿಕೆಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ ಪರಿಮಳ ಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ತೆರೆಯನ್ನು ದಾಟಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನು ತನಗೋಸ್ಕರವಾದ ಹೋರಿಯನ್ನು ವಧಿಸಿದ ಮೇಲೆ ಯೆಹೋವನ ಸನ್ನಿಧಿಯಲ್ಲಿರುವ ವೇದಿಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ ಪರಿಮಳಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ತೆರೆಯನ್ನು ದಾಟಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಬಳಿಕ ಅವನು ಯೆಹೋವನ ಸನ್ನಿಧಿಯಲ್ಲಿರುವ ವೇದಿಕೆಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತೆಗೆದುಕೊಳ್ಳಬೇಕು. ಆರೋನನು ಪರಿಮಳ ಧೂಪ ದ್ರವ್ಯದ ಪುಡಿಯಲ್ಲಿ ಎರಡು ಹಿಡಿ ತೆಗೆದುಕೊಳ್ಳುವನು. ಆರೋನನು ಆ ಧೂಪವನ್ನು ತೆರೆಯ ಹಿಂದೆ ಇರುವ ಕೋಣೆಗೆ ತೆಗೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:12
13 ತಿಳಿವುಗಳ ಹೋಲಿಕೆ  

ಆರೋನನ ಪುತ್ರರಾದ ನಾದಾಬ್ ಮತ್ತು ಅಬೀಹೂ ತಮ್ಮ ತಮ್ಮ ಧೂಪ ಪಾತ್ರೆಗಳನ್ನು ತೆಗೆದುಕೊಂಡು, ಅದರಲ್ಲಿ ಬೆಂಕಿಯನ್ನು ಹಾಕಿ, ಅದರಲ್ಲಿ ಸುವಾಸನೆಯ ಧೂಪವನ್ನು ಹಾಕಿ, ಯೆಹೋವ ದೇವರು ಆಜ್ಞಾಪಿಸದೇ ಇದ್ದ ಬೇರೆ ಬೆಂಕಿಯನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಸಮರ್ಪಿಸಿದರು.


ಮೋಶೆಯು ಆರೋನನಿಗೆ, “ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು, ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು, ಧೂಪ ಹಾಕಿ, ಶೀಘ್ರವಾಗಿ ಜನರೊಳಗೆ ಹೋಗಿ, ಅವರಿಗೋಸ್ಕರ ಪ್ರಾಯಶ್ಚಿತ್ತವನ್ನು ಮಾಡು. ಏಕೆಂದರೆ ಯೆಹೋವ ದೇವರ ಸಮ್ಮುಖದಿಂದ ಕೋಪವು ಹೊರಟು, ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು,” ಎಂದನು.


ಆಗ ಅವರು ತಮ್ಮ ತಮ್ಮ ಧೂಪ ಪಾತ್ರೆಗಳನ್ನು ತೆಗೆದುಕೊಂಡು ಅವುಗಳ ಮೇಲೆ ಬೆಂಕಿಯನ್ನು ಹಾಕಿ, ಧೂಪವನ್ನು ಅದರ ಮೇಲೆ ಹಾಕಿ, ದೇವದರ್ಶನ ಗುಡಾರದ ಬಾಗಿಲಿನ ಮುಂದೆ ಮೋಶೆ ಆರೋನರ ಸಂಗಡ ನಿಂತರು.


ಅಭಿಷೇಕಿಸುವ ತೈಲ, ಪರಿಶುದ್ಧ ಸ್ಥಳಕ್ಕೋಸ್ಕರವಿರುವ ಪರಿಮಳ ಧೂಪ. “ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು,” ಎಂದರು.


ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?


ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.


ಅನಂತರ ಅವರು ಸುಗಂಧಕಾರನ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮತ್ತು ಪರಿಮಳ ದ್ರವ್ಯದಿಂದ ಶುದ್ಧವಾದ ಧೂಪವನ್ನು ತಯಾರಿಸಿದರು.


ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೆ ಒಂದೇ ಸಾರಿ ಪ್ರವೇಶಿಸುತ್ತಿದ್ದನು. ಅವನು ರಕ್ತವನ್ನು ತೆಗೆದುಕೊಳ್ಳದೆ ಎಂದಿಗೂ ಹೋಗುತ್ತಿರಲಿಲ್ಲ. ಬಲಿಯ ರಕ್ತವನ್ನು ತನಗೋಸ್ಕರವೂ ಜನರು ತಿಳಿಯದೆ ಮಾಡಿದ ಪಾಪಗಳಿಗೋಸ್ಕರವೂ ಸಮರ್ಪಿಸುತ್ತಿದ್ದನು.


ಆಗ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಬಲಿಪೀಠದ ಬೆಂಕಿಯಿಂದ ಅದನ್ನು ತುಂಬಿಸಿ, ಭೂಮಿಯ ಮೇಲೆ ಎಸೆದನು. ಆಗ ಗುಡುಗುಗಳೂ ಸಪ್ಪಳವೂ ಮಿಂಚುಗಳೂ ಮತ್ತು ಭೂಕಂಪವೂ ಉಂಟಾದವು.


ಅವನು ಯಾಕೋಬನಿಗೆ ನಿಮ್ಮ ಸೂತ್ರಗಳನ್ನೂ, ಇಸ್ರಾಯೇಲರಿಗೆ ನಿಮ್ಮ ನಿಯಮವನ್ನೂ ಬೋಧಿಸುವನು. ನಿಮ್ಮ ಮುಂದೆ ಧೂಪವನ್ನೂ ನಿಮ್ಮ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಸಮರ್ಪಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು