ಯಾಜಕಕಾಂಡ 16:18 - ಕನ್ನಡ ಸಮಕಾಲಿಕ ಅನುವಾದ18 “ಅವನು ಯೆಹೋವ ದೇವರ ಎದುರಿನಲ್ಲಿರುವ ಬಲಿಪೀಠದ ಬಳಿಗೆ ಬಂದು, ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಹೋರಿಯ ರಕ್ತವನ್ನೂ, ಹೋತದ ರಕ್ತವನ್ನೂ ತೆಗೆದುಕೊಂಡು ಬಲಿಪೀಠದ ಸುತ್ತಲೂ ಇರುವ ಕೊಂಬುಗಳಿಗೆ ಹಚ್ಚಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ತರುವಾಯ ಅವನು ಹೊರಗೆ ಬಂದು ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯ ಬಳಿಗೆ ಹೋಗಿ ಅದಕ್ಕಾಗಿ ದೋಷಪರಿಹಾರ ಮಾಡಬೇಕು. ಆ ಹೋರಿಯ ರಕ್ತದಲ್ಲಿಯೂ ಹಾಗೂ ಆ ಹೋತದ ರಕ್ತದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ತರುವಾಯ ಅವನು ಹೊರಗೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿರುವ ಬಲಿಪೀಠದ ಬಳಿಗೆ ಹೋಗಿ ಅದಕ್ಕಾಗಿ ದೋಷಪರಿಹಾರ ಮಾಡಬೇಕು. ಆ ಹೋರಿಯ ರಕ್ತದಲ್ಲೂ ಆ ಹೋತದ ರಕ್ತದಲ್ಲೂ ಸ್ವಲ್ಪ ಸ್ವಲ್ಪತೆಗೆದುಕೊಂಡು ಪೀಠದ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ತರುವಾಯ ಅವನು ಹೊರಗೆ ಬಂದು ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯ ಬಳಿಗೆ ಹೋಗಿ ಅದಕ್ಕಾಗಿ ದೋಷಪರಿಹಾರ ಮಾಡಬೇಕು. ಆ ಹೋರಿಯ ರಕ್ತದಲ್ಲಿಯೂ ಆ ಹೋತನ ರಕ್ತದಲ್ಲಿಯೂ ಸ್ವಲ್ಪ ಸ್ವಲ್ಪ ತೆಗೆದುಕೊಂಡು ವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ತರುವಾಯ ಆರೋನನು ಹೊರಗೆ ಬಂದು ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಕೆಯ ಬಳಿಗೆ ಹೋಗುವನು. ಆರೋನನು ಯಜ್ಞವೇದಿಕೆಯನ್ನು ಶುದ್ಧೀಕರಿಸುವನು. ಆರೋನನು ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ಮತ್ತು ಹೋತದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಕೆಯ ಎಲ್ಲಾ ಮೂಲೆಗಳಿಗೆ ಹಚ್ಚುವನು. ಅಧ್ಯಾಯವನ್ನು ನೋಡಿ |