ಯಾಜಕಕಾಂಡ 16:22 - ಕನ್ನಡ ಸಮಕಾಲಿಕ ಅನುವಾದ22 ಆ ಹೋತ ಅವರ ಎಲ್ಲಾ ಪಾಪಗಳನ್ನೂ ತನ್ನ ಮೇಲೆ ಹೊತ್ತುಕೊಂಡು ನಿರ್ಜನವಾದ ಸ್ಥಳಕ್ಕೆ ತೆಗೆದುಕೊಂಡು ಹೋಗುವಂತೆ ಆ ಮನುಷ್ಯನು ಹೋತವನ್ನು ಅಡವಿಗೆ ತೆಗೆದುಕೊಂಡುಹೋಗಿ ಅಲ್ಲೇ ಬಿಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆ ಹೋತ ಅವರ ಎಲ್ಲಾ ಪಾಪಗಳನ್ನು ತನ್ನ ಮೇಲೆ ಹೊತ್ತುಕೊಂಡು ನಿರ್ಜನವಾದ ಪ್ರದೇಶಕ್ಕೆ ಹೋಗುವಂತೆ ಆ ಮನುಷ್ಯನು ಅದನ್ನು ಅರಣ್ಯಕ್ಕೆ ತೆಗೆದುಕೊಂಡುಹೋಗಿ ಅಲ್ಲೇ ಬಿಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆ ಹೋತ ಅವರ ಎಲ್ಲಾ ಪಾಪಗಳನ್ನೂ ತನ್ನ ಮೇಲೆ ಹೊತ್ತುಕೊಂಡು ದುರ್ಗಮವಾದ ಪ್ರದೇಶಕ್ಕೆ ಒಯ್ಯುವಂತೆ ಆ ಮನುಷ್ಯನು ಅದನ್ನು ಮರುಭೂಮಿಗೆ ತೆಗೆದುಕೊಂಡುಹೋಗಿ ಅಲ್ಲೇ ಬಿಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆ ಹೋತ ಅವರ ಎಲ್ಲಾ ಪಾಪಗಳನ್ನೂ ತನ್ನ ಮೇಲೆ ಹೊತ್ತುಕೊಂಡು ದುರ್ಗಮವಾದ ಪ್ರದೇಶಕ್ಕೆ ಒಯ್ಯುವಂತೆ ಆ ಮನುಷ್ಯನು ಅದನ್ನು ಅರಣ್ಯಕ್ಕೆ ತೆಗೆದುಕೊಂಡುಹೋಗಿ ಅಲ್ಲೇ ಬಿಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಹೀಗೆ ಹೋತವು ಜನರ ಪಾಪಗಳನ್ನು ಹೊತ್ತುಕೊಂಡು ಬರಿದಾದ ಮರುಭೂಮಿಗೆ ಹೋಗುವುದು. ಹೋತವನ್ನು ನಡಿಸಿಕೊಂಡು ಹೋಗುವ ಮನುಷ್ಯನು ಮರುಭೂಮಿಯಲ್ಲಿ ಅದನ್ನು ಬಿಟ್ಟುಬಿಡುವನು. ಅಧ್ಯಾಯವನ್ನು ನೋಡಿ |