Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:29 - ಕನ್ನಡ ಸಮಕಾಲಿಕ ಅನುವಾದ

29 “ಇದು ನಿಮಗೆ ಶಾಶ್ವತವಾದ ನಿಯಮ: ಸ್ವದೇಶೀಯರಾದ ನೀವೂ, ನಿಮ್ಮೊಡನೆ ವಾಸಿಸುತ್ತಿರುವ ಪರಕೀಯರೂ, ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಎಲ್ಲಾ ಕೆಲಸಗಳನ್ನು ಬಿಟ್ಟು, ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ಸ್ವದೇಶಸ್ಥರಾದ ನೀವೂ ಮತ್ತು ನಿಮ್ಮಲ್ಲಿ ವಾಸವಾಗಿರುವ ಅನ್ಯದೇಶದವರು, ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನು ಬಿಟ್ಟು ಉಪವಾಸಮಾಡಿ ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು. ಇದು ನಿಮಗೆ ಶಾಶ್ವತವಾದ ನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಇದು ನಿಮಗೆ ಶಾಶ್ವತವಾದ ನಿಯಮ: ಸ್ವದೇಶೀಯರಾದ ನೀವೂ ನಿಮ್ಮಲ್ಲಿ ವಾಸಮಾಡುವ ಅನ್ಯದೇಶದವರೆಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನ ಸಕಲ ವಿಧವಾದ ದುಡಿಮೆಗಳನ್ನೂ ಬಿಟ್ಟು ತಮ್ಮನ್ನೇ ಪರಿತ್ಯಜಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇದು ನಿಮಗೆ ಶಾಶ್ವತವಾದ ನಿಯಮ; ಯಾವದಂದರೆ ಸ್ವದೇಶಸ್ಥರಾದ ನೀವೂ ನಿಮ್ಮಲ್ಲಿ ಇಳುಕೊಂಡಿರುವ ಅನ್ಯದೇಶದವರೂ ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನೂ ಬಿಟ್ಟು [ಉಪವಾಸಮಾಡಿ] ಪ್ರಾಣವನ್ನು ಕುಂದಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಇದು ನಿಮಗೆ ಶಾಶ್ವತವಾದ ಕಟ್ಟಳೆ: ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಆಹಾರವನ್ನು ತೆಗೆದುಕೊಳ್ಳದೆ ಉಪವಾಸ ಮಾಡಬೇಕು. ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ದೇಶದಲ್ಲಿ ವಾಸಿಸುವ ಪ್ರವಾಸಿಗರಾಗಲಿ ಪರದೇಶಸ್ಥರಾಗಲಿ ಯಾವ ಕೆಲಸವನ್ನು ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:29
28 ತಿಳಿವುಗಳ ಹೋಲಿಕೆ  

‘ನಾವು ಉಪವಾಸ ಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸಲಿಲ್ಲ?’ ‘ನಮ್ಮ ಪ್ರಾಣವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ?’ ಎಂದು ಅವರು ಅಂದುಕೊಳ್ಳುತ್ತಾರೆ. “ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ಇಷ್ಟದ ಕೆಲಸವನ್ನು ನಡೆಸಿ ಮತ್ತು ನಿಮ್ಮ ಕೆಲಸದವರನ್ನು ದುಡಿತಕ್ಕೆ ಎಳೆಯುತ್ತೀರಿ.


“ ‘ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯನ್ನು ಕೂಡಿಸಬೇಕು. ನೀವು ಎಲ್ಲವನ್ನು ವರ್ಜಿಸಿ, ಯಾವ ಕೆಲಸವನ್ನೂ ಮಾಡಬಾರದು.


ಆಗ ಅವನು ನನಗೆ, “ದಾನಿಯೇಲನೇ, ನೀನು ಭಯಪಡಬೇಡ. ಏಕೆಂದರೆ ನೀನು ತಿಳಿದುಕೊಳ್ಳುವುದಕ್ಕೂ, ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳುವುದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಪ್ರಾರ್ಥನೆಯು ದೇವರಿಗೆ ಮುಟ್ಟಿತು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ.


ನಾನು ಆಯ್ದುಕೊಂಡದ್ದು ಇಂಥಾ ಉಪವಾಸವೋ? ಒಬ್ಬನು ಜೊಂಡಿನಂತೆ ತಲೆಯನ್ನು ಬಗ್ಗಿಸಿಕೊಳ್ಳುವುದು, ಗೋಣಿತಟ್ಟನ್ನು ಉಟ್ಟುಕೊಳ್ಳುವುದು, ಬೂದಿಯ ಗುಂಡಿಯಲ್ಲಿ ಕುಳಿತುಕೊಳ್ಳುವುದು, ಇವು ಯೆಹೋವ ದೇವರಿಗೆ ಮೆಚ್ಚಿಗೆಯಾಗುವ ಉಪವಾಸ ಎನ್ನುತ್ತೀರೋ?


ನಾನಾದರೋ ಅವರು ಅಸ್ವಸ್ಥರಾದಾಗ ಗೋಣಿತಟ್ಟು ಹೊದ್ದುಕೊಂಡು ಉಪವಾಸದಿಂದ ತಗ್ಗಿಸಿಕೊಂಡೆನು; ನನ್ನ ಪ್ರಾರ್ಥನೆಗಳಿಗೆ ಉತ್ತರ ದೊರೆಯಲಿಲ್ಲ.


ಏಳು ದಿವಸ ನೀವು ಬೆಂಕಿಯ ಮೂಲಕ ಬಲಿಗಳನ್ನು ಯೆಹೋವ ದೇವರಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿಶುದ್ಧ ಕೂಟವಾಗಿರುವುದು. ನೀವು ಬೆಂಕಿಯ ಮೂಲಕ ಬಲಿಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು. ಅದೊಂದು ಗಂಭೀರ ಸಭೆಯಾಗಿರುವುದು. ಅದರಲ್ಲಿ ನೀವು ಕಷ್ಟಕರವಾದ ಕೆಲಸಗಳನ್ನು ಮಾಡಬಾರದು.


ಅದೇ ದಿನದಲ್ಲಿ ಪವಿತ್ರ ಸಭೆ ಕೂಡುವುದೆಂದು ಪ್ರಕಟಿಸಬೇಕು ಮತ್ತು ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ, ನೀವು ಎಲ್ಲೇ ಇದ್ದರೂ ಪಾಲಿಸಬೇಕಾದ ಶಾಶ್ವತ ನಿಯಮ.


ಆದರೆ ಏಳನೆಯ ದಿನ ನಿನ್ನ ದೇವರಾದ ಯೆಹೋವ ದೇವರ ಸಬ್ಬತ್ ದಿನವಾಗಿದೆ. ಅದರಲ್ಲಿ ನೀನಾಗಲೀ, ನಿನ್ನ ಮಗನಾಗಲೀ, ನಿನ್ನ ಮಗಳಾಗಲೀ, ನಿನ್ನ ದಾಸನಾಗಲೀ, ನಿನ್ನ ದಾಸಿಯಾಗಲೀ, ನಿನ್ನ ಪಶುಗಳಾಗಲೀ ಮತ್ತು ನಿನ್ನ ಊರಲ್ಲಿರುವ ಅನ್ಯದೇಶದವರು ಸಹ ಯಾವ ಕೆಲಸವನ್ನೂ ಮಾಡಬಾರದು.


ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿ ವಿಶ್ರಾಂತಿ ಪಡೆದಂತೆ, ದೇವರ ವಿಶ್ರಾಂತಿಯನ್ನು ಪಡೆದವರು ಸಹ ತಮ್ಮ ಕೆಲಸ ಕಾರ್ಯಗಳನ್ನು ಮುಗಿಸಿ ವಿಶ್ರಾಂತಿ ಪಡೆಯುತ್ತಾರೆ.


ನಮ್ಮನ್ನು ನಾವೇ ತೀರ್ಪುಮಾಡಿಕೊಂಡರೆ, ನಾವು ನ್ಯಾಯವಿಚಾರಣೆಗೆ ಒಳಗಾಗುವುದಿಲ್ಲ.


ಆ ಮೂರು ವಾರಗಳು ಕಳೆಯುವವರೆಗೂ, ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸವನ್ನಾದರೂ, ದ್ರಾಕ್ಷಾರಸವನ್ನಾದರೂ ನನ್ನ ಬಾಯಿಗೆ ಮುಟ್ಟಿಸಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ.


“ನೀನು ಸಬ್ಬತ್ ದಿನದಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟವನ್ನು ಮಾಡದೆ ಹೋದರೆ, ಸಬ್ಬತ್ ದಿನವನ್ನು ಆನಂದಕರವಾದದ್ದೆಂದೂ, ಯೆಹೋವ ದೇವರ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ, ಸ್ವಂತ ಇಷ್ಟಗಳನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,


ನಾನು ಅತ್ತು ಉಪವಾಸ ಮಾಡಿದಾಗ ನಿಂದೆಗೆ ಒಳಗಾಗಬೇಕಾಯಿತು.


ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲರು, ಏಳನೆಯ ತಿಂಗಳಿನಲ್ಲಿ ಏಕಮನಸ್ಸಿನಿಂದ ಯೆರೂಸಲೇಮಿಗೆ ಕೂಡಿಬಂದರು.


ಯಥನಿಮ ತಿಂಗಳಲ್ಲಿ ಹಬ್ಬವಿದ್ದಾಗ, ಇಸ್ರಾಯೇಲಿನ ಸಮಸ್ತ ಜನರು ಅರಸನಾದ ಸೊಲೊಮೋನನ ಬಳಿಗೆ ಕೂಡಿಬಂದರು.


“ ‘ಆರು ದಿವಸ ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ಸಬ್ಬತ್ ದಿನ. ಆ ದಿನವು ಪರಿಶುದ್ಧ ದಿನವಾಗಿರುವುದು. ನೀವು ಆ ದಿನದಲ್ಲಿ ಕೆಲಸಮಾಡಬಾರದು. ನಿಮ್ಮ ಎಲ್ಲಾ ನಿವಾಸಗಳಲ್ಲಿಯೂ ಅದು ಯೆಹೋವ ದೇವರ ಸಬ್ಬತ್ ದಿನವಾಗಿರುವುದು.


ಆರೋನನು ಮತ್ತು ಅವನ ಸಂತತಿಯವರು ವರ್ಷಕ್ಕೆ ಒಂದು ಸಾರಿ ಪಾಪ ಪರಿಹಾರದ ಬಲಿಯ ರಕ್ತದಿಂದ ಅದರ ಕೊಂಬುಗಳಿಗೆ ಹಚ್ಚಿ ಪ್ರಾಯಶ್ಚಿತ್ತ ಮಾಡಬೇಕು. ಅದು ಯೆಹೋವ ದೇವರಿಗೆ ಮಹಾಪರಿಶುದ್ಧವಾದದ್ದು.”


ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು, ಏಳನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಬೇಕು. ಊಟಕ್ಕೆ ಬೇಕಾದದ್ದನ್ನು ಮಾಡುವುದನ್ನು ಬಿಟ್ಟು, ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡಬಾರದು.


ಬಹಳ ಸಮಯ ಕಳೆದುಹೋಯಿತು. ದೋಷಪರಿಹಾರದ ದಿನವು ಸಹ ಮುಗಿದು ಹೋಯಿತು. ಈ ಸಂದರ್ಭದಲ್ಲಿ ಸಮುದ್ರ ಪ್ರಯಾಣ ಅಪಾಯಕರವಾಗಿದ್ದುದರಿಂದ ಪೌಲನು,


“ ‘ಹೀಗಿರುವುದರಿಂದ ನೀವು ಸಬ್ಬತ್ ದಿನವನ್ನು ಕೈಗೊಳ್ಳಬೇಕು. ಏಕೆಂದರೆ ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರ ಮಾಡುವ ಪ್ರತಿಯೊಬ್ಬನು ಸಾಯಲೇಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ, ಅವರನ್ನು ನಿಮ್ಮ ಜನರೊಳಗಿಂದ ತೆಗೆದುಹಾಕಬೇಕು.


ಆರು ದಿವಸ ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ಯೆಹೋವ ದೇವರಿಗೆ ಪರಿಶುದ್ಧವಾದ ಸಬ್ಬತ್ ದಿನ. ಆ ಸಬ್ಬತ್ ದಿನದಲ್ಲಿ ಕೆಲಸ ಮಾಡುವವರೆಲ್ಲಾ ಸಾಯಲೇಬೇಕು.


“ ‘ನೀವು ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನದೆ ಇರುವುದು ನಿಮ್ಮ ಸಂತತಿಯವರಿಗೆಲ್ಲಾ ನಿಮ್ಮ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವುದು,’ ” ಎಂದು ಹೇಳಿದರು.


ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟಾಗಿ ಕೂಡಿಬಂದು, ಯೆಹೋವ ದೇವರ ಮುಂದೆ ನೀರು ತಂದು ಹೊಯ್ದು, ಆ ದಿವಸದಲ್ಲಿ ಉಪವಾಸ ಮಾಡಿ, “ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇವೆ” ಎಂದು ಅಲ್ಲಿ ಹೇಳಿದರು. ಸಮುಯೇಲನು ಇಸ್ರಾಯೇಲರಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.


ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಳ್ಳುವುದಕ್ಕೂ, ನಮಗೂ ನಮ್ಮ ಮಕ್ಕಳಿಗೂ, ನಮ್ಮ ಎಲ್ಲಾ ಸ್ಥಿತಿಗೂ ಅವರಿಂದ ಸರಿಯಾದ ಮಾರ್ಗವನ್ನು ಹುಡುಕುವುದಕ್ಕೂ, ನಾನು ಅಲ್ಲಿ ಅಹಾವ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಪ್ರಕಟಿಸಿದೆನು.


ಇದಾದ ಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಐವತ್ತನೆಯ ವಾರ್ಷಿಕೋತ್ಸವಕ್ಕೆ ತುತೂರಿಯನ್ನು ಊದಿಸಬೇಕು. ಪ್ರಾಯಶ್ಚಿತ್ತದ ದಿನದಲ್ಲಿ ನಿಮ್ಮ ದೇಶದ ಎಲ್ಲಾ ಕಡೆಗಳಲ್ಲಿ ತುತೂರಿಯನ್ನು ಊದಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು