Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:30 - ಕನ್ನಡ ಸಮಕಾಲಿಕ ಅನುವಾದ

30 ನೀವು ಯೆಹೋವ ದೇವರ ಸನ್ನಿಧಿಯಲ್ಲಿ ನಿಮ್ಮ ಎಲ್ಲಾ ಪಾಪಗಳಿಂದ ಶುದ್ಧರಾಗಿರುವಂತೆ ನಿಮ್ಮನ್ನು ಶುದ್ಧೀಕರಿಸುವ ಹಾಗೆ, ಆ ದಿನದಲ್ಲಿ ಯಾಜಕನು ನಿಮಗೋಸ್ಕರ ಪ್ರಾಯಶ್ಚಿತ್ತವನ್ನು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಏಕೆಂದರೆ ನೀವು ಪರಿಶುದ್ಧರಾಗುವುದಕ್ಕಾಗಿ ಈ ದಿನದಲ್ಲಿ ನಿಮಗೋಸ್ಕರ ದೋಷಪರಿಹಾರವಾಗುವುದು, ಯೆಹೋವನ ದೃಷ್ಟಿಯಲ್ಲಿ ನಿಮ್ಮ ಎಲ್ಲಾ ದೋಷಗಳು ನಿವಾರಣೆಯಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಏಕೆಂದರೆ ನೀವು ಪರಿಶುದ್ಧರಾಗುವಂತೆ ಈ ದಿನ ನಿಮ್ಮ ಪರವಾಗಿ ಪ್ರಾಯಶ್ಚಿತ್ತ ಮಾಡಲಾಗುವುದು. ಸರ್ವೇಶ್ವರನ ದೃಷ್ಟಿಯಲ್ಲಿ ನಿಮ್ಮ ಎಲ್ಲಾ ದೋಷಗಳು ನಿವಾರಣೆಯಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯಾಕಂದರೆ ನೀವು ಪರಿಶುದ್ಧರಾಗುವದಕ್ಕಾಗಿ ಈ ದಿನದಲ್ಲಿ ನಿಮಗೋಸ್ಕರ ದೋಷಪರಿಹಾರವಾಗುವದು, ಯೆಹೋವನ ದೃಷ್ಟಿಯಲ್ಲಿ ನಿಮ್ಮ ಎಲ್ಲಾ ದೋಷಗಳು ನಿವಾರಣೆಯಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯಾಕೆಂದರೆ ಈ ದಿನದಲ್ಲಿ ಯಾಜಕನು ನಿಮ್ಮನ್ನು ಶುದ್ಧೀಕರಿಸಲು ನಿಮಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ನೀವು ಯೆಹೋವನಿಗಾಗಿ ನಿಮ್ಮ ಎಲ್ಲಾ ಪಾಪಗಳಿಂದ ಬಿಡುಗಡೆಯಾಗಿ ಪರಿಶುದ್ಧರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:30
12 ತಿಳಿವುಗಳ ಹೋಲಿಕೆ  

ಅವರು ಯಾವುದರಿಂದ ನನಗೆ ವಿರೋಧವಾಗಿ ಪಾಪ ಮಾಡಿದರೋ, ಆ ಅಕ್ರಮದಿಂದೆಲ್ಲಾ ಅವರನ್ನು ಶುದ್ಧಮಾಡುವೆನು. ಅವರು ಯಾವವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದಾರೋ, ಆ ಅಕ್ರಮಗಳನ್ನೆಲ್ಲಾ ಮನ್ನಿಸುವೆನು.


ಕ್ರಿಸ್ತ ಯೇಸು ತಮ್ಮ ಸಭೆಯನ್ನು ವಾಕ್ಯದ ನೀರಿನ ಸ್ನಾನದಿಂದ ಪವಿತ್ರಗೊಳಿಸಿ, ಶುದ್ಧಮಾಡಿ,


ನನ್ನ ಎಲ್ಲಾ ಅಪರಾಧಗಳಿಂದ ನನ್ನನ್ನು ತೊಳೆದುಬಿಡಿರಿ; ನನ್ನ ಪಾಪದಿಂದ ನನ್ನನ್ನು ಶುದ್ಧಮಾಡಿರಿ.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ಓ ದೇವರೇ, ಶುದ್ಧ ಹೃದಯವನ್ನು ನನ್ನಲ್ಲಿ ಸೃಷ್ಟಿಮಾಡಿರಿ, ಸ್ಥಿರವಾದ ಆತ್ಮವನ್ನು ನನ್ನಲ್ಲಿ ನವೀಕರಿಸಿರಿ.


ಹಿಸ್ಸೋಪಿನಿಂದ ನನ್ನನ್ನು ಶುಚಿಮಾಡಿರಿ, ಆಗ ನಾನು ಶುದ್ಧನಾಗುವೆನು. ನನ್ನನ್ನು ತೊಳೆಯಿರಿ, ಆಗ ಹಿಮಕ್ಕಿಂತ ಬೆಳ್ಳಗಾಗುವೆನು.


“ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿರುವುದು. ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವುದು. ನೀವು ಉಪವಾಸ ಮಾಡಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು.


ಆ ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಏಕೆಂದರೆ ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಯೆಹೋವ ದೇವರ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು