ಯಾಜಕಕಾಂಡ 16:32 - ಕನ್ನಡ ಸಮಕಾಲಿಕ ಅನುವಾದ32 ಯಾವನು ತನ್ನ ತಂದೆಯ ಬದಲಾಗಿ ಮಹಾಯಾಜಕ ಉದ್ಯೋಗಕ್ಕೋಸ್ಕರ ಅಭಿಷಿಕ್ತನಾಗಿ ಪ್ರತಿಷ್ಟಿಸಲಾಗಿದ್ದಾನೋ, ಆ ಮಹಾಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. ಅವನು ಪರಿಶುದ್ಧ ಉಡುಪುಗಳಾದ ನಾರು ಬಟ್ಟೆಗಳನ್ನು ಧರಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 “ಆರೋನನ ವಂಶದವರಲ್ಲಿ ಯಾವನಿಗೆ ಪಿತೃಸ್ಥಾನದಲ್ಲಿ ಮಹಾಯಾಜಕನ ಸೇವಾವೃತ್ತಿಯನ್ನು ನಡೆಸುವುದಕ್ಕೆ ಪಟ್ಟಾಭಿಷೇಕವಾಗುವುದೋ ಅವನೇ ಈ ದೋಷಪರಿಹಾರ ಕಾರ್ಯವನ್ನು ಆಚರಿಸಬೇಕು. ಅವನೇ ಆ ಪರಿಶುದ್ಧವಾದ ನಾರುಮಡಿಗಳನ್ನು ಧರಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಆರೋನನ ವಂಶದವರಲ್ಲಿ ಯಾವನಿಗೆ ಪಿತೃಸ್ಥಾನದಲ್ಲಿ ಮಹಾಯಾಜಕನ ಸೇವಾವೃತ್ತಿಯನ್ನು ನಡೆಸುವುದಕ್ಕೆ ಪಟ್ಟಾಭಿಷೇಕವಾಗುವುದೋ ಅವನೇ ಈ ದೋಷಪರಿಹಾರ ಕಾರ್ಯವನ್ನು ನೆರವೇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 [ಆರೋನನ ವಂಶದವರಲ್ಲಿ] ಯಾವನಿಗೆ ಪಿತೃಸ್ಥಾನದಲ್ಲಿ ಮಹಾಯಾಜಕನ ಉದ್ಯೋಗವನ್ನು ನಡಿಸುವದಕ್ಕೆ ಪಟ್ಟಾಭಿಷೇಕವಾಗುವದೋ ಅವನೇ ಈ ದೋಷಪರಿಹಾರಕಾರ್ಯವನ್ನು ಆಚರಿಸಬೇಕು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 “ಆದ್ದರಿಂದ ಪ್ರಧಾನಯಾಜಕನಾಗಿ ಆರಿಸಲ್ಪಟ್ಟವನು ವಸ್ತುಗಳನ್ನು ಶುದ್ಧೀಕರಿಸಲು ಈ ಆಚರಣೆಯನ್ನು ಮಾಡಬೇಕು. ಈತನು ತನ್ನ ತಂದೆಯ ನಂತರ ಪ್ರಧಾನಯಾಜಕನಾಗಿ ಸೇವೆಮಾಡುವುದಕ್ಕೆ ನೇಮಿಸಲ್ಪಟ್ಟವನಾಗಿದ್ದಾನೆ. ಆ ಯಾಜಕನು ಪವಿತ್ರವೂ ಶ್ರೇಷ್ಠವೂ ಆಗಿರುವ ನಾರುಬಟ್ಟೆಯನ್ನು ಧರಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿ |