Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:7 - ಕನ್ನಡ ಸಮಕಾಲಿಕ ಅನುವಾದ

7 ಅವನು ಎರಡು ಹೋತಗಳನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲ ಬಳಿಗೆ ತಂದು, ಅವುಗಳನ್ನು ಯೆಹೋವ ದೇವರ ಎದುರಿನಲ್ಲಿ ನಿಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಎರಡು ಹೋತಗಳನ್ನು ಅವನು ದೇವದರ್ಶನದ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆ ಎರಡು ಹೋತಗಳನ್ನು ಅವನು ದೇವದರ್ಶನದ ಗುಡಾರದ ಬಾಗಿಲಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲಿ ನಿಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ಎರಡು ಹೋತಗಳನ್ನು ಅವನು ದೇವದರ್ಶನದ ಗುಡಾರದ ಬಾಗಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ತರುವಾಯ ಆರೋನನು ಆ ಎರಡು ಹೋತಗಳನ್ನು ತೆಗೆದುಕೊಂಡು ಅವುಗಳನ್ನು ದೇವದರ್ಶನಗುಡಾರದ ಬಾಗಿಲಿನಲ್ಲಿ ಯೆಹೋವನ ಸನ್ನಿಧಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:7
7 ತಿಳಿವುಗಳ ಹೋಲಿಕೆ  

ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು.


ತಾವು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ಬಹು ಕಷ್ಟಗಳನ್ನು ಅನುಭವಿಸಿ ಕೊಲೆಗೀಡಾಗಿ ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದು ಬರುವುದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತಮ್ಮ ಶಿಷ್ಯರಿಗೆ ತಿಳಿಸಲಾರಂಭಿಸಿದರು.


ಅವನು ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಎದುರಿಗೆ ತರಬೇಕು. ತನ್ನ ಕೈಯನ್ನು ಆ ಹೋರಿಯ ತಲೆಯ ಮೇಲಿಟ್ಟು, ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು.


“ ‘ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ, ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಯೆಹೋವ ದೇವರಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.


“ಇದಲ್ಲದೆ ಆರೋನನು ತನಗೋಸ್ಕರ ಪಾಪ ಪರಿಹಾರದ ಬಲಿಗಾಗಿ ತನ್ನ ಹೋರಿಯನ್ನು ಸಮರ್ಪಿಸಿ, ತನ್ನ ಮನೆಯವರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಬೇಕು.


ಆರೋನನು ಆ ಎರಡು ಹೋತಗಳಿಗಾಗಿ ಚೀಟುಹಾಕಬೇಕು. ಒಂದು ಚೀಟು ಯೆಹೋವ ದೇವರಿಗೋಸ್ಕರ, ಮತ್ತೊಂದು ಚೀಟು ಬಲಿಪಶುವಿಗೋಸ್ಕರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು