Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:8 - ಕನ್ನಡ ಸಮಕಾಲಿಕ ಅನುವಾದ

8 ಆರೋನನು ಆ ಎರಡು ಹೋತಗಳಿಗಾಗಿ ಚೀಟುಹಾಕಬೇಕು. ಒಂದು ಚೀಟು ಯೆಹೋವ ದೇವರಿಗೋಸ್ಕರ, ಮತ್ತೊಂದು ಚೀಟು ಬಲಿಪಶುವಿಗೋಸ್ಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಅವನು ಆ ಹೋತಗಳಲ್ಲಿ ಒಂದು ಯೆಹೋವನಿಗೋಸ್ಕರವೆಂದು ಮತ್ತೊಂದು ಅಜಾಜೇಲನಿಗೋಸ್ಕರವೆಂದು ಚೀಟುಗಳನ್ನು ಬರೆದು ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಅವನು ಆ ಹೋತಗಳಲ್ಲಿ ಯಾವುದು ಸರ್ವೇಶ್ವರನಿಗೆ, ಯಾವುದು ಅಜಾಜೇಲನಿಗೆ ಎಂದು ತಿಳಿದುಕೊಳ್ಳಲು ದಾಳಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಅವನು ಆ ಹೋತಗಳ ವಿಷಯವಾಗಿ ಯೆಹೋವನಿಗೋಸ್ಕರವೆಂದೂ ಅಜಾಜೇಲನಿಗೋಸ್ಕರವೆಂದೂ ಚೀಟುಗಳನ್ನು ಬರೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆರೋನನು ಚೀಟುಹಾಕಿ ಒಂದು ಹೋತವನ್ನು ಯೆಹೋವನಿಗಾಗಿಯೂ ಇನ್ನೊಂದನ್ನು ಅಜಾಜೇಲನಿಗಾಗಿಯೂ ಎಂದು ನಿರ್ಧರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:8
12 ತಿಳಿವುಗಳ ಹೋಲಿಕೆ  

ಆಗ ನಾವಿಕರು ಒಬ್ಬರಿಗೊಬ್ಬರು, “ಬನ್ನಿ, ಚೀಟುಗಳನ್ನು ಹಾಕೋಣ. ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ,” ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟುಗಳನ್ನು ಹಾಕಿದಾಗ, ಯೋನನ ಮೇಲೆ ಚೀಟು ಬಿತ್ತು.


ಉಡಿಯಲ್ಲಿ ಚೀಟು ಹಾಕಬಹುದು, ಆದರೆ ಪ್ರತಿ ತೀರ್ಪು ಯೆಹೋವ ದೇವರದ್ದೇ.


“ನೀವು ಇಸ್ರಾಯೇಲಿನ ಗೋತ್ರಗಳಿಗೆ ಚೀಟುಹಾಕಿ ಬಾಧ್ಯವಾಗಿ ಹಂಚಿಕೊಡಬೇಕಾದ ದೇಶವು ಇದೆ. ಅದರ ಭಾಗಗಳು ಇವೇ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟುಹಾಕಿ, ಸ್ವಾಧೀನಮಾಡಿ ಹಂಚಿಕೊಳ್ಳಬೇಕು. ಹೆಚ್ಚಾದವರಿಗೆ ಸೊತ್ತನ್ನು ಹೆಚ್ಚಿಸಿ, ಕಡಿಮೆಯಾದವರಿಗೆ ಸೊತ್ತನ್ನು ಕಡಿಮೆ ಮಾಡಬೇಕು. ಒಬ್ಬೊಬ್ಬನಿಗೆ ಚೀಟು ಎಲ್ಲಿ ಬೀಳುವುದೋ, ಅದೇ ಅವನಿಗಾಗಬೇಕು. ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು.


ಇದಲ್ಲದೆ ಚೀಟು ಹಾಕುವುದರಿಂದ ದೇಶವನ್ನು ಪಾಲುಮಾಡಬೇಕು. ತಮ್ಮ ಗೋತ್ರಗಳ ಕುಟುಂಬಗಳ ಹೆಸರುಗಳ ಪ್ರಕಾರ ಅವರು ತಮ್ಮ ಪಾಲನ್ನು ಪಡೆಯಬೇಕು.


ಅವನು ಎರಡು ಹೋತಗಳನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲ ಬಳಿಗೆ ತಂದು, ಅವುಗಳನ್ನು ಯೆಹೋವ ದೇವರ ಎದುರಿನಲ್ಲಿ ನಿಲ್ಲಿಸಬೇಕು.


ಆರೋನನು ಯೆಹೋವ ದೇವರ ಚೀಟು ಬಿದ್ದ ಹೋತವನ್ನು ತಂದು, ಅದನ್ನು ಪಾಪ ಪರಿಹಾರದ ಬಲಿಗಾಗಿ ಸಮರ್ಪಿಸಬೇಕು.


ಆದರೆ ಬಲಿಪಶುವಿಗಾಗಿ ಚೀಟು ಬಿದ್ದ ಆ ಹೋತವನ್ನು ತನ್ನೊಂದಿಗೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ಸಜೀವವಾಗಿ ನಿಲ್ಲಿಸಿ, ಅದನ್ನು ಬಲಿಪಶುವಾಗಿ ಕಾಡಿನಲ್ಲಿ ಹೋಗುವಂತೆ ಬಿಟ್ಟುಬಿಡಬೇಕು.


“ಬಲಿಪಶುವಿಗಾಗಿ ಹೋತವನ್ನು ಹೋಗಲು ಬಿಟ್ಟವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಿದ ಮೇಲೆ ಅವನು ಪಾಳೆಯದೊಳಕ್ಕೆ ಬರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು