Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 17:11 - ಕನ್ನಡ ಸಮಕಾಲಿಕ ಅನುವಾದ

11 ಏಕೆಂದರೆ ದೇಹದ ಜೀವವು ರಕ್ತದೊಳಗೆ ಇರುತ್ತದೆ ಮತ್ತು ನಾನು ಅದನ್ನು ನಿಮ್ಮ ಆತ್ಮಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಬಲಿಪೀಠದ ಮೇಲೆ ನಿಮಗೆ ಕೊಟ್ಟಿದ್ದೇನೆ. ಪ್ರಾಣಕ್ಕೆ ಪ್ರಾಯಶ್ಚಿತ್ತ ಮಾಡುವುದು ರಕ್ತವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರ. ಅಂತಹ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರ ಆಗುತ್ತದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಏಕೆಂದರೆ ದೇಹಕ್ಕೆ ರಕ್ತವೇ ಪ್ರಾಣಾಧಾರ. ಆ ರಕ್ತವನ್ನು ನೀವು ಬಲಿಪೀಠಕ್ಕೆ ಪ್ರೋಕ್ಷಿಸಿ ನಿಮ್ಮ ನಿಮ್ಮ ದೋಷ ಪರಿಹಾರ ಮಾಡಿಕೊಳ್ಳಬೇಕೆಂದು ಸರ್ವೇಶ್ವರ ಅನುಗ್ರಹಿಸಿದ್ದಾರೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯಾಕಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರವಾಗುತ್ತದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯಾಕೆಂದರೆ ದೇಹದ ಜೀವ ರಕ್ತದಲ್ಲಿದೆ. ನೀವು ನಿಮಗೋಸ್ಕರವಾಗಿ ಯಜ್ಞವೇದಿಕೆಯ ಮೇಲೆ ಪ್ರಾಯಶ್ಚಿತ್ತ ಮಾಡಲಿ ಎಂದು ನಾನು ಅದನ್ನು ನಿಮಗೆ ಕೊಟ್ಟಿದ್ದೇನೆ. ನೀವು ನಿಮಗೋಸ್ಕರವಾಗಿ ಪ್ರಾಯಶ್ಚಿತ್ತ ಮಾಡಲು ಈ ನಿಯಮಗಳನ್ನು ಉಪಯೋಗಿಸಬೇಕು. ಒಬ್ಬನ ಜೀವಕ್ಕೆ ರಕ್ತವೇ ಪ್ರಾಯಶ್ಚಿತ್ತವಾಗಿದೆ. ಜೀವಿಯೊಂದನ್ನು ಕೊಂದಿದ್ದರ ಬೆಲೆಯಾಗಿ ನೀವು ನನಗೆ ಆ ರಕ್ತವನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 17:11
24 ತಿಳಿವುಗಳ ಹೋಲಿಕೆ  

ಹೀಗೆ ದೇವರ ನಿಯಮದ ಪ್ರಕಾರ ಎಲ್ಲವೂ ರಕ್ತದಿಂದಲೇ ಶುದ್ಧಿಯಾಗಬೇಕು. ರಕ್ತಧಾರೆ ಇಲ್ಲದೆ ಪಾಪಪರಿಹಾರವು ಉಂಟಾಗುವುದಿಲ್ಲ.


ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.


ಇದನ್ನು ನಂಬಿಕೆಯಿಂದ ಕ್ರಿಸ್ತ ಯೇಸುವಿನ ರಕ್ತದ ಮೂಲಕ ದೊರಕುವಂತೆ ದೇವರು ಕ್ರಿಸ್ತ ಯೇಸುವನ್ನು ನಮಗಾಗಿ ಪ್ರಾಯಶ್ಚಿತ್ತ ಬಲಿಯಾಗಿ ಒಪ್ಪಿಸಿದರು. ದೇವರು ಹಿಂದಿನ ಕಾಲದಲ್ಲಿ ಜನರು ಮಾಡಿರುವ ಪಾಪಗಳನ್ನು ದಂಡಿಸದೆ ತಮ್ಮ ನೀತಿಯನ್ನು ತೋರಿಸಿಕೊಡುವುದಕ್ಕಾಗಿಯೂ


ನಂಬಿಗಸ್ತ ಸಾಕ್ಷಿಯೂ ಸತ್ತವರೊಳಗಿಂದ ಪ್ರಥಮವಾಗಿ ಜೀವಂತವಾಗಿ ಎದ್ದು ಬಂದವರೂ ಭೂರಾಜರಿಗೆ ಒಡೆಯರೂ ಆಗಿರುವ ಕ್ರಿಸ್ತ ಯೇಸುವಿನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ಅವರೇ ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವರೂ ಆಗಿದ್ದಾರೆ.


ಯೇಸು ಅವರಿಗೆ, “ಇದು ಬಹುಜನರಿಗೋಸ್ಕರ ಸುರಿಸಲಾಗುವ ಹೊಸ ಒಡಂಬಡಿಕೆಯ ನನ್ನ ರಕ್ತ.


“ಆದರೆ ಮಾಂಸವನ್ನು ಅದರ ಜೀವವಾಗಿರುವ ರಕ್ತದೊಂದಿಗೆ ನೀವು ತಿನ್ನಬಾರದು.


ಕ್ರಿಸ್ತ ಯೇಸುವಿನಲ್ಲಿಯೇ ನಮಗೆ ವಿಮೋಚನೆ ಉಂಟಾಯಿತು. ನಮ್ಮ ಪಾಪಗಳ ಕ್ಷಮೆಯೇ ಆ ವಿಮೋಚನೆಯಾಗಿರುತ್ತದೆ.


ಇದು ಬಹುಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲಾಗುವ ಹೊಸ ಒಡಂಬಡಿಕೆಯ ನನ್ನ ರಕ್ತ.


ಅದರಂತೆ ಯೇಸು ಸಹ ತಮ್ಮ ಸ್ವಂತ ರಕ್ತದಿಂದ ಜನರನ್ನು ಪವಿತ್ರಪಡಿಸುವುದಕ್ಕೋಸ್ಕರ ಊರ ಹೊರಗೆ ಬಾಧೆಪಟ್ಟರು.


ದೇವರ ಕೃಪಾ ಐಶ್ವರ್ಯಕ್ಕೆ ಅನುಸಾರವಾಗಿ ಕ್ರಿಸ್ತನಲ್ಲಿ ನಮಗೆ ಅವರ ರಕ್ತದ ಮೂಲಕ ಪಾಪಗಳ ಕ್ಷಮಾಪಣೆಯಾಗಿ ವಿಮೋಚನೆಯಾಯಿತು.


ಏಕೆಂದರೆ ಅದು ಎಲ್ಲಾ ಶರೀರಗಳ ಜೀವವಾಗಿದೆ. ಅದಕ್ಕಿರುವ ರಕ್ತವು ಅದರ ಜೀವಕ್ಕಾಗಿಯೇ ಇದೆ. ಆದ್ದರಿಂದ ನಾನು ಇಸ್ರಾಯೇಲರಿಗೆ, “ನೀವು ಯಾವ ತರಹದ ರಕ್ತವನ್ನೂ ತಿನ್ನಬಾರದು,” ಎಂದು ಹೇಳಿದ್ದೇನೆ. ಏಕೆಂದರೆ ಎಲ್ಲಾ ಶರೀರಗಳ ಜೀವವೂ ಅದರ ರಕ್ತದಲ್ಲಿಯೇ ಇದೆ. ಅದನ್ನು ತಿನ್ನುವ ಯಾವನನ್ನಾದರೂ ಬಹಿಷ್ಕರಿಸಬೇಕು.


ಪವಿತ್ರಾತ್ಮ ದೇವರ ಕಾರ್ಯದಿಂದ ಪರಿಶುದ್ಧರಾಗಿ, ಯೇಸುಕ್ರಿಸ್ತರಿಗೆ ವಿಧೇಯರಾಗಲು ಅವರ ರಕ್ತದಿಂದ ಪ್ರೋಕ್ಷಿತರಾಗುವುದಕ್ಕೂ ನಮ್ಮ ತಂದೆ ದೇವರ ಪೂರ್ವಜ್ಞಾನಾನುಸಾರವಾಗಿ ಆಯ್ಕೆಯಾದವರಿಗೆ ಬರೆಯುವುದು: ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ಕ್ರಿಸ್ತ ಯೇಸು ಶಿಲುಬೆಯ ಮೇಲೆ ಸುರಿಸಿದ ರಕ್ತದ ಮೂಲಕವಾಗಿ, ದೇವರು ಸಮಾಧಾನವನ್ನು ಉಂಟುಮಾಡಿ, ಕ್ರಿಸ್ತನ ಮೂಲಕವೇ ಭೂಪರಲೋಕಗಳಲ್ಲಿರುವ ಎಲ್ಲವನ್ನೂ ತಮ್ಮೊಂದಿಗೆ ಸಂಧಾನಪಡಿಸಿಕೊಂಡರು.


ಈಗ ನಾವು ಕ್ರಿಸ್ತ ಯೇಸುವಿನ ರಕ್ತದಿಂದ ನೀತಿವಂತರೆಂದು ನಿರ್ಣಯ ಹೊಂದಿರುವುದರಿಂದ, ಕ್ರಿಸ್ತ ಯೇಸುವಿನ ಮೂಲಕವಾಗಿಯೇ ದೇವರ ಕೋಪದಿಂದ ರಕ್ಷಿಸಲಾಗುವುದು ಇನ್ನೂ ಖಂಡಿತವಲ್ಲವೆ?


ಆಗ ಅವನು ಅದನ್ನು ವಧಿಸಿದನು. ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು, ಬಲಿಪೀಠದ ಸುತ್ತಲೂ ಇರುವ ಕೊಂಬುಗಳ ಮೇಲೆ ತನ್ನ ಬೆರಳಿನಿಂದ ಹಚ್ಚಿ, ಬಲಿಪೀಠವನ್ನು ಶುದ್ಧೀಕರಿಸಿ, ಉಳಿದ ರಕ್ತವನ್ನು ಬಲಿಪೀಠದ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಅದನ್ನು ಪವಿತ್ರ ಮಾಡಿದನು.


ಕ್ರಿಸ್ತ ಯೇಸು ನಮ್ಮ ಪಾಪಗಳನ್ನು ಪರಿಹರಿಸುವ ಬಲಿಯಾಗಿದ್ದಾರೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನೂ ಪರಿಹರಿಸುತ್ತಾರೆ.


ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನೇ ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ,” ಎಂದು ಹೇಳಿದರು.


“ಇದಲ್ಲದೆ ಆರೋನನು ಪಾಪ ಪರಿಹಾರದ ಬಲಿಯಾಗಿರುವ ಹೋರಿಯನ್ನು ತಂದು, ತನಗೋಸ್ಕರ ಮತ್ತು ತನ್ನ ಮನೆತನದವರಿಗೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ತನಗೋಸ್ಕರ ದೋಷಪರಿಹಾರಕ ಬಲಿಯಾಗಿ ಆ ಹೋರಿಯನ್ನು ವಧಿಸಬೇಕು.


ಅವನು ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು. ಆಗ ಯಾಜಕರಾದ ಆರೋನನ ಪುತ್ರರು ರಕ್ತವನ್ನು ತಂದು, ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿರುವ ಬಲಿಪೀಠದ ಸುತ್ತಲೂ ಚಿಮುಕಿಸಬೇಕು.


ಆದಕಾರಣ ನಾನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಿದೆನು, “ನಿಮ್ಮಲ್ಲಿಯಾಗಲಿ, ನಿಮ್ಮ ನಡುವೆ ತಂಗಿರುವ ಪರಕೀಯರಲ್ಲಿಯಾಗಲಿ ಯಾರೂ ರಕ್ತವನ್ನು ಭುಜಿಸಬಾರದು.”


ಯಾಜಕನು ಪಾಪ ಪರಿಹಾರದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು, ದಹನಬಲಿಯ ಪೀಠದ ಮೇಲೆ ಅಡಿಯಲ್ಲಿ ಹೊಯ್ಯಬೇಕು.


ಅವರು ಸಮಾಧಾನದ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು. ಯಾಜಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು.


ರಕ್ತವನ್ನು ಮಾತ್ರ ಭುಜಿಸದ ಹಾಗೆ ಜಾಗ್ರತೆಯಾಗಿರಿ. ಏಕೆಂದರೆ ರಕ್ತವು ಪ್ರಾಣವೇ. ಮಾಂಸದೊಡನೆ ಅದರ ಜೀವವನ್ನು ತಿನ್ನಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು