Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 17:6 - ಕನ್ನಡ ಸಮಕಾಲಿಕ ಅನುವಾದ

6 ಯಾಜಕನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಬಲಿಪೀಠದ ಮೇಲೆ ರಕ್ತವನ್ನು ಚಿಮುಕಿಸಬೇಕು. ಕೊಬ್ಬನ್ನು ಯೆಹೋವ ದೇವರಿಗೆ ಆಹ್ಲಾದಕರ ಸುಗಂಧ ವಾಸನೆಯಾಗಿ ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯಾಜಕನು ಅವುಗಳ ರಕ್ತವನ್ನು ದೇವದರ್ಶನದ ಗುಡಾರದ ಬಾಗಿಲಿನ ಮುಂದಿರುವ ಯಜ್ಞವೇದಿಗೆ ಎರಚಿ, ಅವುಗಳ ಕೊಬ್ಬನ್ನು ಹೋಮಮಾಡಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯಾಜಕನು ಅವುಗಳ ರಕ್ತವನ್ನು ದೇವದರ್ಶನದ ಗುಡಾರದ ಬಾಗಿಲಿನ ಮುಂದಿರುವ ಬಲಿಪೀಠಕ್ಕೆ ಚಿಮುಕಿಸಿ, ಅವುಗಳ ಕೊಬ್ಬನ್ನು ಹೋಮಮಾಡಿ, ಸರ್ವೇಶ್ವರನಿಗೆ ಸುವಾಸನೆಯನ್ನುಂಟುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯಾಜಕನು ಅವುಗಳ ರಕ್ತವನ್ನು ದೇವದರ್ಶನದ ಗುಡಾರದ ಬಾಗಲಿನ ಮುಂದಿರುವ ಯಜ್ಞವೇದಿಗೆ ಎರಚಿ ಅವುಗಳ ಕೊಬ್ಬನ್ನು ಹೋಮಮಾಡಿ ಯೆಹೋವನಿಗೆ ಸುವಾಸನೆಯನ್ನುಂಟುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬಳಿಕ ಯಾಜಕನು ಆ ಪಶುಗಳ ರಕ್ತವನ್ನು ದೇವದರ್ಶನಗುಡಾರದ ಬಾಗಿಲಿನ ಹತ್ತಿರವಿರುವ ಯೆಹೋವನ ಯಜ್ಞವೇದಿಕೆಗೆ ಚೆಲ್ಲುವನು ಮತ್ತು ಅವುಗಳ ಕೊಬ್ಬನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡುವನು. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 17:6
12 ತಿಳಿವುಗಳ ಹೋಲಿಕೆ  

“ಆದರೆ ಆಕಳಿನ ಚೊಚ್ಚಲನ್ನಾದರೂ ಕುರಿಯ ಚೊಚ್ಚಲನ್ನಾದರೂ ಮೇಕೆಯ ಚೊಚ್ಚಲನ್ನಾದರೂ ನೀನು ಬಿಟ್ಟುಬಿಡಬಾರದು. ಅವು ಪರಿಶುದ್ಧವಾಗಿವೆ, ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸಬೇಕು, ಅವುಗಳ ಕೊಬ್ಬನ್ನು ಯೆಹೋವ ದೇವರಿಗೆ ಸುವಾಸನೆಯ ದಹನಬಲಿ ಮಾಡಬೇಕು.


ಅವನು ಅರ್ಪಿಸಬೇಕಾದ ಆ ಪ್ರಾಣಿಯನ್ನು ಯೆಹೋವ ದೇವರ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈ ಇಡಬೇಕು. ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.


ಅವನು ಸಮಾಧಾನ ಬಲಿಯ ಕೊಬ್ಬನ್ನು ತೆಗೆದಂತೆ, ಅದರ ಎಲ್ಲಾ ಕೊಬ್ಬನ್ನು ತೆಗೆಯಬೇಕು. ಯಾಜಕನು ಅದನ್ನು ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯಾಗಿ ಸುಡಬೇಕು. ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.


ಯಾಜಕನು ಅವುಗಳನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ ಸುವಾಸನೆಯ ಯಜ್ಞಾರ್ಪಣೆಯ ಆಹಾರವಾಗಿರುವುದು. ಎಲ್ಲಾ ಕೊಬ್ಬು ಯೆಹೋವ ದೇವರದೇ.


ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ದೇವದರ್ಶನದ ಗುಡಾರದ ಮುಂದೆ ಅದನ್ನು ವಧಿಸಬೇಕು. ಆಗ ಆರೋನನ ಪುತ್ರರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.


ಯಾಜಕನು ಅದನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುವುದು.


ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು, ಅದನ್ನು ದೇವದರ್ಶನದ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಪುತ್ರರು ಬಲಿಪೀಠದ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು.


ಆರೋನನ ಪುತ್ರರು ಅದನ್ನು ಬಲಿಪೀಠದಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನಬಲಿಯಾಗಿ ಸುಡಬೇಕು. ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು, ಯೆಹೋವ ದೇವರಿಗೆ ಸುವಾಸನೆಯಾಗಿರುವುದು.


ಅದನ್ನೆಲ್ಲಾ ಬಲಿಪೀಠದ ಮೇಲೆ ಸುಡಬೇಕು. ಅದು ಯೆಹೋವ ದೇವರಿಗೆ ದಹನಬಲಿಯಾಗಿದೆ. ಅದು ಯೆಹೋವ ದೇವರಿಗೆ ಸುವಾಸನೆಯ ದಹನಬಲಿ.


ನೀನು ಕರುಳುಗಳನ್ನೂ ಅವುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ತೆಗೆದುಕೊಂಡು ಬಲಿಪೀಠದ ಮೇಲೆ ಸುಡಬೇಕು.


ಇಸ್ರಾಯೇಲರು ತಾವು ಬಯಲಿನಲ್ಲಿ ಸಮರ್ಪಿಸುವ ಬಲಿಗಳನ್ನು ಯೆಹೋವ ದೇವರಿಗೆ ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಯಾಜಕನ ಬಳಿಗೆ ತಂದು ಯೆಹೋವ ದೇವರಿಗೆ ಸಮಾಧಾನದ ಬಲಿಯಾಗಿ ಸಮರ್ಪಿಸಬೇಕು.


“ ‘ಆದರೆ ಇಸ್ರಾಯೇಲರು ನನ್ನನ್ನು ಬಿಟ್ಟುಹೋದಾಗ ನನ್ನ ಪರಿಶುದ್ಧಸ್ಥಳದ ಕಾಯಿದೆಯನ್ನು ಪಾಲಿಸಿದ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವಂತೆ ನನ್ನ ಸಮೀಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು