Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:20 - ಕನ್ನಡ ಸಮಕಾಲಿಕ ಅನುವಾದ

20 “ ‘ಪರರ ಹೆಂಡತಿಯೊಂದಿಗೆ ನೀನು ಸಂಗಮಿಸಿ ಅಶುದ್ಧನಾಗಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಪರಸ್ತ್ರೀ ಸಂಗಮದಿಂದ ಅಶುದ್ಧರಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಪರಸ್ತ್ರೀ ಸಂಭೋಗದಿಂದ ಅಶುದ್ಧರಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಪರಸ್ತ್ರೀಗಮನದಿಂದ ಅಪರಿಶುದ್ಧರಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ನೆರೆಯವನ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಇಂಥ ಸಂಬಂಧವು ನಿಮ್ಮನ್ನು ಅಶುದ್ಧರನ್ನಾಗಿ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:20
17 ತಿಳಿವುಗಳ ಹೋಲಿಕೆ  

“ ‘ಇದಲ್ಲದೆ ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿಚಾರ ಮಾಡಿದರೆ, ವ್ಯಭಿಚಾರ ಮಾಡುವವನಿಗೂ ಮತ್ತು ವ್ಯಭಿಚಾರ ಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.


ಎಲ್ಲರೂ ವಿವಾಹವನ್ನು ಗೌರವಿಸಬೇಕು ಮತ್ತು ದಾಂಪತ್ಯ ಜೀವನವು ಪರಿಶುದ್ಧವಾದದ್ದಾಗಿರಬೇಕು. ಏಕೆಂದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವರು.


ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ: ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,


ಮಾಂಸಭಾವದ ಕೃತ್ಯಗಳು ಹೀಗೆ ಸ್ಪಷ್ಟವಾಗಿವೆ: ಜಾರತ್ವ, ಅಶುದ್ಧತ್ವ, ಸಡಿಲ ಜೀವನ,


ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳಲ್ಲಿ ಅಸಹ್ಯಪಡುವ ನೀನು ದೇವಾಲಯಗಳನ್ನು ದೋಚುತ್ತೀಯೋ?


“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನಿನ್ನ ಹೃದಯ ಅವಳ ಸೌಂದರ್ಯವನ್ನು ಮೋಹಿಸದಿರಲಿ. ಅವಳ ಕಣ್ಣುರೆಪ್ಪೆಗಳಿಂದ ಅವಳು ನಿನ್ನನ್ನು ವಶಮಾಡಿಕೊಳ್ಳದೆ ಇರಲಿ.


ದುಃಖದ ದಿವಸಗಳು ತೀರಿದ ತರುವಾಯ, ದಾವೀದನು ಅವಳನ್ನು ತನ್ನ ಮನೆಗೆ ಕರೆಯಕಳುಹಿಸಿದನು. ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕಾರ್ಯವು ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದಾಗಿತ್ತು.


ಆದರೆ ಆ ಮನುಷ್ಯನು ನಿಶ್ಚಯಮಾಡಿದ ಹುಡುಗಿಯನ್ನು ಹೊಲದಲ್ಲಿ ಕಂಡು ಅವಳನ್ನು ಬಲಾತ್ಕರಿಸಿ, ಅವಳ ಸಂಗಡ ಮಲಗಿದರೆ, ಅವಳ ಸಂಗಡ ಮಲಗಿದ ಮನುಷ್ಯನು ಮಾತ್ರ ಸಾಯಬೇಕು. ಆದರೆ ಆ ಹುಡುಗಿಗೆ ಏನೂ ಮಾಡಬಾರದು.


ಒಬ್ಬ ಮನುಷ್ಯನು ಪರನ ಹೆಂಡತಿಯೊಡನೆ ಮಲಗಿಕೊಂಡವನಾಗಿ ಸಿಕ್ಕಿಬಿದ್ದರೆ, ಆ ಸ್ತ್ರೀಯ ಸಂಗಡ ಮಲಗಿಕೊಂಡ ಮನುಷ್ಯನೂ ಆ ಸ್ತ್ರೀಯೂ ಇಬ್ಬರೂ ಸಾಯಬೇಕು. ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು.


ಇಲ್ಲವೆ ಒಬ್ಬನು ಅವಳ ಸಂಗಡ ಮಲಗಿ ಸಂಗಮ ಮಾಡಿದ್ದು, ಅವಳ ಗಂಡನ ಕಣ್ಣುಗಳಿಗೆ ಮರೆಯಾಗಿದ್ದರೆ, ಅವಳು ಅಶುದ್ಧಳೆಂಬುದು ಗುಪ್ತವಾಗಿದ್ದರೆ, ಅವಳಿಗೆ ವಿರೋಧವಾಗಿ ಸಾಕ್ಷಿ ಇಲ್ಲದೆ, ಅವಳನ್ನು ಹಿಡಿಯದೇ ಇದ್ದರೆ,


ಪರ್ವತಗಳ ಪೂಜಾಸ್ಥಳಗಳಲ್ಲಿ ತಿನ್ನದೆ, ಇಸ್ರಾಯೇಲಿನ ಮನೆತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ, ಮುಟ್ಟಾಗಿರುವ ಸ್ತ್ರೀಯನ್ನು ಸಮೀಪಿಸದೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು