Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:24 - ಕನ್ನಡ ಸಮಕಾಲಿಕ ಅನುವಾದ

24 “ ‘ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು. ಏಕೆಂದರೆ ನಿಮ್ಮ ಮುಂದೆಯೇ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಿಂದ ಹೊಲೆಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “‘ಈ ದುರಾಚಾರಗಳಲ್ಲಿ ಯಾವುದರಿಂದಲೂ ನೀವು ಅಶುದ್ಧರಾಗಬಾರದು. ನಾನು ನಿಮ್ಮ ಎದುರಿನಿಂದ ಮೊದಲು ಹೊರಡಿಸಿದ ಜನಾಂಗಗಳವರು ಇಂಥ ದುರಾಚಾರಗಳಿಂದ ಅಶುದ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ಇಂಥ ದುರಾಚಾರಗಳಾವುದರಿಂದಲೂ ನೀವು ಅಶುದ್ಧರಾಗಬಾರದು. ಏಕೆಂದರೆ ನಾನು ನಿಮಗೆ ಮುಂಚಿತವಾಗಿ ಹೊರಡಿಸುವ ಜನಾಂಗಗಳವರು ಇಂಥ ಅನಾಚಾರಗಳಿಂದಲೇ ಅಶುದ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಈ ದುರಾಚಾರಗಳಲ್ಲಿ ಯಾವದರಿಂದಲೂ ನೀವು ಅಶುದ್ಧರಾಗಬಾರದು. ನಾನು ನಿಮ್ಮ ಎದುರಿನಿಂದ ಹೊರಡಿಸುವ ಜನಾಂಗಗಳವರು ಇಂಥ ದುರಾಚಾರಗಳಿಂದ ಅಶುದ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಆ ದುರಾಚಾರಗಳಲ್ಲಿ ಯಾವುದರಿಂದಲೂ ನಿಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಬೇಡಿರಿ. ನಾನು ಜನಾಂಗಗಳನ್ನು ಅವರ ದೇಶಗಳಿಂದ ಹೊರಡಿಸಿ ಅವರ ದೇಶವನ್ನು ನಿಮಗೆ ಕೊಡುತ್ತಿದ್ದೇನೆ. ಯಾಕೆಂದರೆ ಅವರು ಅಂಥ ಭಯಂಕರ ಪಾಪಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:24
22 ತಿಳಿವುಗಳ ಹೋಲಿಕೆ  

ಏಕೆಂದರೆ ಇಂಥವುಗಳನ್ನು ಮಾಡುವವರೆಲ್ಲಾ ಯೆಹೋವ ದೇವರಿಗೆ ಅಸಹ್ಯರಾಗಿದ್ದಾರೆ. ಈ ಅಸಹ್ಯಗಳ ನಿಮಿತ್ತವೇ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರದೂಡಿಸಿಬಿಡುತ್ತಾರೆ.


ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”


ಯಾರಾದರೂ ದೇವರ ಆಲಯವನ್ನು ನಾಶಪಡಿಸಿದರೆ, ದೇವರು ಅವರನ್ನು ನಾಶಪಡಿಸುವರು. ಏಕೆಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.


ಆದರೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಪುನಃ ಕಳುಹಿಸಿ, ‘ನಾನು ಹಗೆ ಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇಬೇಡಿರಿ!’ ಎಂದು ಹೇಳಿದೆನು.


ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ಯೆಹೋವ ದೇವರಿಗೆ ಅಸಹ್ಯವಾದ ಅನೇಕ ಸಂಗತಿಗಳನ್ನು ಮಾಡುತ್ತಾರೆ. ಅಂದರೆ, ಅವರು ತಮ್ಮ ಗಂಡು ಮಕ್ಕಳನ್ನು, ಹೆಣ್ಣು ಮಕ್ಕಳನ್ನು ತಮ್ಮ ದೇವರುಗಳಿಗೆ ಬಲಿಯಾಗಿ ಬೆಂಕಿಯಲ್ಲಿ ಸುಡುತ್ತಾರೆ. ಆದ್ದರಿಂದ ನೀವು ನಿಮ್ಮ ಯೆಹೋವ ದೇವರನ್ನು ಆ ರೀತಿಯಲ್ಲಿ ಆರಾಧಿಸಬಾರದು.


ನೀವು ವಾಸವಾಗಿದ್ದ ಈಜಿಪ್ಟ್ ದೇಶದ ಆಚಾರಗಳನ್ನು ಅನುಸರಿಸಬಾರದು. ನಿಮ್ಮನ್ನು ಸೇರಿಸಲಿರುವ ಕಾನಾನ್ ದೇಶದವರ ಆಚಾರಗಳನ್ನು ನೀವು ಮಾಡಬಾರದು. ಇಲ್ಲವೆ ನೀವು ಅವರ ಪದ್ಧತಿಗಳನುಸಾರ ನಡೆಯಬಾರದು.


ಆಗ ನಾಲ್ಕನೆಯ ಸಂತಾನದವರು ಇಲ್ಲಿಗೆ ತಿರುಗಿ ಬರುವರು. ಏಕೆಂದರೆ ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ,” ಎಂದು ಹೇಳಿದರು.


ಆದ್ದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧ ಮಾಡಬೇಡಿರಿ. ಏಕೆಂದರೆ ನಾನು ಅದರೊಳಗೆ ವಾಸಿಸುತ್ತೇನೆ. ಯೆಹೋವ ದೇವರಾಗಿರುವ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ,’ ” ಎಂದರು.


ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ತೆಗೆದುಹಾಕಿದಾಗ, “ಯೆಹೋವ ದೇವರು ನಮ್ಮನ್ನು ಈ ದೇಶವನ್ನು ಸ್ವಾಧೀನಪಡಿಸಲು ಕರೆದುಕೊಂಡು ಬಂದಿದ್ದು ನಮ್ಮ ನೀತಿಯ ನಿಮಿತ್ತವೇ,” ಎಂದು ನೀವು ನಿಮ್ಮ ಹೃದಯದಲ್ಲಿ ಹೇಳಿಕೊಳ್ಳಬಾರದು. ಆ ಜನಾಂಗಗಳ ಕೆಟ್ಟತನದ ನಿಮಿತ್ತವೇ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರಡಿಸುತ್ತಾರೆ.


ಆಗ ನಾನು ಇಸ್ರಾಯೇಲಿಗೆ ಕೊಟ್ಟ ದೇಶದೊಳಗಿಂದ ಅವರನ್ನು ತೆಗೆದುಹಾಕಿ, ನನ್ನ ನಾಮಕ್ಕೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಾನು ನಿರಾಕರಿಸುವೆನು. ಇಸ್ರಾಯೇಲರು ಸಮಸ್ತ ಜನರಲ್ಲಿ ಗಾದೆಯಾಗಿಯೂ, ಅಪಹಾಸ್ಯಕ್ಕೆ ಗುರಿಯಾಗುವರು.


ಈ ಸಂಗತಿಗಳನ್ನು ಮಾಡಿದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು, “ಇಸ್ರಾಯೇಲರೂ, ಯಾಜಕರೂ, ಲೇವಿಯರೂ ತಮ್ಮ ನೆರೆಯವರಿಂದ ಪ್ರತ್ಯೇಕಿಸಿಕೊಳ್ಳಲಿಲ್ಲ. ಅವರು ಕಾನಾನ್ಯರು, ಹಿತ್ತಿಯರು, ಪೆರಿಜೀಯರು, ಯೆಬೂಸಿಯರು, ಅಮ್ಮೋನ್ಯರು, ಮೋವಾಬ್ಯರು, ಈಜಿಪ್ಟರು, ಅಮೋರಿಯರು ಇವರ ಅಸಹ್ಯ ಸಂಗತಿಗಳ ಪದ್ಧತಿಗಳಂತೆ ನಡೆಯುತ್ತಾ ಇದ್ದಾರೆ.


ಹೀಗೆ ತಮ್ಮ ದುಷ್ಕೃತ್ಯಗಳಿಂದ ತಮ್ಮನ್ನು ಅಪವಿತ್ರ ಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ದುರಾಚಾರಿಗಳಾದರು.


ನಿಮ್ಮ ನೀತಿಗೋಸ್ಕರವೂ, ನಿಮ್ಮ ಹೃದಯದ ಯಥಾರ್ಥತೆಗೋಸ್ಕರವೂ ನೀವು ಅವರ ದೇಶವನ್ನು ಸ್ವತಂತ್ರಿಸಿಕೊಳ್ಳುವುದಕ್ಕೆ ಬರುವುದಿಲ್ಲ. ಆ ಜನಾಂಗಗಳ ಕೆಟ್ಟತನಕ್ಕೋಸ್ಕರವೂ, ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರಡಿಸುತ್ತಾರೆ.


ಆದರೆ ಗಿಬೆಯ ಪಟ್ಟಣದವರು ನನಗೆ ವಿರೋಧವಾಗಿ ಎದ್ದು, ನಾನು ಇಳಿದಿದ್ದ ಮನೆಯನ್ನು ರಾತ್ರಿಯಲ್ಲಿ ಮುತ್ತಿಕೊಂಡು ನನ್ನನ್ನು ಕೊಲ್ಲಬೇಕೆಂದಿದ್ದರು ಮತ್ತು ನನ್ನ ಉಪಪತ್ನಿಯನ್ನು ಅತ್ಯಾಚಾರಮಾಡಿದರು. ಅವಳು ಸತ್ತುಹೋದಳು.


ಅವರು ಇಸ್ರಾಯೇಲಿನಲ್ಲಿ ಇಂಥ ದುಷ್ಕಾರ್ಯವನ್ನೂ ಅತಿರೇಕದ ಕೆಲಸವನ್ನೂ ಮಾಡಿದ್ದರಿಂದ, ನಾನು ನನ್ನ ಉಪಪತ್ನಿಯನ್ನು ಹಿಡಿದು, ಅವಳನ್ನು ಕಡಿದು, ಇಸ್ರಾಯೇಲಿನ ಬಾಧ್ಯತೆಯಾದ ಎಲ್ಲಾ ಸೀಮೆಗಳಿಗೆ ಕಳುಹಿಸಿದೆನು. ನೀವೆಲ್ಲರೂ ಇಸ್ರಾಯೇಲರಾಗಿದ್ದೀರಿ.


ಆದರೆ ಬೆನ್ಯಾಮೀನನ ಗೋತ್ರದವರಾದ ಗಿಬೆಯದವರು ಇಸ್ರಾಯೇಲಿನಲ್ಲಿ ಮಾಡಿದ ಈ ಅತಿರೇಕದ ಕೆಲಸಕ್ಕೆ ತಕ್ಕ ಪ್ರಕಾರ ಮಾಡುವ ಹಾಗೆ ನಾವು ಆಹಾರವನ್ನು ತೆಗೆದುಕೊಂಡು ಬರುವುದಕ್ಕೆ ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನೂರಕ್ಕೆ ಹತ್ತು ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಜನರನ್ನು ತೆಗೆದುಕೊಂಡು ಕಳುಹಿಸುತ್ತೇವೆ,” ಎಂದರು.


ಆದರೆ ಯೆಹೋವ ದೇವರು ಇಸ್ರಾಯೇಲರ ಮುಂದೆ ಹೊರಡಿಸಿಬಿಟ್ಟ ಜನಾಂಗಗಳ ಅಸಹ್ಯವಾದವುಗಳನ್ನು ಅವನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.


“ಮನುಷ್ಯಪುತ್ರನೇ, ಯಾವಾಗ ಇಸ್ರಾಯೇಲರ ಮನೆತನದವರು ಸ್ವಂತ ದೇಶದಲ್ಲಿ ವಾಸಿಸಿದರೋ, ಆಗ ಅವರು ಅದನ್ನು ತಮ್ಮ ಸ್ವಂತ ಮಾರ್ಗಗಳಿಂದಲೂ ದುಷ್ಕಾರ್ಯಗಳಿಂದಲೂ ಅಶುದ್ಧಗೊಳಿಸಿದರು. ಅವರ ಆ ದುಷ್ಕಾರ್ಯಗಳು ನನ್ನ ಮುಂದೆ ಮುಟ್ಟಾಗಿರುವವಳ ಅಶುದ್ಧತ್ವದ ಹಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು