Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:26 - ಕನ್ನಡ ಸಮಕಾಲಿಕ ಅನುವಾದ

26 ಆದ್ದರಿಂದ ನೀವು ನನ್ನ ನಿಯಮಗಳನ್ನು, ನನ್ನ ನಿರ್ಣಯಗಳನ್ನು ಕೈಗೊಳ್ಳಬೇಕು. ಸ್ವದೇಶದವರಲ್ಲಿ ಯಾವನಾಗಲಿ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿದ್ದ ಪರಕೀಯನಾಗಲಿ ಈ ಅಸಹ್ಯವಾದವುಗಳಲ್ಲಿ ಒಂದನ್ನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದುದರಿಂದ ಸ್ವದೇಶದವರಾದ ನಿಮ್ಮಲ್ಲಿಯೂ ಮತ್ತು ನಿಮ್ಮ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಿಯೂ ಯಾರೂ ಈ ಅಸಹ್ಯವಾದ ಕಾರ್ಯಗಳಲ್ಲಿ ಒಂದನ್ನಾದರೂ ನಡೆಸದೆ ಎಲ್ಲರೂ ನನ್ನ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆದುದರಿಂದ ಸ್ವದೇಶದವರಾದ ನಿಮ್ಮಲ್ಲಿಯಾಗಲಿ, ನಿಮ್ಮ ನಡುವೆ ವಾಸಿಸುವ ಅನ್ಯದೇಶೀಯರಲ್ಲಾಗಲಿ ಯಾರೂ ಇಂಥ ಹೇಸಿಗೆಯಾದ ಕಾರ್ಯಗಳಲ್ಲಿ ಒಂದನ್ನೂ ಮಾಡದೆ ಎಲ್ಲರೂ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆದದರಿಂದ ಸ್ವದೇಶದವರಾದ ನಿಮ್ಮಲ್ಲಿಯೂ ನಿಮ್ಮ ನಡುವೆ ಇಳುಕೊಂಡಿರುವ ಅನ್ಯದೇಶದವರಲ್ಲಿಯೂ ಯಾರೂ ಈ ಹೇಸಿಗೆಯಾದ ಕಾರ್ಯಗಳಲ್ಲಿ ಒಂದನ್ನಾದರೂ ನಡಿಸದೆ ಎಲ್ಲರೂ ನನ್ನ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಆದ್ದರಿಂದ ನೀವು ನನ್ನ ಕಟ್ಟಳೆಗಳಿಗೂ ನಿಯಮಗಳಿಗೂ ಆಜ್ಞಾವಿಧಿಗಳಿಗೂ ವಿಧೇಯರಾಗಬೇಕು. ನೀವು ಆ ಭಯಂಕರ ಪಾಪಗಳಲ್ಲಿ ಯಾವುದನ್ನೂ ಮಾಡಬಾರದು. ಆ ವಿಧಿಗಳು ಇಸ್ರೇಲರಿಗಾಗಿ ಮತ್ತು ನಿಮ್ಮ ಮಧ್ಯದಲ್ಲಿ ವಾಸಿಸುವ ಅನ್ಯಜನರಿಗಾಗಿ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:26
16 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ನನ್ನ ನಿಯಮಗಳನ್ನೂ, ನನ್ನ ನಿರ್ಣಯಗಳನ್ನೂ ಕೈಗೊಳ್ಳಿರಿ. ಇವುಗಳನ್ನು ಅನುಸರಿಸುವವರು ನಿಯಮಗಳ ಮೂಲಕವೇ ಬದುಕುವರು, ನಾನೇ ಯೆಹೋವ ದೇವರು.


ನಾನು ನಿಮಗೆ ಆಜ್ಞಾಪಿಸಿದ್ದನ್ನು ಪಾಲಿಸಿದರೆ ನೀವು ನನ್ನ ಸ್ನೇಹಿತರು.


“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಅನುಸರಿಸುವಿರಿ.


ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವರು ಹೆಚ್ಚು ಭಾಗ್ಯವಂತರು,” ಎಂದರು.


ಆದರೆ ಬೀಜ ಬಿದ್ದ ಒಳ್ಳೆಯ ಭೂಮಿಯವರು ಯಾರೆಂದರೆ ಯಥಾರ್ಥವಾದ ಒಳ್ಳೆಯ ಹೃದಯದಿಂದ, ವಾಕ್ಯವನ್ನು ಕೇಳಿ ಅದನ್ನು ಕೈಕೊಂಡು, ತಾಳ್ಮೆಯಿಂದ ಫಲಿಸುವವರೇ,” ಎಂದು ಹೇಳಿದರು.


ನಾನು ನಿಮಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಕಾಪಾಡಿ ಕೈಗೊಳ್ಳಬೇಕು. ಅದಕ್ಕೆ ಏನೂ ಕೂಡಿಸಬಾರದು. ಅದರಿಂದ ಏನನ್ನೂ ತೆಗೆದುಹಾಕಬಾರದು.


ನಿಮಗೂ, ನಿಮ್ಮ ತರುವಾಯ ನಿಮ್ಮ ಮಕ್ಕಳಿಗೂ ಒಳ್ಳೆಯದು ಆಗುವ ಹಾಗೆಯೂ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀವು ಬಹಳ ದಿವಸವಿರುವ ಹಾಗೆಯೂ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ದೇವರ ನಿಯಮಗಳನ್ನೂ, ಆಜ್ಞೆಗಳನ್ನೂ ಅನುಸರಿಸಿರಿ.


ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”


“ ‘ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ, ಯಾವುದೇ ತರದ ರಕ್ತವನ್ನು ತಿಂದರೆ, ರಕ್ತವನ್ನು ತಿನ್ನುವ ಆ ಪ್ರಾಣಕ್ಕೆ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.


“ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಇಸ್ರಾಯೇಲಿನ ಮನೆತನದವರಲ್ಲಿ ಯಾವ ಮನುಷ್ಯನಾದರು ಇಲ್ಲವೆ ನಿಮ್ಮೊಳಗೆ ಪ್ರವಾಸಿಗರಾಗಿದ್ದ ಪರಕೀಯರು ದಹನಬಲಿಯನ್ನಾಗಲಿ, ಯಜ್ಞವನ್ನಾಗಲಿ ಅರ್ಪಿಸಿದರೆ,


ದೇಶವೂ ಅಶುದ್ಧವಾಗಿದೆ. ಆದ್ದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು. ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವುದು.


ನಿಮ್ಮೆದುರಿನಲ್ಲಿದ್ದ ಆ ದೇಶದವರು ಈ ಎಲ್ಲಾ ಅಸಹ್ಯವಾದವುಗಳನ್ನು ಮಾಡಿದ್ದರಿಂದ ದೇಶವೂ ಅಶುದ್ಧವಾಯಿತು.


ಇದಲ್ಲದೆ ಪೂಜಾಸ್ಥಳಗಳಲ್ಲಿ ಪುರುಷಗಾಮಿಗಳಿದ್ದರು. ಅವರು ಇಸ್ರಾಯೇಲರ ಮುಂದೆ ಯೆಹೋವ ದೇವರು ಹೊರಡಿಸಿದ ಜನಾಂಗಗಳ ಸಕಲ ಅಸಹ್ಯ ಕಾರ್ಯಗಳನ್ನು ಮಾಡುತ್ತಾ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು