Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:28 - ಕನ್ನಡ ಸಮಕಾಲಿಕ ಅನುವಾದ

28 ನೀವೂ ಅದನ್ನು ಅಶುದ್ಧಮಾಡಿದರೆ, ಅದು ನಿಮಗಿಂತ ಮೊದಲಿದ್ದ ಜನಾಂಗಗಳವರನ್ನು ಕಾರಿದಂತೆ ನಿಮ್ಮನ್ನೂ ಕಾರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆ ದೇಶವು ನಿಮಗಿಂತ ಮುಂಚೆ ಇದ್ದ ಜನಾಂಗಗಳನ್ನು ತ್ಯಜಿಸಿದ ಪ್ರಕಾರವೇ ನಿಮ್ಮಿಂದ ಅಶುದ್ಧವಾದರೆ ನಿಮ್ಮನ್ನು ತ್ಯಜಿಸಿಬಿಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಿಮಗಿಂತ ಮುಂಚೆಯಿದ್ದ ಜನಾಂಗಗಳನ್ನು ಆ ನಾಡು ಕಕ್ಕಿಬಿಟ್ಟ ಪ್ರಕಾರವೇ ಅದು ನಿಮ್ಮಿಂದ ಅದು ಮಲಿನವಾದರೆ ನಿಮ್ಮನ್ನೂ ಅಂತೆಯೇ ಕಕ್ಕಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆ ದೇಶವು ನಿಮಗಿಂತ ಮುಂಚೆ ಇದ್ದ ಜನಾಂಗಗಳನ್ನು ಕಾರಿಬಿಟ್ಟ ಪ್ರಕಾರವೇ ನಿವ್ಮಿುಂದ ಅಶುದ್ಧವಾದರೆ ನಿಮ್ಮನ್ನೂ ಕಾರಿಬಿಟ್ಟೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನೀವು ಈ ಕಾರ್ಯಗಳನ್ನು ಮಾಡಿದರೆ, ನೀವು ಆ ದೇಶವನ್ನು ಹೊಲೆಮಾಡುವಿರಿ. ಅದು ಮೊದಲು ವಾಸಿಸಿದ ಜನಾಂಗಗಳನ್ನು ಕಾರಿಬಿಟ್ಟಂತೆ ನಿಮ್ಮನ್ನೂ ಕಾರಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:28
9 ತಿಳಿವುಗಳ ಹೋಲಿಕೆ  

ನೀನು ಬಿಸಿಯಾಗಲೀ, ತಣ್ಣಗಾಗಲೀ ಇಲ್ಲದೆ ಉಗುರುಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಕಾರಿ ಬಿಡುವೆನು.


“ ‘ನೀವು ನನ್ನ ಎಲ್ಲಾ ನಿಯಮಗಳನ್ನೂ, ನನ್ನ ಎಲ್ಲಾ ನ್ಯಾಯಗಳನ್ನೂ ಕೈಗೊಂಡು ಪಾಲಿಸಬೇಕು. ಹೀಗಿದ್ದರೆ ನೀವು ವಾಸಿಸುವುದಕ್ಕೆ ನಾನು ನಿಮ್ಮನ್ನು ತರುವ ಆ ದೇಶವು ನಿಮ್ಮನ್ನು ಕಾರಿಬಿಡುವುದಿಲ್ಲ.


ದೇಶವೂ ಅಶುದ್ಧವಾಗಿದೆ. ಆದ್ದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು. ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವುದು.


“ಮನುಷ್ಯಪುತ್ರನೇ, ಯಾವಾಗ ಇಸ್ರಾಯೇಲರ ಮನೆತನದವರು ಸ್ವಂತ ದೇಶದಲ್ಲಿ ವಾಸಿಸಿದರೋ, ಆಗ ಅವರು ಅದನ್ನು ತಮ್ಮ ಸ್ವಂತ ಮಾರ್ಗಗಳಿಂದಲೂ ದುಷ್ಕಾರ್ಯಗಳಿಂದಲೂ ಅಶುದ್ಧಗೊಳಿಸಿದರು. ಅವರ ಆ ದುಷ್ಕಾರ್ಯಗಳು ನನ್ನ ಮುಂದೆ ಮುಟ್ಟಾಗಿರುವವಳ ಅಶುದ್ಧತ್ವದ ಹಾಗಿತ್ತು.


ಈವರೆಗೂ ಸೃಷ್ಟಿಯೆಲ್ಲ ಪ್ರಸವ ವೇದನೆಯಂಥ ನೋವಿನಿಂದ ನರಳುತ್ತಿದೆ ಎಂದು ನಾವು ಬಲ್ಲೆವು.


‘ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ, ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆ ಪಡುತ್ತೇವೆ, ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿಬಂತು.’ ”


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀನು ಮನುಷ್ಯರನ್ನು ನುಂಗುವಂಥ ದೇಶ ಮತ್ತು ನಿನ್ನ ಜನಗಳನ್ನು ಮಕ್ಕಳಿಲ್ಲದಂಥ ಜನಾಂಗಗಳನ್ನಾಗಿ ಮಾಡುವಂಥದ್ದು ಆಗಿರುವೆ,” ಎಂದು ಅವರು ನಿನಗೆ ಹೇಳುವರು.


ನಿಮ್ಮೆದುರಿನಲ್ಲಿದ್ದ ಆ ದೇಶದವರು ಈ ಎಲ್ಲಾ ಅಸಹ್ಯವಾದವುಗಳನ್ನು ಮಾಡಿದ್ದರಿಂದ ದೇಶವೂ ಅಶುದ್ಧವಾಯಿತು.


“ ‘ಏಕೆಂದರೆ ಯಾವನಾದರೂ ಈ ಅಸಹ್ಯವಾದವುಗಳಲ್ಲಿ ಯಾವುದನ್ನಾದರೂ ಮಾಡಿದರೆ, ಅವನನ್ನು ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು