ಯಾಜಕಕಾಂಡ 18:3 - ಕನ್ನಡ ಸಮಕಾಲಿಕ ಅನುವಾದ3 ನೀವು ವಾಸವಾಗಿದ್ದ ಈಜಿಪ್ಟ್ ದೇಶದ ಆಚಾರಗಳನ್ನು ಅನುಸರಿಸಬಾರದು. ನಿಮ್ಮನ್ನು ಸೇರಿಸಲಿರುವ ಕಾನಾನ್ ದೇಶದವರ ಆಚಾರಗಳನ್ನು ನೀವು ಮಾಡಬಾರದು. ಇಲ್ಲವೆ ನೀವು ಅವರ ಪದ್ಧತಿಗಳನುಸಾರ ನಡೆಯಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀವು ವಾಸವಾಗಿದ್ದ ಐಗುಪ್ತ ದೇಶದ ಆಚಾರಗಳನ್ನು ಅನುಸರಿಸಬಾರದು; ನಾನು ನಿಮ್ಮನ್ನು ಬರಮಾಡುವ ಕಾನಾನ್ ದೇಶದ ಆಚರಣೆಗಳನ್ನು ನೀವು ಅನುಸರಿಸಬಾರದು, ಅವರಲ್ಲಿರುವ ನಿಯಮಗಳಿಗೆ ನೀವು ಒಳಗಾಗಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನೀವು ವಾಸವಾಗಿದ್ದ ಈಜಿಪ್ಟಿನ ಆಚಾರಗಳನ್ನು ಅನುಸರಿಸಬಾರದು; ನಾನು ನಿಮ್ಮನ್ನು ಕರೆದೊಯ್ಯುತ್ತಿರುವ ಕಾನಾನ್ ನಾಡಿನ ಆಚರಣೆಗಳನ್ನು ಕೂಡ ನೀವು ಅನುಸರಿಸಬಾರದು. ಅವರಲ್ಲಿರುವ ನಿಯಮಗಳಿಗೆ ನೀವು ಒಳಗಾಗಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನೀವು ವಾಸವಾಗಿದ್ದ ಐಗುಪ್ತದೇಶದ ಆಚಾರಗಳನ್ನು ಅನುಸರಿಸಬಾರದು; ನಾನು ನಿಮ್ಮನ್ನು ಬರಮಾಡುವ ಕಾನಾನ್‍ದೇಶದ ಆಚರಣೆಗಳನ್ನೂ ನೀವು ಅನುಸರಿಸಬಾರದು; ಅವರಲ್ಲಿರುವ ನಿಯಮಗಳಿಗೆ ನೀವು ಒಳಗಾಗಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಹಿಂದೆ ನೀವು ಈಜಿಪ್ಟಿನಲ್ಲಿ ವಾಸಿಸಿದಿರಿ. ಈಜಿಪ್ಟಿನ ಜನರು ಆಚರಿಸುವ ಆಚಾರಗಳನ್ನು ನೀವು ಅನುಸರಿಸಬಾರದು. ಆ ದೇಶದಲ್ಲಿ ಮಾಡುತ್ತಿದ್ದ ಕಾರ್ಯಗಳನ್ನು ನೀವು ಮಾಡಬಾರದು. ನಾನು ನಿಮ್ಮನ್ನು ಕಾನಾನಿಗೆ ನಡೆಸುತ್ತಿದ್ದೇನೆ. ಆ ದೇಶದಲ್ಲಿ ಮಾಡುವ ಕಾರ್ಯಗಳನ್ನು ನೀವು ಮಾಡಕೂಡದು. ಅವರ ಸಂಪ್ರದಾಯಗಳನ್ನು ಅನುಸರಿಸಬೇಡಿ. ಅಧ್ಯಾಯವನ್ನು ನೋಡಿ |