Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:30 - ಕನ್ನಡ ಸಮಕಾಲಿಕ ಅನುವಾದ

30 ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆದುದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡೆಸಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದೆ ನನ್ನ ನಿಯಮಗಳನ್ನೇ ಅನುಸರಿಸಿ ನಡೆಯಬೇಕು; ನಾನು ನಿಮ್ಮ ದೇವರಾದ ಯೆಹೋವನು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆದುದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡೆಸಿ ನಿಮ್ಮನ್ನೇ ಅಶುದ್ಧಮಾಡಿಕೊಳ್ಳದೆ ನನ್ನ ವಿಧಿಗಳನ್ನು ಅನುಸರಿಸಿ ನಡೆಯಬೇಕು. ನಾನೇ ನಿಮ್ಮ ದೇವರಾದ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆದದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡಿಸಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದೆ ನನ್ನ ವಿಧಿಗಳನ್ನೇ ಅನುಸರಿಸಿ ನಡೆಯಬೇಕು; ನಾನು ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅನ್ಯಜನರು ಆ ಭಯಂಕರ ಪಾಪಗಳನ್ನು ಮಾಡಿದ್ದಾರೆ. ಆದರೆ ನೀವು ನನ್ನ ಕಟ್ಟಳೆಗಳಿಗೆ ವಿಧೇಯರಾಗಬೇಕು. ನೀವು ಆ ಭಯಂಕರ ಪಾಪಗಳಲ್ಲಿ ಯಾವುದನ್ನೂ ಮಾಡಬಾರದು. ಆ ಭಯಂಕರ ಪಾಪಗಳಿಂದ ನಿಮ್ಮನ್ನು ಹೊಲೆ ಮಾಡಿಕೊಳ್ಳಬೇಡಿರಿ. ನಾನೇ ನಿಮ್ಮ ದೇವರಾದ ಯೆಹೋವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:30
14 ತಿಳಿವುಗಳ ಹೋಲಿಕೆ  

ನಾನು ನಿಮ್ಮೆದುರಿನಲ್ಲಿಯೇ ಹೊರಗೆ ಹಾಕಿದ ಜನಾಂಗಗಳಂತೆ ನೀವು ನಡೆಯಬಾರದು. ಏಕೆಂದರೆ ಅವರು ಇಂಥವುಗಳನ್ನೆಲ್ಲಾ ಮಾಡಿದ್ದಾರೆ. ಆದಕಾರಣ ನಾನು ಅವರನ್ನು ಕಂಡು ಅಸಹ್ಯಗೊಂಡಿದ್ದೇನೆ.


“ ‘ಯಾಜಕರು ಅದನ್ನು ಅಪವಿತ್ರ ಪಡಿಸಿದರೆ, ಅದರ ನಿಮಿತ್ತ ಅಪರಾಧಿಯಾಗಿ ಸಾಯದಂತೆ ನನ್ನ ವಿಧಿಗಳನ್ನು ಕೈಗೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.


ಹೀಗಿರುವುದರಿಂದ ನಿಮ್ಮ ಯೆಹೋವ ದೇವರನ್ನು ಪ್ರೀತಿಸಿ, ಅವರ ಅಪೇಕ್ಷೆ, ಅವರ ತೀರ್ಪು, ಅವರ ನಿಯಮ ಹಾಗು ಅವರ ಆಜ್ಞೆಗಳನ್ನು ಯಾವಾಗಲೂ ಕೈಗೊಳ್ಳಬೇಕು.


“ ‘ಏಕೆಂದರೆ ಯಾವನಾದರೂ ಈ ಅಸಹ್ಯವಾದವುಗಳಲ್ಲಿ ಯಾವುದನ್ನಾದರೂ ಮಾಡಿದರೆ, ಅವನನ್ನು ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.


ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,


ನೀವು ಭ್ರಮೆಗೊಂಡು ನಿಮ್ಮ ಮುಂದೆ ನಾಶವಾದವರ ಬಗ್ಗೆ ವಿಚಾರಣೆ ಮಾಡಬೇಡಿರಿ. “ಈ ಜನಾಂಗಗಳು ತಮ್ಮ ದೇವರುಗಳನ್ನು ಹೇಗೆ ಪೂಜಿಸಿದವು? ನಾವೂ ಹಾಗೆ ಮಾಡೋಣ,” ಎಂದು ಹೇಳಬೇಡಿರಿ.


ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ಯೆಹೋವ ದೇವರಿಗೆ ಅಸಹ್ಯವಾದ ಅನೇಕ ಸಂಗತಿಗಳನ್ನು ಮಾಡುತ್ತಾರೆ. ಅಂದರೆ, ಅವರು ತಮ್ಮ ಗಂಡು ಮಕ್ಕಳನ್ನು, ಹೆಣ್ಣು ಮಕ್ಕಳನ್ನು ತಮ್ಮ ದೇವರುಗಳಿಗೆ ಬಲಿಯಾಗಿ ಬೆಂಕಿಯಲ್ಲಿ ಸುಡುತ್ತಾರೆ. ಆದ್ದರಿಂದ ನೀವು ನಿಮ್ಮ ಯೆಹೋವ ದೇವರನ್ನು ಆ ರೀತಿಯಲ್ಲಿ ಆರಾಧಿಸಬಾರದು.


ಅವರು ಇಸ್ರಾಯೇಲಿನಲ್ಲಿ ಇಂಥ ದುಷ್ಕಾರ್ಯವನ್ನೂ ಅತಿರೇಕದ ಕೆಲಸವನ್ನೂ ಮಾಡಿದ್ದರಿಂದ, ನಾನು ನನ್ನ ಉಪಪತ್ನಿಯನ್ನು ಹಿಡಿದು, ಅವಳನ್ನು ಕಡಿದು, ಇಸ್ರಾಯೇಲಿನ ಬಾಧ್ಯತೆಯಾದ ಎಲ್ಲಾ ಸೀಮೆಗಳಿಗೆ ಕಳುಹಿಸಿದೆನು. ನೀವೆಲ್ಲರೂ ಇಸ್ರಾಯೇಲರಾಗಿದ್ದೀರಿ.


ಇದಲ್ಲದೆ ಪೂಜಾಸ್ಥಳಗಳಲ್ಲಿ ಪುರುಷಗಾಮಿಗಳಿದ್ದರು. ಅವರು ಇಸ್ರಾಯೇಲರ ಮುಂದೆ ಯೆಹೋವ ದೇವರು ಹೊರಡಿಸಿದ ಜನಾಂಗಗಳ ಸಕಲ ಅಸಹ್ಯ ಕಾರ್ಯಗಳನ್ನು ಮಾಡುತ್ತಾ ಇದ್ದರು.


ಇದಲ್ಲದೆ ಯೆಹೋವ ದೇವರು ಇಸ್ರಾಯೇಲರ ಮುಂದೆ ಹೊರಡಿಸಿಬಿಟ್ಟ ಅಮೋರಿಯರು ಮಾಡಿದ ಎಲ್ಲಾ ವಿಗ್ರಹಗಳನ್ನು ಹಿಂಬಾಲಿಸಿ ಅಸಹ್ಯವಾಗಿ ನಡೆದನು.


ಈ ಸಂಗತಿಗಳನ್ನು ಮಾಡಿದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು, “ಇಸ್ರಾಯೇಲರೂ, ಯಾಜಕರೂ, ಲೇವಿಯರೂ ತಮ್ಮ ನೆರೆಯವರಿಂದ ಪ್ರತ್ಯೇಕಿಸಿಕೊಳ್ಳಲಿಲ್ಲ. ಅವರು ಕಾನಾನ್ಯರು, ಹಿತ್ತಿಯರು, ಪೆರಿಜೀಯರು, ಯೆಬೂಸಿಯರು, ಅಮ್ಮೋನ್ಯರು, ಮೋವಾಬ್ಯರು, ಈಜಿಪ್ಟರು, ಅಮೋರಿಯರು ಇವರ ಅಸಹ್ಯ ಸಂಗತಿಗಳ ಪದ್ಧತಿಗಳಂತೆ ನಡೆಯುತ್ತಾ ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು