Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:6 - ಕನ್ನಡ ಸಮಕಾಲಿಕ ಅನುವಾದ

6 “ ‘ನಿಮ್ಮಲ್ಲಿ ಯಾವನಾದರೂ ತನ್ನ ಹತ್ತಿರ ಸಂಬಂಧಿಯೊಡನೆ ಲೈಂಗಿಕ ಸಂಬಂಧ ಬೆಳೆಸಬಾರದು, ನಾನೇ ಯೆಹೋವ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “‘ನಿಮ್ಮಲ್ಲಿ ಯಾರೂ ರಕ್ತಸಂಬಂಧವುಳ್ಳ ಸ್ತ್ರೀಯ ಸಹವಾಸವನ್ನು ಮಾಡಬಾರದು, ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿಮ್ಮಲ್ಲಿ ಯಾರೂ ರಕ್ತಸಂಬಂಧವುಳ್ಳವರೊಡನೆ ಮೈಗೂಡಿಸಕೂಡದು; ನಾನೇ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿಮ್ಮಲ್ಲಿ ಯಾರೂ ರಕ್ತಸಂಬಂಧವುಳ್ಳ ಸ್ತ್ರೀಯ ಸಹವಾಸವನ್ನು ಮಾಡಬಾರದು; ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ನೀವು ಎಂದಿಗೂ ನಿಮ್ಮ ಹತ್ತಿರದ ಸಂಬಂಧಿಗಳೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ನಾನೇ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:6
9 ತಿಳಿವುಗಳ ಹೋಲಿಕೆ  

ಅದರ ಬದಲಾಗಿ ನಾವು ಅವರಿಗೆ, ದೇವರಲ್ಲದವುಗಳಿಂದ ಮಲಿನವಾದ ಆಹಾರದಿಂದಲೂ ಅನೈತಿಕತೆಯಿಂದಲೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಯ ಮಾಂಸದಿಂದಲೂ ರಕ್ತದಿಂದಲೂ ದೂರವಿರಬೇಕು.


ಆದ್ದರಿಂದ ನೀವು ನನ್ನ ನಿಯಮಗಳನ್ನೂ, ನನ್ನ ನಿರ್ಣಯಗಳನ್ನೂ ಕೈಗೊಳ್ಳಿರಿ. ಇವುಗಳನ್ನು ಅನುಸರಿಸುವವರು ನಿಯಮಗಳ ಮೂಲಕವೇ ಬದುಕುವರು, ನಾನೇ ಯೆಹೋವ ದೇವರು.


ಆ ರಾತ್ರಿಯಲ್ಲಿ ಅವರು ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು. ಆಗ ಹಿರಿಯ ಮಗಳು ಬಂದು ತನ್ನ ತಂದೆಯ ಸಂಗಡ ಮಲಗಿಕೊಂಡಳು. ಅವಳು ಮಲಗಿಕೊಂಡದ್ದೂ, ಎದ್ದು ಹೋದದ್ದೂ ಅವನಿಗೆ ತಿಳಿಯಲಿಲ್ಲ.


ಆದರೆ ತನ್ನ ಹತ್ತಿರದ ಸಂಬಂಧಿಯಾಗಿ, ಅಂದರೆ ಅವನ ತಾಯಿಯಾಗಿ, ತಂದೆಯಾಗಿ, ಅವನ ಮಗನಿಗಾಗಿ, ಅವನ ಮಗಳಿಗಾಗಿ, ಅವನ ಸಹೋದರನಿಗಾಗಿ,


ನಿಮ್ಮಲ್ಲಿ ತಂದೆಯ ಹಾಸಿಗೆಯನ್ನು ಅವಮಾನಿಸುವವರು ಇದ್ದಾರೆ, ನಿನ್ನಲ್ಲಿ ಮುಟ್ಟಿನಿಂದ ಅಶುದ್ಧಳಾದವಳನ್ನು ಕೂಡಿದ್ದಾರೆ.


ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ಅಸಹ್ಯಕರವಾದದ್ದನ್ನು ಮಾಡಿದ್ದಾನೆ; ಮತ್ತೊಬ್ಬನು ಅತ್ಯಾಚಾರದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಮಾನಭಂಗಪಡಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು