Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:7 - ಕನ್ನಡ ಸಮಕಾಲಿಕ ಅನುವಾದ

7 “ ‘ನಿನ್ನ ತಾಯಿಯೊಂದಿಗೆ ಲೈಂಗಿಕ ಸಂಬಂಧ ಮಾಡಿ, ನಿನ್ನ ತಂದೆಯನ್ನು ಅಗೌರವಿಸಬೇಡ. ಆಕೆ ನಿನ್ನ ತಾಯಿ: ಆಕೆಯೊಂದಿಗೆ ಇಂಥ ಸಂಬಂಧ ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ತಾಯಿಯನ್ನು ಎಷ್ಟು ಮಾತ್ರವೂ ಸಂಗಮಿಸಬಾರದು, ಆಕೆ ಹೆತ್ತವಳಲ್ಲವೇ; ಸಂಗಮಿಸಿದರೆ ತಂದೆಗೆ ಮಾನಭಂಗವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ನಿನ್ನ ತಂದೆಯೊಡನೇ ಆಗಲಿ, ತಾಯಿಯೊಡನೆ ಆಗಲಿ ಸಂಭೋಗಿಸಕೂಡದು, ತಾಯಿಯೊಡನೆ ಎಷ್ಟು ಮಾತ್ರವೂ ಸಂಗಮಿಸಬಾರದು. ಆಕೆ ನಿನ್ನ ಹೆತ್ತ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ತಾಯಿಯನ್ನು ಎಷ್ಟು ಮಾತ್ರವೂ ಸಂಗವಿುಸಬಾರದು; ಆಕೆ ಹೆತ್ತವಳಲ್ಲವೆ; ಸಂಗವಿುಸಿದರೆ ತಂದೆಗೆ ಮಾನಭಂಗವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ತಾಯಿಯೊಂದಿಗೆ ಲೈಂಗಿಕ ಸಂಬಂಧ ಮಾಡಿ ನಿಮ್ಮ ತಂದೆಗೆ ಎಂದಿಗೂ ಅವಮಾನ ತರಬಾರದು. ಆಕೆ ನಿಮ್ಮ ತಾಯಿಯಾಗಿದ್ದಾಳೆ. ನೀವು ಆಕೆಯೊಂದಿಗೆ ಎಂದಿಗೂ ಲೈಂಗಿಕ ಸಂಬಂಧ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:7
7 ತಿಳಿವುಗಳ ಹೋಲಿಕೆ  

“ ‘ತನ್ನ ತಂದೆಯ ಹೆಂಡತಿಯೊಡನೆ ಸಂಗಮಿಸುವವನು ತನ್ನ ತಂದೆಗೆ ಮಾನಭಂಗ ಮಾಡಿದಂತೆ. ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು. ಅವರ ರಕ್ತವು ಅವರ ಮೇಲೆ ಇರುವುದು.


ನಿಮ್ಮಲ್ಲಿ ತಂದೆಯ ಹಾಸಿಗೆಯನ್ನು ಅವಮಾನಿಸುವವರು ಇದ್ದಾರೆ, ನಿನ್ನಲ್ಲಿ ಮುಟ್ಟಿನಿಂದ ಅಶುದ್ಧಳಾದವಳನ್ನು ಕೂಡಿದ್ದಾರೆ.


“ ‘ಒಬ್ಬ ಮನುಷ್ಯನು ಒಬ್ಬ ಸ್ತ್ರೀಯನ್ನೂ, ಅವಳ ತಾಯಿಯನ್ನೂ ಮದುವೆ ಮಾಡಿಕೊಂಡರೆ ಅದು ದುಷ್ಟತನವಾಗಿದೆ. ಆದ್ದರಿಂದ ನಿಮ್ಮಲ್ಲಿ ದುಷ್ಟತನವು ಇರದಂತೆ ಆ ಮೂರು ಜನರನ್ನು ಬೆಂಕಿಯಿಂದ ಸುಡಿಸಿಬಿಡಬೇಕು.


“ ‘ನಿಮ್ಮಲ್ಲಿ ಯಾವನಾದರೂ ತನ್ನ ಹತ್ತಿರ ಸಂಬಂಧಿಯೊಡನೆ ಲೈಂಗಿಕ ಸಂಬಂಧ ಬೆಳೆಸಬಾರದು, ನಾನೇ ಯೆಹೋವ ದೇವರು.


ಅವರು, “ಮಲತಾಯಿಯ ಸಂಗಡ ಅನೈತಿಕವಾಗಿ ನಡೆದು ತನ್ನ ತಂದೆಯ ಹಾಸಿಗೆಯನ್ನು ಅವಮಾನಪಡಿಸಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ಆದ್ದರಿಂದ ನಾವು ನಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ, ನಾವು ಅವನ ಸಂಗಡ ಮಲಗಿಕೊಳ್ಳೋಣ. ಏಕೆಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು