Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:8 - ಕನ್ನಡ ಸಮಕಾಲಿಕ ಅನುವಾದ

8 “ ‘ನಿನ್ನ ಮಲತಾಯಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಅದು ನಿನ್ನ ತಂದೆಗೆ ಅಗೌರವವನ್ನುಂಟು ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮಲತಾಯಿಯ ಜೊತೆ ಸಂಗಮಿಸಬಾರದು; ಆಕೆ ತಂದೆಗೆ ಹೆಂಡತಿಯಾದವಳಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಮಲತಾಯಿಯನ್ನು ಸಂಭೋಗಿಸಬಾರದು; ಹಾಗೆ ಮಾಡಿದರೆ ತಂದೆಗೆ ಮಾನಭಂಗವಾಗುವುದು. ಆಕೆ ನಿನ್ನ ತಂದೆಯ ಅರ್ಧಾಂಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮಲತಾಯಿಯ ಸಂಗ ಮಾಡಬಾರದು; ಆಕೆ ತಂದೆಗೆ ಹೆಂಡತಿಯಾದವಳಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮಲತಾಯಿಯೊಂದಿಗೂ ಲೈಂಗಿಕ ಸಂಬಂಧ ಮಾಡಬಾರದು. ಅದು ನಿಮ್ಮ ತಂದೆಗೆ ಅವಮಾನ ತರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:8
10 ತಿಳಿವುಗಳ ಹೋಲಿಕೆ  

ಯೆಹೂದ್ಯರಲ್ಲದವರಲ್ಲಿ ನಡೆಯದೇ ಇರುವಂಥ ಅನೈತಿಕತೆ ನಿಮ್ಮಲ್ಲಿದೆಯೆಂದು ವಾಸ್ತವವಾಗಿ ವರದಿ ಬಂದಿದೆ: ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ.


“ ‘ತನ್ನ ತಂದೆಯ ಹೆಂಡತಿಯೊಡನೆ ಸಂಗಮಿಸುವವನು ತನ್ನ ತಂದೆಗೆ ಮಾನಭಂಗ ಮಾಡಿದಂತೆ. ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು. ಅವರ ರಕ್ತವು ಅವರ ಮೇಲೆ ಇರುವುದು.


ಅವರು, “ಮಲತಾಯಿಯ ಸಂಗಡ ಅನೈತಿಕವಾಗಿ ನಡೆದು ತನ್ನ ತಂದೆಯ ಹಾಸಿಗೆಯನ್ನು ಅವಮಾನಪಡಿಸಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ಯಾರೂ ತನ್ನ ತಂದೆಯ ಹೆಂಡತಿಯನ್ನು ಮದುವೆ ಮಾಡಿಕೊಳ್ಳಬಾರದು. ತನ್ನ ತಂದೆಯ ಹಾಸಿಗೆಯನ್ನು ಅಗೌರವಿಸಬಾರದು.


ಬಡವರ ತಲೆಗಳನ್ನು ಬೀದಿಯ ಧೂಳಿನಂತೆ ತುಳಿದು ಬಿಡುತ್ತಾರೆ. ದೀನದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತಾರೆ. ತಂದೆಯೂ ಮಗನೂ ಒಬ್ಬ ಮಹಿಳೆಯನ್ನು ಇಟ್ಟುಕೊಂಡು, ನನ್ನ ಪವಿತ್ರ ನಾಮಕ್ಕೆ ಅಪಕೀರ್ತಿ ತರುತ್ತಾರೆ.


ನೀರಿನಂತೆ ಚಂಚಲನಾಗಿದ್ದು, ನೀನು ಶ್ರೇಷ್ಠನಾಗುವುದಿಲ್ಲ. ಏಕೆಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆಮಾಡಿದೆ, ನನ್ನ ಹಾಸಿಗೆಯನ್ನು ಏರಿದೆ.


ನಿಮ್ಮಲ್ಲಿ ತಂದೆಯ ಹಾಸಿಗೆಯನ್ನು ಅವಮಾನಿಸುವವರು ಇದ್ದಾರೆ, ನಿನ್ನಲ್ಲಿ ಮುಟ್ಟಿನಿಂದ ಅಶುದ್ಧಳಾದವಳನ್ನು ಕೂಡಿದ್ದಾರೆ.


ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ, ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿ ಬಿಲ್ಹಳ ಸಂಗಡ ಮಲಗಿದನು. ಈ ವಿಷಯ ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಪುತ್ರರು ಇದ್ದರು.


ಬೀಜ ಹೊಡಿಸಿಕೊಂಡವರು ಅಥವಾ ಜನನ ಇಂದ್ರಿಯ ಕತ್ತರಿಸಿಕೊಂಡವರು ಯೆಹೋವ ದೇವರ ಸಭೆಗೆ ಸೇರಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು