Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:9 - ಕನ್ನಡ ಸಮಕಾಲಿಕ ಅನುವಾದ

9 “ ‘ನಿನ್ನ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಆಕೆ ನಿನ್ನ ತಂದೆಯ ಮಗಳಾಗಿರಬಹುದು ಇಲ್ಲವೆ ತಾಯಿಯ ಮಗಳಾಗಿರಬಹುದು. ಆಕೆ ಒಂದೇ ಮನೆಯಲ್ಲಿ ಹುಟ್ಟಿರಬಹುದು ಇಲ್ಲವೆ ಬೇರೆ ಕಡೆಯಲ್ಲಿ ಹುಟ್ಟಿರಬಹುದು ಆಕೆಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಬಾರದು; ಅವರು ಒಡ ಹುಟ್ಟಿದವರು ಇಲ್ಲವೇ ಪರಸ್ತ್ರೀಯಲ್ಲಿ ಹುಟ್ಟಿದವರಾದರೂ ನಿಮಗೆ ಅಕ್ಕತಂಗಿಯರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ತಂದೆಯ ಮಗಳನ್ನಾಗಲಿ, ತಾಯಿಯ ಮಗಳನ್ನಾಗಲಿ ಸಂಭೋಗಿಸಬಾರದು; ಅವರು ಒಡಹುಟ್ಟಿದವರು; ಪರಸ್ತ್ರೀಯರಲ್ಲಿ ಹುಟ್ಟಿದವರಾದರೂ ಅವರು ನಿಮಗೆ ಅಕ್ಕತಂಗಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ತಂದೆಯ ಮಗಳನ್ನಾಗಲಿ ತಾಯಿಯ ಮಗಳನ್ನಾಗಲಿ ಇಟ್ಟುಕೊಳ್ಳಬಾರದು; ಅವರು ಒಡಹುಟ್ಟಿದವರಾದರೂ ಪರಸ್ತ್ರೀಯಲ್ಲಿ ಹುಟ್ಟಿದವರಾದರೂ ನಿಮಗೆ ಅಕ್ಕತಂಗಿಯರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಸಹೋದರಿಯೊಂದಿಗೆ, ಅಂದರೆ ನಿಮ್ಮ ತಂದೆ ಅಥವಾ ತಾಯಿಯ ಮಗಳೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ನಿಮ್ಮ ಸಹೋದರಿಯು ನಿಮ್ಮ ಮನೆಯಲ್ಲಾಗಲಿ ಅಥವಾ ಇನ್ನೊಂದು ಸ್ಥಳದಲ್ಲಾಗಲಿ ಹುಟ್ಟಿದರೂ ಆಕೆಯೊಡನೆ ಲೈಂಗಿಕ ಸಂಬಂಧ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:9
6 ತಿಳಿವುಗಳ ಹೋಲಿಕೆ  

“ ‘ಒಬ್ಬನು ತನ್ನ ತಂದೆಯ ಇಲ್ಲವೆ ತನ್ನ ತಾಯಿಯ ಮಗಳಾದ ತನ್ನ ಸಹೋದರಿಯ ಬೆತ್ತಲೆತನವನ್ನು ನೋಡಿದರೆ, ಇಲ್ಲವೆ ಅವಳು ಅವನ ಬೆತ್ತಲೆತನವನ್ನು ನೋಡಿದರೆ ಅದು ದುಷ್ಟತನವೇ. ಅವರನ್ನು ತಮ್ಮ ಜನರ ಮಧ್ಯದಿಂದ ತೆಗೆದುಹಾಕಬೇಕು. ಅವರ ರಕ್ತವು ಅವರ ಮೇಲೆ ಇರುವುದು. ಅವನು ತನ್ನ ಸಹೋದರಿಯನ್ನು ಸಂಗಮಿಸಿದ್ದರಿಂದ ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳುವನು.


ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ಅಸಹ್ಯಕರವಾದದ್ದನ್ನು ಮಾಡಿದ್ದಾನೆ; ಮತ್ತೊಬ್ಬನು ಅತ್ಯಾಚಾರದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಮಾನಭಂಗಪಡಿಸಿದ್ದಾನೆ.


ಅವರು, “ತನ್ನ ತಂದೆಯ ಮಗಳ ಸಂಗಡವಾಗಲಿ, ತಾಯಿಯ ಮಗಳ ಸಂಗಡವಾಗಲಿ ಅನೈತಿಕವಾಗಿ ನಡೆದುಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


“ ‘ನಿನ್ನ ತಂದೆಯಿಂದ ಜನಿಸಿದ ನಿನ್ನ ತಂದೆಯ ಮಗಳೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಆಕೆ ನಿನ್ನ ಸಹೋದರಿ.


“ ‘ನಿನ್ನ ಮಗನ ಮಗಳ ಕೂಡ, ಇಲ್ಲವೆ ಮಗಳ ಮಗಳ ಕೂಡ ಲೈಂಗಿಕ ಸಂಬಂಧ ಮಾಡಬೇಡ. ಅದು ನಿನಗೆ ಅಗೌರವವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು