ಯಾಜಕಕಾಂಡ 19:14 - ಕನ್ನಡ ಸಮಕಾಲಿಕ ಅನುವಾದ14 “ ‘ಕಿವುಡನನ್ನು ಶಪಿಸಬಾರದು. ಇಲ್ಲವೆ ಕಣ್ಣು ಕಾಣದವನನ್ನು ಮುಗ್ಗರಿಸುವಂತೆ ಮಾಡಬಾರದು. ನಿಮ್ಮ ದೇವರಿಗೆ ಭಯಪಡಬೇಕು. ನಾನೇ ಯೆಹೋವ ದೇವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಕಿವುಡರನ್ನು ದೂಷಿಸಬಾರದು; ಕುರುಡರು ನಡೆಯುವ ದಾರಿಯಲ್ಲಿ ಅವರ ಕಾಲು ಎಡವುವಂತೆ ಕಲ್ಲನ್ನು ಇಡಬಾರದು; ನಿಮ್ಮ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ಯೆಹೋವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಕಿವುಡರನ್ನು ದೂಷಿಸಬೇಡ; ಕುರುಡರು ನಡೆಯುವ ದಾರಿಯಲ್ಲಿ ಎರಡು ಕಲ್ಲನ್ನು ಇಡಬೇಡ, ನಿನ್ನ ದೇವರಲ್ಲಿ ಭಯಭಕ್ತಿಯಿರಲಿ, ನಾನೇ ಸರ್ವೇಶ್ವರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಕಿವುಡರನ್ನು ದೂಷಿಸಬಾರದು; ಕುರುಡರು ನಡೆಯುವ ದಾರಿಯಲ್ಲಿ ಕಾಲು ಎಡವುವಂತೆ ಕಲ್ಲನ್ನು ಇಡಬಾರದು; ನಿಮ್ಮ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ಯೆಹೋವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ನೀವು ಕಿವುಡನನ್ನು ಶಪಿಸಬಾರದು. ಕುರುಡನು ಬೀಳುವಂತೆ ನೀವು ಅವನ ಮುಂದೆ ಅಡ್ಡವಾಗಿ ಏನನ್ನೂ ಇಡಬಾರದು. ಆದರೆ ನೀವು ನಿಮ್ಮ ದೇವರನ್ನು ಸನ್ಮಾನಿಸಬೇಕು. ನಾನೇ ನಿಮ್ಮ ದೇವರಾದ ಯೆಹೋವನು. ಅಧ್ಯಾಯವನ್ನು ನೋಡಿ |