ಯಾಜಕಕಾಂಡ 19:15 - ಕನ್ನಡ ಸಮಕಾಲಿಕ ಅನುವಾದ15 “ ‘ವ್ಯಾಜ್ಯ ತೀರಿಸುವಾಗ ನೀನು ಅನ್ಯಾಯ ಮಾಡದಿರು. ಬಡವನ ಮುಖ ದಾಕ್ಷಿಣ್ಯವನ್ನಾಗಲಿ, ಬಲಿಷ್ಠನ ಘನತೆಯನ್ನಾಗಲಿ ಲಕ್ಷಿಸದೆ ನಿಷ್ಪಕ್ಷಪಾತವಾಗಿ ತೀರ್ಪುಕೊಡು. ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯವಾಗಿ ತೀರ್ಪುಮಾಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “‘ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ಅಥವಾ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ, ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ವ್ಯಾಜ್ಯತೀರಿಸುವಾಗ ಅನ್ಯಾಯವಾದ ತೀರ್ಪನ್ನು ಕೊಡಬೇಡ. ಬಡವನ ಬಡತನವನ್ನಾಗಲಿ, ದೊಡ್ಡವನ ಘನತೆಯನ್ನಾಗಲಿ ಲಕ್ಷ್ಯಮಾಡದೆ ಪಕ್ಷಪಾತವಿಲ್ಲದ ತೀರ್ಪನ್ನು ಕೊಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ನೀವು ಕೊಡುವ ತೀರ್ಪು ನ್ಯಾಯವಾಗಿರಬೇಕು. ಬಡವರ ಬಡತನವನ್ನಾಗಲಿ ಪ್ರಾಮುಖ್ಯರ ದೊಡ್ಡಸ್ತಿಕೆಯನ್ನಾಗಲಿ ಗಮನಿಸದೆ ಪಕ್ಷಪಾತವಿಲ್ಲದೆ ತೀರ್ಪುಕೊಡಬೇಕು. ನೀವು ನಿಮ್ಮ ನೆರೆಯವನಿಗೆ ತೀರ್ಪುಮಾಡುವಾಗ ನ್ಯಾಯದ ತೀರ್ಪುಕೊಡಿರಿ. ಅಧ್ಯಾಯವನ್ನು ನೋಡಿ |