Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:18 - ಕನ್ನಡ ಸಮಕಾಲಿಕ ಅನುವಾದ

18 “ ‘ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆ ಮುಯ್ಯಿ ತೀರಿಸದವನಾಗಿಯೂ, ಸೇಡು ತೀರಿಸದೆಯೂ ಇರು. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು. ನಾನೇ ಯೆಹೋವ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “‘ನಿಮ್ಮ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡನ್ನು ಮಾಡದೆ, ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ, ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಿನ್ನ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡು ಮಾಡಬೇಡ, ಅವರಿಗೆ ವಿರುದ್ಧ ಮತ್ಸರ ಇಟ್ಟುಕೊಳ್ಳಬೇಡ; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು. ನಾನು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿಮ್ಮ ಸ್ವಜನರಲ್ಲಿ ಯಾರಿಗಾದರೂ ಕೇಡಿಗೆ ಕೇಡನ್ನು ಮಾಡದೆ ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಜನರು ನಿಮಗೆ ಮಾಡುವ ಕೆಟ್ಟಕಾರ್ಯಗಳನ್ನು ಮರೆತುಬಿಡಿರಿ. ನಿಮ್ಮ ಜನರಲ್ಲಿ ಒಬ್ಬನಾಗಿರುವವನ ಮೇಲೆ ಸೇಡನ್ನು ತೀರಿಸಿಕೊಳ್ಳಲು ಪ್ರಯತ್ನಿಸಬೇಡಿರಿ; ದ್ವೇಷವನ್ನೂ ಇಟ್ಟುಕೊಳ್ಳಬೇಡಿ. ನಿಮ್ಮ ನೆರೆಯವನನ್ನು ನಿಮ್ಮಂತೆಯೇ ಪ್ರೀತಿಸಿರಿ. ನಾನೇ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:18
30 ತಿಳಿವುಗಳ ಹೋಲಿಕೆ  

ಏಕೆಂದರೆ, “ವ್ಯಭಿಚಾರ ಮಾಡಬೇಡ, ಕೊಲೆ ಮಾಡಬೇಡ, ಕದಿಯಬೇಡ, ದುರಾಶೆ ಪಡಬೇಡ,” ಎನ್ನುವ ಹಾಗೂ ಇತರ ಯಾವ ಆಜ್ಞೆಗಳೇ ಇರಲಿ ಅವೆಲ್ಲವೂ, “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು,” ಎಂಬ ಒಂದೇ ಮಾತಿನಲ್ಲಿವೆ.


ಏಕೆಂದರೆ, “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು,” ಎಂಬ ಒಂದೇ ಆಜ್ಞೆಯಲ್ಲಿ ನಿಯಮವೆಲ್ಲಾ ಅಡಕವಾಗಿದೆ.


“ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು!” ಎಂದು ಪವಿತ್ರ ವೇದದಲ್ಲಿ ಬರೆದಿದೆ. ಈ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಉತ್ತಮವಾದದ್ದನ್ನು ಮಾಡುವವರಾಗಿರುವಿರಿ.


ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು,” ಎಂದು ಹೇಳಿದರು.


ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸದೆ, ಅದನ್ನು ದೇವರ ಕೋಪಕ್ಕೆ ಬಿಟ್ಟುಬಿಡಿರಿ. ಏಕೆಂದರೆ, “ಮುಯ್ಯಿ ತೀರಿಸುವುದು ನನಗೆ ಸೇರಿದ್ದು. ನಾನು ಅದನ್ನು ತೀರಿಸುವೆನು, ಎಂದು ಕರ್ತನು ಹೇಳುತ್ತಾರೆ,” ಎಂದು ಪವಿತ್ರ ವೇದದಲ್ಲಿ ಬರೆಯಲಾಗಿದೆ.


ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿಯೂ ಒಳ್ಳೆಯದನ್ನು ಮಾಡಿರಿ.


ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ, ನಿಮ್ಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ.


ಎಲ್ಲಾ ಕಹಿತನ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಎಲ್ಲಾ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ.


ನೀನು, “ಕೇಡಿಗೆ ಮುಯ್ಯಿತೀರಿಸುವೆನು,” ಎಂದು ಹೇಳಬೇಡ; ಯೆಹೋವ ದೇವರನ್ನು ನಿರೀಕ್ಷಿಸು; ಆಗ ಅವರೇ ನಿಮ್ಮನ್ನು ರಕ್ಷಿಸಿ ಉದ್ಧರಿಸುವನು.


ಆದಕಾರಣ, ಎಲ್ಲಾ ದ್ವೇಷವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೆಕಿಚ್ಚನ್ನೂ ಎಲ್ಲಾ ಅಪವಾದಗಳನ್ನೂ ವಿಸರ್ಜಿಸಿರಿ.


ಏಕೆಂದರೆ, “ಮುಯ್ಯಿ ತೀರಿಸುವುದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆನು,” ಎಂದು ಹೇಳಿದ ಕರ್ತದೇವರನ್ನು ನಾವು ಬಲ್ಲೆವು. ಇದಲ್ಲದೆ, “ಕರ್ತದೇವರು ತಮ್ಮ ಜನರಿಗೆ ನ್ಯಾಯತೀರಿಸುವರು,” ಎಂದೂ ಹೇಳಲಾಗಿದೆ.


ಆಗ ಒಬ್ಬನು ಬಂದು ಯೇಸುವಿಗೆ, “ಒಳ್ಳೆಯ ಬೋಧಕರೇ, ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆಯ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು.


ಏಕೆಂದರೆ, ಅವನು ನಿನಗೆ ಒಳ್ಳೆಯದನ್ನು ಮಾಡುವುದಕ್ಕೋಸ್ಕರ ಇರುವ ದೇವರ ಸೇವಕನಾಗಿರುತ್ತಾನೆ. ಆದರೆ ನೀನು ಕೆಟ್ಟದ್ದನ್ನು ಮಾಡುವವನಾಗಿದ್ದರೆ ಭಯಪಡಬೇಕು. ಏಕೆಂದರೆ ಅವನು ವ್ಯರ್ಥವಾಗಿ ಅಧಿಕಾರವನ್ನು ಪಡೆದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಅಭ್ಯಾಸ ಮಾಡುವವನಿಗೆ ದಂಡನೆಯನ್ನು ವಿಧಿಸುತ್ತಾನೆ.


ಅಬ್ಷಾಲೋಮನು ತನ್ನ ಸೇವಕರಿಗೆ, “ನೀವು ನೋಡಿಕೊಳ್ಳಿರಿ. ಅಮ್ನೋನನ ಮನಸ್ಸು ದ್ರಾಕ್ಷಾರಸದಿಂದ ಅಮಲೇರಿದಾಗ ನಾನು ನಿಮಗೆ ಅವನನ್ನು ಹೊಡೆಯಿರಿ ಎಂದು ಹೇಳಿದಕೂಡಲೆ, ಅವನನ್ನು ಕೊಂದುಹಾಕಿರಿ, ಭಯಪಡಬೇಡಿರಿ. ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ, ಧೈರ್ಯವಾಗಿರಿ, ಶೂರರಾಗಿರಿ,” ಎಂದು ಹೇಳಿದನು.


ಆದರೆ ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೆಯದಾದರೂ, ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಏಕೆಂದರೆ ಅವನು ತನ್ನ ಸಹೋದರಿಯಾದ ತಾಮಾರಳನ್ನು ಅವಮಾನ ಮಾಡಿದ್ದರಿಂದ, ಅಬ್ಷಾಲೋಮನು ಅವನನ್ನು ಹಗೆ ಮಾಡಿದನು.


ಮನೆಯ ಹೊರಗೆ ಖಡ್ಗವೂ ಒಳಗೆ ಭಯವೂ ಇವರಲ್ಲಿರುವುವು. ಪ್ರಾಯಸ್ಥರೂ ಕನ್ನಿಕೆಯರೂ ನರೆಕೂದಲಿನವರೂ ಹಾಲು ಕುಡಿಯುವ ಕೂಸುಗಳೂ ಖಡ್ಗಗಳಿಗೆ ಸಂಹಾರವಾಗುವರು.


ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಸ್ವಾರ್ಥತ್ವ, ವಿರೋಧತ್ವ, ಭಿನ್ನತೆ,


ಅವರು ಯಾವಾಗಲೂ ತಪ್ಪುಹುಡುಕುವವರಲ್ಲ; ದೇವರು ತಮ್ಮ ಕೋಪವನ್ನು ಎಂದೆಂದಿಗೂ ಕೂಡಿಟ್ಟುಕೊಳ್ಳುವವರು ಅಲ್ಲ;


“ನಾನು ನಿಮಗೊಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.


ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಸಹೋದರಿಯನ್ನೂ ಪ್ರೀತಿಸಬೇಕೆಂಬ ಈ ಆಜ್ಞೆಯನ್ನು ನಾವು ದೇವರಿಂದ ಹೊಂದಿದ್ದೇವೆ.


ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು: “ಆದಾ, ಚಿಲ್ಲಾ, ನನ್ನ ಮಾತನ್ನು ಕೇಳಿರಿ. ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು. ನನ್ನನ್ನು ಹೊಡೆದ ಯುವಕನನ್ನು ಹತ ಮಾಡಿದೆನು.


ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಬೇಡ.


ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೇ ಸ್ವದೇಶದವನಂತಿರಲಿ. ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಏಕೆಂದರೆ ನೀವು ಸಹ ಈಜಿಪ್ಟ್ ದೇಶದಲ್ಲಿ ಪರಕೀಯರಾಗಿದ್ದಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ಮುಯ್ಯಿಗೆ ಮುಯ್ಯಿ ತೀರಿಸುವುದೂ, ಪ್ರತಿಫಲ ಕೊಡುವುದೂ ನನ್ನದೇ. ತಕ್ಕ ಕಾಲದಲ್ಲಿ ಅವರ ಕಾಲು ಜಾರುವುದು. ಅವರ ವಿನಾಶದ ದಿವಸ ಸಮೀಪವಾಗಿದೆ. ಅವರಿಗೆ ಸಿದ್ಧವಾದ ದುರ್ಗತಿಯ ಕಾಲ ಬೇಗ ಬರುತ್ತವೆ.”


ಆದರೆ ಪೌಲನು, “ನೀನು ಹಾನಿ ಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲಿಯೇ ಇದ್ದೇವೆ,” ಎಂದು ಗಟ್ಟಿಯಾಗಿ ಕೂಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು