ಯಾಜಕಕಾಂಡ 19:20 - ಕನ್ನಡ ಸಮಕಾಲಿಕ ಅನುವಾದ20 “ ‘ಒಬ್ಬ ಪುರುಷನಿಗೆ ನಿಶ್ಚಿತವಾಗಿರುವ ದಾಸಿಯಾದ ಒಬ್ಬ ಸ್ತ್ರೀಯೊಂದಿಗೆ ಒಬ್ಬ ಮನುಷ್ಯನು ಸಂಗಮಿಸುವುದಕ್ಕಾಗಿ ಮಲಗಿದರೆ ಅವಳು ಬಿಡುಗಡೆಯನ್ನು ಹೊಂದಿರದಿದ್ದರೆ, ಇಲ್ಲವೆ ಅವಳಿಗೆ ಸ್ವಾತಂತ್ರ್ಯವನ್ನು ಕೊಡದಿರದಿದ್ದರೆ, ತಕ್ಕ ಶಿಕ್ಷೆಯಾಗಬೇಕು. ಅವಳು ಸ್ವತಂತ್ರಳಲ್ಲದ ಕಾರಣ ಅವಳಿಗೆ ಮರಣದಂಡನೆಯನ್ನು ವಿಧಿಸಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 “‘ಒಬ್ಬನ ಅಧೀನದಲ್ಲಿರುವ ದಾಸಿ ಹಣಕೊಡುವುದರಿಂದಾಗಲಿ ಅಥವಾ ಉಚಿತವಾಗಿಯಾಗಲಿ ಬಿಡುಗಡೆಯನ್ನು ಹೊಂದದೆ ಇದ್ದರೆ, ಯಾವನಾದರೂ ಅವಳನ್ನು ಸಂಗಮಿಸಿದರೆ ಅವರಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯವಾಗಿ ನ್ಯಾಯವಿಚಾರಣೆ ಆಗಬೇಕು. ಅವಳು ಸ್ವತಂತ್ರಳಲ್ಲವಾದುದರಿಂದ ಅವರಿಗೆ ಮರಣಶಿಕ್ಷೆಯನ್ನು ವಿಧಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 “ಒಬ್ಬನ ಅಧೀನದಲ್ಲಿರುವ ದಾಸಿ ಹಣ ಕೊಡುವುದರಿಂದಾಗಲಿ, ಉಚಿತವಾಗಿಯಾಗಲಿ ಬಿಡುಗಡೆ ಹೊಂದದೆ ಇರುವಾಗ ಇನ್ನೊಬ್ಬ ವ್ಯಕ್ತಿ ಅವಳನ್ನು ಕೂಡಿದರೆ ಅವರಿಗೆ ವಿಧಿಸಬೇಕಾದ ಶಿಕ್ಷೆಯ ಬಗ್ಗೆ ನ್ಯಾಯವಿಚಾರಣೆ ಆಗಬೇಕು. ಆದರೆ ಮರಣಶಿಕ್ಷೆ ವಿಧಿಸಬಾರದು. ಏಕೆಂದರೆ ಅವಳು ಇನ್ನೂ ದಾಸಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಒಬ್ಬನ ಅಧೀನದಲ್ಲಿರುವ ದಾಸಿ ಹಣಕೊಡುವದರಿಂದಾಗಲಿ ಉಚಿತವಾಗಿಯಾಗಲಿ ಬಿಡುಗಡೆಯನ್ನು ಹೊಂದದೆ ಇರುವಲ್ಲಿ ಯಾವನಾದರೂ ಅವಳಲ್ಲಿ ಕೂಡಿದರೆ ಅವರಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯವಾಗಿ ನ್ಯಾಯವಿಚಾರಣೆಯಾಗಬೇಕು. ಅವಳು ಸ್ವತಂತ್ರಳಲ್ಲವಾದದರಿಂದ ಅವರಿಗೆ ಮರಣಶಿಕ್ಷೆಯನ್ನು ವಿಧಿಸಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ಇನ್ನೊಬ್ಬನ ದಾಸಿಯಾಗಿರುವ ಸ್ತ್ರೀಯೊಡನೆ ಒಬ್ಬನು ಲೈಂಗಿಕ ಸಂಬಂಧವಿಟ್ಟುಕೊಂಡಿದ್ದರೆ, ಈ ದಾಸಿಯು ಹಣದಿಂದಾಗಲಿ ಉಚಿತವಾಗಿಯಾಗಲಿ ಬಿಡುಗಡೆಯಾಗಲು ಸಾಧ್ಯವಿಲ್ಲದಿದ್ದರೆ ಅವರಿಬ್ಬರಿಗೆ ಶಿಕ್ಷೆ ವಿಧಿಸಬೇಕು. ಆದರೆ ಅವರಿಗೆ ಮರಣ ಶಿಕ್ಷೆಯಾಗಬಾರದು. ಯಾಕೆಂದರೆ ಸ್ತ್ರೀಯು ಸ್ವತಂತ್ರಳಾಗಿಲ್ಲ. ಅಧ್ಯಾಯವನ್ನು ನೋಡಿ |