ಯಾಜಕಕಾಂಡ 19:22 - ಕನ್ನಡ ಸಮಕಾಲಿಕ ಅನುವಾದ22 ಅವನು ಮಾಡಿದ ಪಾಪಕ್ಕಾಗಿ ಪ್ರಾಯಶ್ಚಿತ್ತ ಬಲಿಯಾಗಿರುವ ಟಗರಿನಿಂದ ಯಾಜಕನು ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನು ಮಾಡಿದ ಪಾಪವನ್ನು ಅವನಿಗೆ ಕ್ಷಮಿಸಲಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವನ ದೋಷಪರಿಹಾರಕ್ಕಾಗಿ ಯಾಜಕನು ಆ ಟಗರನ್ನು ಪ್ರಾಯಶ್ಚಿತ್ತಯಜ್ಞವಾಗಿ ಯೆಹೋವನಿಗೆ ಸಮರ್ಪಿಸಿ, ಅವನಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವನ ದೋಷಪರಿಹಾರಕ್ಕಾಗಿ ಯಾಜಕನು ಆ ಟಗರನ್ನು ಪ್ರಾಯಶ್ಚಿತ್ತ ಬಲಿಯಾಗಿ ಸರ್ವೇಶ್ವರನಿಗೆ ಸಮರ್ಪಿಸಿ ಅವನ ಪರವಾಗಿ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮೆ ದೊರಕುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವನ ದೋಷಪರಿಹಾರಕ್ಕಾಗಿ ಯಾಜಕನು ಆ ಟಗರನ್ನು ಪ್ರಾಯಶ್ಚಿತ್ತಯಜ್ಞವಾಗಿ ಯೆಹೋವನಿಗೆ ಸಮರ್ಪಿಸಿ ಅವನಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯಾಜಕನು ಅವನನ್ನು ಶುದ್ಧಿಮಾಡುವ ಕಾರ್ಯಗಳನ್ನು ಮಾಡುವನು. ಯಾಜಕನು ಯೆಹೋವನ ಸನ್ನಿಧಿಯಲ್ಲಿ ಆ ಟಗರನ್ನು ದೋಷಪರಿಹಾರಕ ಯಜ್ಞವಾಗಿ ಅರ್ಪಿಸುವನು. ಅದು ಆ ಪುರುಷನು ಮಾಡಿದ ಪಾಪಗಳ ಪರಿಹಾರಕ್ಕಾಗಿರುವುದು. ಆಗ ಅವನಿಗೆ ಕ್ಷಮಾಪಣೆಯಾಗುವುದು. ಅಧ್ಯಾಯವನ್ನು ನೋಡಿ |