Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:29 - ಕನ್ನಡ ಸಮಕಾಲಿಕ ಅನುವಾದ

29 “ ‘ನಿನ್ನ ಮಗಳು ವೇಶ್ಯೆಯಾಗುವಂತೆ ವ್ಯಭಿಚಾರಕ್ಕೆ ಬಿಡಬಾರದು. ಹಾಗೆ ಮಾಡಿದರೆ, ದೇಶವು ವೇಶ್ಯೆತನಕ್ಕೆ ಒಳಪಡುವುದು ಮತ್ತು ಕೆಟ್ಟತನದಿಂದ ತುಂಬಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “‘ಮಗಳನ್ನು ವೇಶ್ಯೆಯನ್ನಾಗಿ ಮಾಡಬಾರದು. ಹಾಗೆ ಮಾಡಿದರೆ ವೇಶ್ಯಾವಾಟಿಕೆ ಪ್ರಬಲವಾಗಿ ದೇಶದಲ್ಲೆಲ್ಲಾ ತುಂಬಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ಮಗಳನ್ನು ಬಸವಿಬಿಟ್ಟು ವೇಶ್ಯೆಯನ್ನಾಗಿ ಮಾಡಬೇಡ. ಹಾಗೆ ಮಾಡಿದರೆ ಸೂಳೆಗಾರಿಕೆ ಪ್ರಬಲವಾಗಿ ನಾಡಿನಲ್ಲೆಲ್ಲಾ ತುಂಬಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಮಗಳನ್ನು ಬಸವಿಬಿಟ್ಟು ಸೂಳೆಯನ್ನಾಗಿ ಮಾಡಬಾರದು. ಹಾಗೆ ಮಾಡಿದರೆ ಸೂಳೆಗಾರಿಕೆ ಪ್ರಬಲವಾಗಿ ದೇಶದಲ್ಲೆಲ್ಲಾ ತುಂಬಿಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಮಗಳನ್ನು ಸೂಳೆಯನ್ನಾಗಿ ಮಾಡಬಾರದು. ಇದರಿಂದ ಸೂಳೆಗಾರಿಕೆ ಹೆಚ್ಚಾಗುತ್ತದೆ. ನಿಮ್ಮ ದೇಶದಲ್ಲಿ ಸೂಳೆಗಾರಿಕೆ ಇರದಂತೆ ನೋಡಿಕೊಳ್ಳಿರಿ. ಇಂಥ ಪಾಪದಿಂದ ನಿಮ್ಮ ದೇಶವು ತುಂಬಿಹೋಗಲು ಬಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:29
7 ತಿಳಿವುಗಳ ಹೋಲಿಕೆ  

ನಿಮ್ಮ ದೇಹಗಳು ಕ್ರಿಸ್ತ ಯೇಸುವಿನ ಅಂಗಗಳಾಗಿವೆ ಎಂಬುದು ನಿಮಗೆ ತಿಳಿಯದೋ? ಹೀಗಿರಲಾಗಿ ನಾವು ಕ್ರಿಸ್ತ ಯೇಸುವಿನ ಅಂಗಗಳಾಗಿರುವಂಥವುಗಳನ್ನೇ ತೆಗೆದುಕೊಂಡು ವೇಶ್ಯೆಯ ಅಂಗಗಳನ್ನಾಗಿ ಮಾಡಬಹುದೇ? ಎಂದಿಗೂ ಬೇಡ.


“ ‘ಯಾಜಕರು ತಮ್ಮ ದೇವರಿಗೆ ಪರಿಶುದ್ಧರಾಗಿರುವುದರಿಂದ ವೇಶ್ಯೆಯನ್ನಾಗಲಿ, ಶೀಲಭ್ರಷ್ಠ ಸ್ತ್ರೀಯನ್ನಾಗಲಿ, ಗಂಡನಿಂದ ವಿಚ್ಛೇದನ ಪಡೆದವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.


“ ‘ಸತ್ತವರಿಗಾಗಿ ನಿಮ್ಮ ಶರೀರವನ್ನು ಕೊಯ್ದುಕೊಳ್ಳಬಾರದು. ನಿಮ್ಮ ಮೇಲೆ ಯಾವ ಹಚ್ಚೆಗಳನ್ನೂ ಹಚ್ಚಿಸಿಕೊಳ್ಳಬಾರದು. ನಾನೇ ಯೆಹೋವ ದೇವರು.


“ ‘ಯಾವುದೇ ಯಾಜಕನ ಮಗಳು ವ್ಯಭಿಚಾರ ಕೃತ್ಯದಿಂದ ತನ್ನನ್ನು ಅಪವಿತ್ರ ಮಾಡಿಕೊಂಡರೆ, ಅವಳು ತನ್ನ ತಂದೆಯನ್ನು ಅಗೌರವಿಸಿದ್ದಾಳೆ. ಅವಳನ್ನು ಬೆಂಕಿಯಿಂದ ಸುಡಬೇಕು.


ಆ ಹುಡುಗಿಯನ್ನು ಅವಳ ತಂದೆಯ ಮನೆ ಬಾಗಿಲಿಗೆ ತರಬೇಕು. ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು. ಏಕೆಂದರೆ ಅವಳು ತಂದೆಯ ಮನೆಯಲ್ಲಿರುವಾಗಲೇ ಅಕ್ರಮವಾಗಿ ನಡೆದು, ಇಸ್ರಾಯೇಲಿನಲ್ಲಿ ಸೂಳೆತನ ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು