Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:3 - ಕನ್ನಡ ಸಮಕಾಲಿಕ ಅನುವಾದ

3 “ ‘ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತಾಯಿಗೂ ತನ್ನ ತಂದೆಗೂ ಭಯಪಟ್ಟು, ನನ್ನ ವಿಶ್ರಾಂತಿಯ ದಿನಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “‘ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪ್ರತಿಯೊಬ್ಬ ವ್ಯಕ್ತಿಯು ತನ್ನ ತಂದೆತಾಯಿಗಳ ವಿಷಯ಼ದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನೇ ನಿಮ್ಮ ದೇವರಾದ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇವಿುಸಿರುವ ಸಬ್ಬತ್‍ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ನನ್ನ ವಿಶ್ರಾಂತಿಯ ವಿಶೇಷ ದಿನಗಳನ್ನು ಆಚರಿಸಬೇಕು. ನಾನೇ ನಿಮ್ಮ ದೇವರಾದ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:3
31 ತಿಳಿವುಗಳ ಹೋಲಿಕೆ  

ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನೀನು ಬಹುಕಾಲ ಬಾಳುವಂತೆ ನಿನ್ನ ತಂದೆತಾಯಿಗಳನ್ನು ಗೌರವಿಸು.


ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಜ್ಞಾಪಕದಲ್ಲಿಟ್ಟುಕೊಂಡು ಆಚರಿಸಿರಿ.


ಇದು ಮಾತ್ರವಲ್ಲದೆ, ನಮ್ಮನ್ನು ಶಿಕ್ಷಿಸಿದ ಇಹಲೋಕದ ಶಾರೀರಿಕ ತಂದೆಗಳನ್ನು ನಾವು ಸನ್ಮಾನಿಸಿದೆವಷ್ಟೆ. ಆತ್ಮಗಳಿಗೆ ತಂದೆಯಾದ ದೇವರಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?


“ತನ್ನ ತಂದೆಯನ್ನು ಹಾಸ್ಯಮಾಡಿ, ತನ್ನ ತಾಯಿಯನ್ನು ಧಿಕ್ಕರಿಸುವ ಕಣ್ಣನ್ನು, ಕಣಿವೆಯ ಕಾಗೆಗಳು ಕಿತ್ತು ಕಕ್ಕುವವು. ರಣಹದ್ದುಗಳು ಅದನ್ನು ತಿಂದುಬಿಡುವವು.


ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಾನೇ. ನೀವು ನಿಮ್ಮನ್ನು ಪ್ರತಿಷ್ಠಿಸಿಕೊಳ್ಳಿರಿ. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ಇದಲ್ಲದೆ ಭೂಮಿಯ ಮೇಲೆ ಹರಿದಾಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.


“ನೀನು ಸಬ್ಬತ್ ದಿನದಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟವನ್ನು ಮಾಡದೆ ಹೋದರೆ, ಸಬ್ಬತ್ ದಿನವನ್ನು ಆನಂದಕರವಾದದ್ದೆಂದೂ, ಯೆಹೋವ ದೇವರ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ, ಸ್ವಂತ ಇಷ್ಟಗಳನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,


“ತಮ್ಮ ತಂದೆಯನ್ನು ಶಪಿಸಿ, ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವವರು ಇದ್ದಾರೆ.


ನಿನ್ನನ್ನು ಹೆತ್ತ ತಂದೆಯ ಮಾತಿಗೆ ಕಿವಿಗೊಡು, ನಿನ್ನ ತಾಯಿ ಮುಪ್ಪಿನವಳಾದಾಗ ಆಕೆಯನ್ನು ಅಸಡ್ಡೆ ಮಾಡಬೇಡ.


ಅವರು, “ತನ್ನ ತಂದೆಯನ್ನಾಗಲಿ, ತಾಯಿಯನ್ನಾಗಲಿ ಅವಮಾನಪಡಿಸಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


“ತಂದೆಗಾದರೂ ತಾಯಿಗಾದರೂ ಶಾಪಕೊಟ್ಟವನು ಖಂಡಿತವಾಗಿ ಸಾಯಬೇಕು.


“ತಂದೆತಾಯಿಗಳನ್ನು ಹೊಡೆಯುವವನು ಖಂಡಿತವಾಗಿ ಮರಣದಂಡನೆ ಹೊಂದಬೇಕು.


ನೋಡಿರಿ, ಯೆಹೋವ ದೇವರಾದ ನಾನು ನಿಮಗೆ ಸಬ್ಬತ್ ದಿನವನ್ನು ಕೊಟ್ಟಿದ್ದರಿಂದಲೇ, ಆರನೆಯ ದಿನದಲ್ಲಿ ನಿಮಗೆ ಎರಡು ದಿನಗಳಿಗೆ ಸಾಕಾಗುವಷ್ಟು ಆಹಾರ ಕೊಟ್ಟಿದ್ದೇನೆ. ಪ್ರತಿಯೊಬ್ಬನೂ ತನ್ನ ತನ್ನ ಸ್ಥಳದಲ್ಲಿ ಇರಲಿ. ಏಳನೆಯ ದಿನದಲ್ಲಿ ಯಾರೂ ತನ್ನ ಸ್ಥಳವನ್ನು ಬಿಟ್ಟುಹೋಗಬಾರದು,” ಎಂದರು.


“ಮಗನು ತಂದೆಯನ್ನೂ, ದಾಸನು ಯಜಮಾನನನ್ನೂ ಸನ್ಮಾನಿಸುತ್ತಾನೆ. ಹಾಗಾದರೆ ನಾನು ತಂದೆಯಾಗಿದ್ದರೆ ನನ್ನ ಸನ್ಮಾನವೆಲ್ಲಿ? ನಾನು ಯಜಮಾನನಾಗಿದ್ದರೆ ನನಗೆ ತೋರಿಸುವ ಭಯಭಕ್ತಿಯೆಲ್ಲಿ?” “ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರು ನೀವೇ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಆದರೆ ನೀವು, ‘ನಿಮ್ಮ ಹೆಸರನ್ನು ಯಾವುದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆ?’ ಎಂದು ಕೇಳುತ್ತೀರಿ.”


ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಯೆಹೋವ ದೇವರು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ, ಅವರಿಗೂ ಗುರುತಾಗಿರುವುದಕ್ಕೆ ನನ್ನ ಸಬ್ಬತ್ ದಿನಗಳನ್ನು ನಾನು ಅವರಿಗೆ ಕೊಟ್ಟೆನು.


“ ‘ನನ್ನ ವಿಶ್ರಾಂತಿಯ ದಿನಗಳನ್ನು ನೀವು ಆಚರಿಸಬೇಕು. ನನ್ನ ಪರಿಶುದ್ಧಸ್ಥಳದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನೇ ಯೆಹೋವ ದೇವರು.


ಮಗನೇ, ನಿನ್ನ ತಂದೆಯ ಶಿಕ್ಷಣಗಳನ್ನು ಕೇಳು, ನಿನ್ನ ತಾಯಿಯ ಉಪದೇಶವನ್ನು ತೊರೆಯಬೇಡ.


“ ‘ನನ್ನ ವಿಶ್ರಾಂತಿಯ ದಿನಗಳನ್ನು ನೀವು ಆಚರಿಸಬೇಕು. ನನ್ನ ಪರಿಶುದ್ಧಸ್ಥಳದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನೇ ಯೆಹೋವ ದೇವರು.


“ ‘ಆರು ದಿವಸ ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ಸಬ್ಬತ್ ದಿನ. ಆ ದಿನವು ಪರಿಶುದ್ಧ ದಿನವಾಗಿರುವುದು. ನೀವು ಆ ದಿನದಲ್ಲಿ ಕೆಲಸಮಾಡಬಾರದು. ನಿಮ್ಮ ಎಲ್ಲಾ ನಿವಾಸಗಳಲ್ಲಿಯೂ ಅದು ಯೆಹೋವ ದೇವರ ಸಬ್ಬತ್ ದಿನವಾಗಿರುವುದು.


ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ, ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನಿನಗೆ ಒಳ್ಳೆಯದಾಗುವ ಹಾಗೆಯೂ, ನಿನ್ನ ದೇವರಾದ ಯೆಹೋವ ದೇವರು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ, ನಿನ್ನ ತಾಯಿಯನ್ನೂ ಗೌರವಿಸು.


ಆಗ ಯೋಸೇಫನು ಅವರನ್ನು ಮೊಣಕಾಲುಗಳ ಬಳಿಯಿಂದ ಬರಮಾಡಿ ತಂದೆಗೆ ಅಡ್ಡಬಿದ್ದನು.


ಐದನೆಯ ವರುಷದಲ್ಲಿ ಅದರ ಫಲವನ್ನು ನೀವು ತಿನ್ನಬೇಕು. ಆಗ ಅದು ನಿಮಗೆ ಇನ್ನೂ ಸಮೃದ್ಧಿಯಾಗಿ ಫಲಿಸುವುದು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


“ ‘ಮಾಟಗಾರರನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಅಶುದ್ಧವಾಗದಂತೆ ಭೂತಪ್ರೇತಗಳನ್ನು ವಿಚಾರಿಸುವವರನ್ನು ಅನುಸರಿಸಬೇಡ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೇ ಸ್ವದೇಶದವನಂತಿರಲಿ. ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಏಕೆಂದರೆ ನೀವು ಸಹ ಈಜಿಪ್ಟ್ ದೇಶದಲ್ಲಿ ಪರಕೀಯರಾಗಿದ್ದಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ನೀವು ಪರಿಶುದ್ಧ ಸಬ್ಬತ್ ದಿನವನ್ನು ಅವರಿಗೆ ತಿಳಿಸಿ, ನಿಮ್ಮ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಆಜ್ಞೆಗಳನ್ನೂ, ಕಟ್ಟಳೆಗಳನ್ನೂ, ನಿಯಮಗಳನ್ನೂ ಕೊಟ್ಟಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು