Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:30 - ಕನ್ನಡ ಸಮಕಾಲಿಕ ಅನುವಾದ

30 “ ‘ನನ್ನ ವಿಶ್ರಾಂತಿಯ ದಿನಗಳನ್ನು ನೀವು ಆಚರಿಸಬೇಕು. ನನ್ನ ಪರಿಶುದ್ಧಸ್ಥಳದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನೇ ಯೆಹೋವ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 “‘ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನನ್ನ ಆಲಯದ ಬಗ್ಗೆ ಭಯಭಕ್ತಿಯುಳ್ಳವರಾಗಿರಬೇಕು. ನಾನು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಾನು ನೇವಿುಸಿರುವ ಸಬ್ಬತ್‍ದಿನಗಳನ್ನು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ನೀವು ನನ್ನ ಸಬ್ಬತ್ ದಿನಗಳನ್ನು ಅನುಸರಿಸಬೇಕು. ನನ್ನ ವಿಶ್ರಾಂತಿಯ ವಿಶೇಷ ದಿನಗಳಲ್ಲಿ ನೀವು ಕೆಲಸ ಮಾಡಬಾರದು. ನೀವು ನನ್ನ ಪವಿತ್ರಸ್ಥಳವನ್ನು ಗೌರವಿಸಬೇಕು. ನಾನೇ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:30
16 ತಿಳಿವುಗಳ ಹೋಲಿಕೆ  

“ ‘ನನ್ನ ವಿಶ್ರಾಂತಿಯ ದಿನಗಳನ್ನು ನೀವು ಆಚರಿಸಬೇಕು. ನನ್ನ ಪರಿಶುದ್ಧಸ್ಥಳದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನೇ ಯೆಹೋವ ದೇವರು.


ದೇವರ ಆಲಯಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು. ಮೂರ್ಖರು ಅರ್ಪಿಸುವ ಯಜ್ಞಕ್ಕಿಂತ, ದೇವರ ಸಮೀಪವಾಗಿದ್ದು ಅವರಿಗೆ ಕಿವಿಗೊಟ್ಟು ಆಲಿಸುವುದು ಲೇಸು. ತಾವು ತಪ್ಪು ಮಾಡುತ್ತಿದ್ದಾರೆಂದು ಮೂಢರಿಗೆ ತಿಳಿಯುವುದಿಲ್ಲ.


“ ‘ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತಾಯಿಗೂ ತನ್ನ ತಂದೆಗೂ ಭಯಪಟ್ಟು, ನನ್ನ ವಿಶ್ರಾಂತಿಯ ದಿನಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ದೇವರ ಆಲಯಕ್ಕೂ ವಿಗ್ರಹಗಳಿಗೂ ಏನು ಒಪ್ಪಂದ? ನಾವು ಜೀವಿಸುವ ದೇವರ ಆಲಯವಾಗಿದ್ದೇವೆ. ದೇವರು ಹೀಗೆ ಹೇಳಿದ್ದಾರೆ: “ನಾನು ಅವರೊಂದಿಗೆ ವಾಸಿಸುವೆನು, ಅವರ ಮಧ್ಯದಲ್ಲಿ ತಿರುಗಾಡುವೆನು. ನಾನು ಅವರಿಗೆ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.”


ಯೇಸು ಅವರಿಗೆ, “ ‘ನನ್ನ ಮನೆಯು ಪ್ರಾರ್ಥನೆಯ ಮನೆಯಾಗಿದೆ,’ ಎಂದು ಬರೆದದೆ. ಆದರೆ ನೀವಾದರೋ ಅದನ್ನು, ‘ಕಳ್ಳರ ಗವಿಯನ್ನಾಗಿ’ ಮಾಡಿದ್ದೀರಿ,” ಎಂದು ಹೇಳಿದರು.


ಅವರು ಪರಿಶುದ್ಧರ ಸಭೆಯಲ್ಲಿ ಭಯಭಕ್ತಿಗೆ ಪಾತ್ರರಾದ ದೇವರು. ತಮ್ಮ ಎಲ್ಲಾ ಪರಿವಾರದವರಿಗಿಂತ ಅವರು ಅತಿಶಯವಾದವರು.


ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನಿನ್ನ ಅಣ್ಣನಾದ ಆರೋನನು ಮಂಜೂಷದ ಮೇಲಿರುವ ಕರುಣಾಸನದ ಮುಂದಿರುವ ತೆರೆಯ ಒಳಗೆ ಮಹಾಪರಿಶುದ್ಧ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ, ಇಲ್ಲವಾದರೆ ಅವನು ಸಾಯುತ್ತಾನೆ, ಏಕೆಂದರೆ ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.


ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಜ್ಞಾಪಕದಲ್ಲಿಟ್ಟುಕೊಂಡು ಆಚರಿಸಿರಿ.


ಏಕೆಂದರೆ ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯತೀರ್ಪಿನ ಸಮಯವು ಬಂದಿದೆ. ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರಬಹುದು?


ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ, ಜನರೂ ಜನಾಂಗಗಳ ಅಸಹ್ಯಗಳನ್ನು ಹಿಂಬಾಲಿಸಿ ಬಹಳವಾಗಿ ಅಪನಂಬಿಗಸ್ತರಾಗಿ, ಯೆಹೋವ ದೇವರು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.


ಮನಸ್ಸೆಯು ತಾನು ಮಾಡಿದ ವಿಗ್ರಹವನ್ನು ದೇವರ ಆಲಯದಲ್ಲಿ ಇಟ್ಟನು. ಆ ಆಲಯದ ಬಗ್ಗೆ ದೇವರು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಹೇಳಿದ್ದೇನೆಂದರೆ, “ನಾನು ಈ ಆಲಯದಲ್ಲಿ ಮತ್ತು ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನಾನು ಆಯ್ದುಕೊಂಡ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಶಾಶ್ವತವಾಗಿ ಸ್ಥಾಪಿಸುತ್ತೇನೆ.


“ ‘ಹೀಗೆ ನೀವು ಇಸ್ರಾಯೇಲರನ್ನು ಅಶುದ್ಧತೆಯಿಂದ ದೂರವಾಗಿರುವಂತೆ ನೋಡಿಕೊಳ್ಳಬೇಕು. ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಅಶುದ್ಧ ಮಾಡದೆ, ತಮ್ಮ ಅಶುದ್ಧತ್ವದಿಂದ ಸಾಯುವುದಿಲ್ಲ.’ ”


ತರುವಾಯ ಮೋಶೆಯು ಆರೋನನಿಗೆ, “ಯೆಹೋವ ದೇವರು ಹೇಳಿದ್ದು ಇದೇ. ಅದೇನೆಂದರೆ: “ ‘ನನ್ನನ್ನು ಸಮೀಪಿಸುವವರ ಮುಖಾಂತರ ನನ್ನ ಪರಿಶುದ್ಧತೆಯನ್ನು ತೋರಿಸುವೆನು ಮತ್ತು ಜನರೆಲ್ಲರ ಮುಂದೆ ನನ್ನ ಮಹಿಮೆಯನ್ನು ತೋರ್ಪಡಿಸುವೆನು,’ ” ಎಂದನು. ಆಗ ಆರೋನನು ಮಾತನಾಡದೆ ಸುಮ್ಮನಿದ್ದನು.


ವೃದ್ಧ, ಯುವಕ, ಯುವತಿಯರನ್ನು ಮತ್ತು ಎಳೆಗೂಸುಗಳನ್ನು ಮತ್ತು ಹೆಂಗಸರನ್ನು ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ, ಅವನನ್ನು ಮುಟ್ಟಬೇಡಿರಿ. ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ” ಎಂದಾಗ, ಅವರು ಆಲಯದ ಮುಂದೆ ಇದ್ದ ಹಿರಿಯರಿಂದ ಪ್ರಾರಂಭಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು