Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:33 - ಕನ್ನಡ ಸಮಕಾಲಿಕ ಅನುವಾದ

33 “ ‘ಒಬ್ಬ ಪರಕೀಯನು ನಿಮ್ಮ ದೇಶದಲ್ಲಿ ನಿನ್ನೊಂದಿಗೆ ಪ್ರವಾಸಿಯಾಗಿದ್ದರೆ, ಅವನನ್ನು ಉಪದ್ರವ ಪಡಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 “‘ನಿಮ್ಮ ದೇಶದಲ್ಲಿ ವಾಸವಾಗಿರುವ ಪರದೇಶದವರಿಗೆ ಅನ್ಯಾಯವೇನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 “ನಿಮ್ಮ ನಾಡಿನಲ್ಲಿ ತಂಗಿರುವ ಹೊರನಾಡಿಗರಿಗೆ ಅನ್ಯಾಯವೇನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನಿಮ್ಮ ದೇಶದಲ್ಲಿ ಇಳುಕೊಂಡಿರುವ ಪರದೇಶದವರಿಗೆ ಅನ್ಯಾಯವೇನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 “ನಿಮ್ಮ ದೇಶದಲ್ಲಿ ವಾಸಿಸುವ ಪರದೇಶಸ್ಥರಿಗೆ ಕೆಟ್ಟದ್ದನ್ನು ಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:33
12 ತಿಳಿವುಗಳ ಹೋಲಿಕೆ  

“ಪರದೇಶಿಯರನ್ನು ಪೀಡಿಸಬಾರದು. ಏಕೆಂದರೆ ಈಜಿಪ್ಟ್ ದೇಶದಲ್ಲಿ ನೀವೂ ಪರದೇಶಿಗಳಾದ್ದಿರಷ್ಟೇ, ಅಂಥವರ ಮನೋವ್ಯಥೆಯನ್ನು ನಿಮಗೆ ತಿಳಿದಿದೆ.


“ಪರದೇಶಸ್ಥನನ್ನು ಉಪದ್ರವ ಪಡಿಸಬೇಡಿರಿ ಮತ್ತು ಬಾಧಿಸಲೂ ಬೇಡಿರಿ. ಏಕೆಂದರೆ ನೀವು ಈಜಿಪ್ಟ್ ದೇಶದಲ್ಲಿ ಪರದೇಶಿಗಳಾಗಿದ್ದೀರಿ.


“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಪರದೇಶಿಯನ್ನೂ, ದಿಕ್ಕಿಲ್ಲದವನನ್ನೂ, ವಿಧವೆಯನ್ನೂ ಸಂಕಟ ಪಡಿಸದಿದ್ದರೆ; ಈ ಸ್ಥಳದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲದಿದ್ದರೆ; ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ;


ನಿನ್ನ ನಾಡಿನ ಸಹೋದರನಾಗಲಿ, ಪರದೇಶಿಯವನಾಗಲಿ, ಬಡ ಮತ್ತು ನಿರ್ಗತಿಕನಾಗಿರುವ ಕೂಲಿಯವನನ್ನು ಬಾಧಿಸಬಾರದು.


ದೇಶದ ಜನರು ಬಲಾತ್ಕಾರದಿಂದ ಸೂರೆಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ, ದರಿದ್ರರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯ ಕೊಡದೆ ವಿದೇಶಿಯರನ್ನು ಬಲಾತ್ಕಾರ ಪಡಿಸಿದ್ದಾರೆ.


ನಿನ್ನಲ್ಲಿ ತಂದೆಯನ್ನೂ, ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ. ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ. ನಿನ್ನಲ್ಲಿ ದಿಕ್ಕಿಲ್ಲದವನನ್ನೂ, ವಿಧವೆಯನ್ನೂ ಪೀಡಿಸಿದ್ದಾರೆ.


ಪರನಿಗೂ, ದಿಕ್ಕಿಲ್ಲದವನಿಗೂ ನ್ಯಾಯವನ್ನು ತಪ್ಪಿಸಬೇಡ. ವಿಧವೆಯಿಂದ ಉಡುವ ವಸ್ತ್ರವನ್ನು ಒತ್ತೆಯಾಗಿ ತೆಗೆದುಕೊಳ್ಳಬೇಡ.


ನೀನು ಈಜಿಪ್ಟಿನಲ್ಲಿ ದಾಸನಾಗಿದ್ದೆ ಎಂದೂ, ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಲ್ಲಿಂದ ವಿಮೋಚಿಸಿದರೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದ್ದರಿಂದ ಈ ಕಾರ್ಯಗಳನ್ನೆಲ್ಲಾ ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.


ಅವರು, “ಪರವಾಸಿಗೂ, ದಿಕ್ಕಿಲ್ಲದವನಿಗೂ, ವಿಧವೆಗೂ ನ್ಯಾಯಬಿಟ್ಟು ತೀರ್ಪು ಹೇಳಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


“ಯೆಹೋವ ದೇವರು ಹೊರತಾಗಿ ಮತ್ತೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು