Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:35 - ಕನ್ನಡ ಸಮಕಾಲಿಕ ಅನುವಾದ

35 “ ‘ನಿಮ್ಮ ನಿರ್ಣಯದಲ್ಲಿಯೂ, ಅಳೆಯುವುದರಲ್ಲಿಯೂ, ತೂಕದಲ್ಲಿಯೂ, ಅಳತೆಯಲ್ಲಿಯೂ ನೀವು ಅನ್ಯಾಯ ಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 “‘ನ್ಯಾಯವಿಚಾರಣೆ, ತೂಕ, ಅಳತೆ ಮತ್ತು ಪರಿಮಾಣಗಳಲ್ಲಿ ನೀವು ನ್ಯಾಯವಿರುದ್ಧವಾಗಿ ನಡೆಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 “ನ್ಯಾಯ ವಿಚಾರಣೆ, ತೂಕ ಅಳತೆ, ಪರಿಮಾಣ ಇವುಗಳಲ್ಲಿ ನೀವು ನ್ಯಾಯವಿರುದ್ಧವಾಗಿ ನಡೆಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ನ್ಯಾಯವಿಚಾರಣೆ, ತೂಕ, ಅಳತೆ, ಪರಿಮಾಣ ಇವುಗಳಲ್ಲಿ ನೀವು ನ್ಯಾಯವಿರುದ್ಧವಾಗಿ ನಡೆಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 “ನೀವು ಜನರಿಗೆ ತೀರ್ಪುಮಾಡುವಾಗ ನ್ಯಾಯವಾಗಿ ತೀರ್ಪುಮಾಡಬೇಕು. ನೀವು ಅಳೆಯುವಾಗ ಮತ್ತು ತೂಕಮಾಡುವಾಗ ನ್ಯಾಯವಾಗಿ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:35
12 ತಿಳಿವುಗಳ ಹೋಲಿಕೆ  

ತೂಕದ ಕಲ್ಲೂ, ಅಳತೆಯ ಸೇರೂ, ಸರಿಯಾಗಿಯೂ ನ್ಯಾಯವಾಗಿಯೂ ಇರಬೇಕು. ಆಗ ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ಭೂಮಿಯ ಮೇಲೆ ನಿನ್ನ ದಿನಗಳು ಹೆಚ್ಚಾಗುತ್ತವೆ.


ಹೆಚ್ಚು ಕಡಿಮೆಯಾಗಿರುವ ಎರಡು ವಿಧವಾದ ಕಳ್ಳ ತೂಕದ ಕಲ್ಲುಗಳನ್ನು ನಿಮ್ಮ ಚೀಲದಲ್ಲಿಟ್ಟುಕೊಳ್ಳಬಾರದು.


ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು.


ಯೆಹೋವ ದೇವರು ಹೇಳುವುದನ್ನು ಈಗ ಕೇಳಿರಿ, ಎದ್ದೇಳು, ಬೆಟ್ಟಗಳ ಮುಂದೆ ವ್ಯಾಜ್ಯವಾಡು; ನೀನು ಹೇಳುವುದನ್ನು ಗುಡ್ಡಗಳು ಕೇಳಲಿ.


ಮೋಸದ ತೂಕಗಳೂ, ಮೋಸದ ಅಳತೆಗಳೂ ಇವೆರಡೂ ಯೆಹೋವ ದೇವರಿಗೆ ಅಸಹ್ಯ.


ನ್ಯಾಯದ ತೂಕವೂ ತಕ್ಕಡಿಯೂ ಯೆಹೋವ ದೇವರದೇ. ಚೀಲದ ತೂಕಗಳು ಅವರ ಕೈಕೆಲಸವೇ.


ಮೋಸದ ತಕ್ಕಡಿ ಯೆಹೋವ ದೇವರಿಗೆ ಅಸಹ್ಯವಾಗಿದೆ; ಆದರೆ ನ್ಯಾಯದ ತೂಕ ಅವರಿಗೆ ಮೆಚ್ಚುಗೆ.


“ ‘ವ್ಯಾಜ್ಯ ತೀರಿಸುವಾಗ ನೀನು ಅನ್ಯಾಯ ಮಾಡದಿರು. ಬಡವನ ಮುಖ ದಾಕ್ಷಿಣ್ಯವನ್ನಾಗಲಿ, ಬಲಿಷ್ಠನ ಘನತೆಯನ್ನಾಗಲಿ ಲಕ್ಷಿಸದೆ ನಿಷ್ಪಕ್ಷಪಾತವಾಗಿ ತೀರ್ಪುಕೊಡು. ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯವಾಗಿ ತೀರ್ಪುಮಾಡು.


ಯೆಹೋವ ದೇವರ ಮಂದಿರದ ಸೇವೆಯ ಕಾರ್ಯದಲ್ಲಿರುವ ಸಮ್ಮುಖದ ರೊಟ್ಟಿಗೋಸ್ಕರವೂ, ಅರ್ಪಣೆ ಬಲಿಯ ನಯವಾದ ಹಿಟ್ಟಿಗೋಸ್ಕರವೂ, ಹುಳಿಯಿಲ್ಲದ ರೊಟ್ಟಿಗಳಿಗೋಸ್ಕರವೂ, ಬಾಂಡ್ಲಿಯಲ್ಲಿ ಮಾಡಿದ್ದಕ್ಕೋಸ್ಕರವೂ, ಕರಿದಿದ್ದಕ್ಕೋಸ್ಕರವೂ, ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳ ಬಳಿಯಲ್ಲಿ ಅವರಿಗೆ ನೇಮಕವಾಗಿತ್ತು.


ನ್ಯಾಯವಾದ ತಕ್ಕಡಿಯೂ ನ್ಯಾಯವಾದ ಎಫಾವೂ ನ್ಯಾಯವಾದ ಬಾತ್ ಅಳತೆಯೂ ನಿಮಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು