Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 2:1 - ಕನ್ನಡ ಸಮಕಾಲಿಕ ಅನುವಾದ

1 “ ‘ಯಾರಾದರೂ ಯೆಹೋವ ದೇವರಿಗೆ ಧಾನ್ಯ ಸಮರ್ಪಣೆಯನ್ನು ಸಮರ್ಪಿಸುವುದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಸಬೇಕು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “‘ಯಾವನಾದರೂ ಯೆಹೋವನಿಗೆ ಧಾನ್ಯನೈವೇದ್ಯವನ್ನು ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಿನದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯ್ದು ಅದರ ಮೇಲೆ ಧೂಪವನ್ನು ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಯಾರಾದರು ಸರ್ವೇಶ್ವರ ಸ್ವಾಮಿಗೆ ಧಾನ್ಯವನ್ನು ನೈವೇದ್ಯ ಮಾಡಬೇಕೆಂದಿದ್ದರೆ ಅದು ಗೋದಿ ಹಿಟ್ಟಾಗಿರಬೇಕು. ಅದರ ಮೇಲೆ ಎಣ್ಣೆಹೊಯ್ದು, ಸಾಂಬ್ರಾಣಿಯನ್ನಿಟ್ಟು, ಅದನ್ನು ಆರೋನನ ವಂಶಜರಾದ ಯಾಜಕರ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯಾವನಾದರೂ ಯೆಹೋವನಿಗೆ ಧಾನ್ಯ ನೈವೇದ್ಯ ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯಿದು ಧೂಪವನ್ನಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಒಬ್ಬನು ದೇವರಾದ ಯೆಹೋವನಿಗೆ ಧಾನ್ಯಸಮರ್ಪಣೆ ಮಾಡಬೇಕೆಂದಿದ್ದರೆ, ಅದು ಗೋಧಿಹಿಟ್ಟಾಗಿರಬೇಕು. ಅವನು ಈ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯಿದು, ಧೂಪವನ್ನಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 2:1
31 ತಿಳಿವುಗಳ ಹೋಲಿಕೆ  

ಚಿನ್ನದ ಧೂಪಾರತಿಯಿದ್ದ ಮತ್ತೊಬ್ಬ ದೇವದೂತನು ಬಂದು ಬಲಿಪೀಠದ ಬಳಿ ನಿಂತನು. ಸಿಂಹಾಸನದ ಮುಂದಿನ ಚಿನ್ನದ ಧೂಪವೇದಿಯ ಮೇಲೆ ದೇವಜನರೆಲ್ಲರ ಪ್ರಾರ್ಥನೆಗಳೊಂದಿಗೆ ಅರ್ಪಿಸಲು ಅವನಿಗೆ ಬಹಳ ಧೂಪವು ಕೊಡಲಾಗಿತ್ತು.


ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥಗಳಲ್ಲಿಯೂ ಪಲ್ಲಕ್ಕಿಗಳಲ್ಲಿಯೂ ಹೇಸರಗತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಯೆಹೋವ ದೇವರಿಗೆ ಕಾಣಿಕೆಯಾಗಿ ಇಸ್ರಾಯೇಲರು ಕಾಣಿಕೆಯನ್ನು ಶುದ್ಧಪಾತ್ರೆಯಲ್ಲಿ ಯೆಹೋವ ದೇವರು ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸಲೇಮಿಗೆ ತರುವರೆಂದು ಯೆಹೋವ ದೇವರು ಹೇಳುತ್ತಾರೆ.


ಅವನು ಧಾನ್ಯ ಸಮರ್ಪಣೆಯ ಬಲಿಯನ್ನು ತಂದು, ಅದರಲ್ಲಿ ಒಂದು ಹಿಡಿ ತೆಗೆದುಕೊಂಡು, ಬಲಿಪೀಠದ ಮೇಲೆ ಬೆಳಗಿನ ದಹನಬಲಿ ಯಜ್ಞದ ಬಳಿಯಲ್ಲಿ ಅದನ್ನು ಹೋಮ ಮಾಡಿದನು.


ಪ್ರಿಯರೇ, ನೀವಾದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯಲ್ಲಿ ನಿಮ್ಮನ್ನು ನಿರ್ಮಿಸಿಕೊಂಡವರಾಗಿ ಪರಿಶುದ್ಧಾತ್ಮ ದೇವರಲ್ಲಿ ಪ್ರಾರ್ಥಿಸಿರಿ.


ಅವನ ಅರ್ಪಣೆ ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಒಂದು ಬೆಳಿಯ್ಳ ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.


ಆದರೆ ಕ್ರಿಸ್ತ ಯೇಸುವಿನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುತ್ತದೆ. ಆದುದರಿಂದ ಬೇರೆ ಯಾರೂ ನಿಮಗೆ ಬೋಧಿಸುವ ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಬೋಧಿಸುವುದು. ಆ ಬೋಧನೆಯು ಸುಳ್ಳಲ್ಲ, ಸತ್ಯವಾದದ್ದು. ಆದ್ದರಿಂದ ಅದು ನಿಮಗೆ ಬೋಧಿಸಿದ ಪ್ರಕಾರವೇ, ಕ್ರಿಸ್ತ ಯೇಸುವಿನಲ್ಲಿ ನೀವು ನೆಲೆಗೊಳ್ಳಿರಿ.


ಆದರೆ ನೀವು ಪವಿತ್ರವಾದವರಿಂದ ಅಭಿಷೇಕವನ್ನು ಹೊಂದಿದವರಾಗಿದ್ದು ನೀವೆಲ್ಲರೂ ಸತ್ಯವನ್ನು ತಿಳಿದವರಾಗಿದ್ದೀರಿ.


ಯೇಸು ಅವರಿಗೆ, “ನಾನೇ ಜೀವದ ರೊಟ್ಟಿ. ನನ್ನ ಬಳಿಗೆ ಬರುವವರಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವರಿಗೆ ಎಂದಿಗೂ ದಾಹವಾಗುವುದಿಲ್ಲ.


ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು. ನಿಮ್ಮ ಯೆಹೋವ ದೇವರಿಗೆ ಅರ್ಪಿಸಲು ಬೇಕಾದ ಧಾನ್ಯ ಸಮರ್ಪಣೆ ಹಾಗು ಪಾನಾರ್ಪಣೆಯನ್ನು ನಿಮಗೆ ಧಾರಾಳವಾಗಿ ಉಳಿಸಬಹುದು, ಯಾರಿಗೆ ಗೊತ್ತು?


ಅವನ ಅರ್ಪಣೆ ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಚೊಕ್ಕ ಬೆಳ್ಳಿಯ ಒಂದು ತಟ್ಟೆ ಮತ್ತು 70 ಶೆಕೆಲ್ ತೂಕದ ಬೆಳ್ಳಿಯ ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಇವೆರಡು ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.


ಅತ್ಯುತ್ತಮ ಗೋಧಿಯ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನೂ ಎಣ್ಣೆ ಹೊಯ್ದ ಹುಳಿಯಿಲ್ಲದ ಹೋಳಿಗೆಗಳನ್ನೂ ಎಣ್ಣೆ ಹಚ್ಚಿದ ಹುಳಿಯಿಲ್ಲದ ಪೂರಿಗಳನ್ನೂ ತೆಗೆದುಕೊಳ್ಳಬೇಕು.


ಧಾನ್ಯ ಸಮರ್ಪಣೆಯನ್ನಾಗಲಿ ಪಾನಾರ್ಪಣೆಯನ್ನಾಗಲಿ ಯೆಹೋವ ದೇವರ ಆಲಯದಲ್ಲಿ ಅರ್ಪಿಸುವುದಿಲ್ಲ. ಯೆಹೋವ ದೇವರ ಸೇವಕರಾದ ಯಾಜಕರು ಗೋಳಾಡುತ್ತಾರೆ.


“ ‘ಆದರೆ ಅವರು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ ತರುವುದಕ್ಕೆ ಅಶಕ್ತರಾಗಿದ್ದರೆ, ಪಾಪಮಾಡಿದವರು ತಮ್ಮ ಬಲಿಗಾಗಿ, ಮೂರು ಸೇರು ಗೋಧಿ ಹಿಟ್ಟನ್ನು ಪಾಪ ಪರಿಹಾರದ ಬಲಿಯಾಗಿ ತರಬೇಕು. ಅವರು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಏಕೆಂದರೆ ಅದು ದೋಷಪರಿಹಾರ ಬಲಿಯಾಗಿದೆ.


ಅವರು ದಹನಬಲಿಗಾಗಿ ಒಂದು ಎಳೆಯ ಹೋರಿಯನ್ನು, ಅದರೊಂದಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನು ತೆಗೆದುಕೊಳ್ಳಬೇಕು. ದೋಷಪರಿಹಾರಕ ಬಲಿಗಾಗಿ ಮತ್ತೊಂದು ಹೋರಿಯನ್ನೂ ನೀನು ತೆಗೆದುಕೋ.


ದಹನಬಲಿಗೆ ಒಳಗಾಗದ ಮಹಾಪರಿಶುದ್ಧವಾದ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು ಯಾವುವೆಂದರೆ ಇಸ್ರಾಯೇಲರು ನನಗೆ ಸಮರ್ಪಿಸುವ ಧಾನ್ಯ, ದೋಷಪರಿಹಾರಕ ಬಲಿಗಳು ಮತ್ತು ಪ್ರಾಯಶ್ಚಿತ್ತ ಬಲಿಗಳು, ಇವುಗಳಲ್ಲಿ ದಹನವಾಗದೆ ಉಳಿದವುಗಳು ಮಹಾಪರಿಶುದ್ಧವಾದದರಿಂದ ನಿನಗೂ ನಿನ್ನ ಪುತ್ರರಿಗೂ ಸೇರಬೇಕು.


ಧಾನ್ಯ ಅರ್ಪಣೆಗಾಗಿ ಸುಮಾರು ಒಂದು ಲೀಟರ್ ಕುಟ್ಟಿ ತೆಗೆದ ಓಲಿವ್ ಎಣ್ಣೆಯನ್ನು ಸುಮಾರು ಒಂದುವರೆ ಕಿಲೋಗ್ರಾಂ ಗೋಧಿಹಿಟ್ಟಿಗೆ ಬೆರೆಸಿ ಸಮರ್ಪಿಸಬೇಕು.


ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ,


ನಿನ್ನ ದಹನಬಲಿಯ ಎಳೆಯ ಕುರಿಗಳನ್ನು ನನಗೆ ತರಲಿಲ್ಲ. ನಿನ್ನ ಯಜ್ಞಗಳಿಂದ ನನ್ನನ್ನು ಸನ್ಮಾನಿಸಲಿಲ್ಲ. ನೀನು ಕಾಣಿಕೆಯನ್ನು ಅರ್ಪಿಸದೆ ಇದ್ದದ್ದಕ್ಕೆ ನಿನ್ನನ್ನು ನಾನು ತೊಂದರೆಪಡಿಸಲಿಲ್ಲ, ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.


ಯಾಜಕನು ಅವನಿಗಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಬೇಕು. ಅತಿಕ್ರಮದಲ್ಲಿ ಅವನು ಏನನ್ನಾದರೂ ಮಾಡಿದ್ದರೆ, ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು,” ಎಂದರು.


ಯೆಹೋವ ದೇವರ ಮುಂದೆ ಯಜ್ಞಕ್ಕೆ ಸಮಾಧಾನ ಬಲಿಗಾಗಿ ಒಂದು ಹೋರಿಯನ್ನು ಮತ್ತು ಒಂದು ಟಗರನ್ನು ಸಹ ತೆಗೆದುಕೊಳ್ಳಬೇಕು. ಆಹಾರದ ಬಲಿ ಎಣ್ಣೆಯೊಂದಿಗೆ ಬೆರೆತಿರಬೇಕು. ಏಕೆಂದರೆ ಈ ದಿನವೇ ಯೆಹೋವ ದೇವರು ನಿಮಗೆ ಕಾಣಿಸಿಕೊಳ್ಳುವರು,’ ” ಎಂದನು.


“ಎಂಟನೆಯ ದಿವಸದಲ್ಲಿ ಅವನು ಕಳಂಕರಹಿತವಾದ ಎರಡು ಕುರಿಮರಿಗಳನ್ನು ಮತ್ತು ಒಂದು ವರುಷದ ಕಳಂಕರಹಿತವಾದ ಹೆಣ್ಣು ಕುರಿಯನ್ನು, ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಐದು ಕಿಲೋಗ್ರಾಂ ಗೋಧಿ ಹಿಟ್ಟನ್ನು, ಒಂದನೆಯ ಮೂರು ಭಾಗ ಎಣ್ಣೆಯನ್ನು ತೆಗೆದುಕೊಳ್ಳಬೇಕು.


ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾಗಿ ಇರುವಂತೆಯೂ, ಬೆಂಕಿಯ ಮೂಲಕ ಯೆಹೋವ ದೇವರಿಗೆ ಸಮರ್ಪಣೆಯಾಗುವಂತೆಯೂ, ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು.


ಆಗ ಅವನು ನನಗೆ, “ಯಾಜಕರು ಅಪರಾಧ ಬಲಿಯನ್ನೂ ದೋಷಪರಿಹಾರ ಬಲಿಯನ್ನೂ ಬೇಯಿಸಿದ ಧಾನ್ಯ ಸಮರ್ಪಣೆಯನ್ನು ಸುಡುವಂತೆ ಏರ್ಪಡಿಸಿರುವ ಸ್ಥಳವು ಇದೇ. ಜನರನ್ನು ಪರಿಶುದ್ಧ ಮಾಡುವುದಕ್ಕೆ ಅವರು ಅವುಗಳನ್ನು ಹೊರಗಿನ ಅಂಗಳಕ್ಕೆ ತೆಗೆದುಕೊಂಡು ಹೋಗಬಾರದು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು