Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 2:12 - ಕನ್ನಡ ಸಮಕಾಲಿಕ ಅನುವಾದ

12 ಪ್ರಥಮ ಫಲದ ಕಾಣಿಕೆಯ ವಿಷಯದಲ್ಲಿಯಾದರೋ ನೀವು ಅವುಗಳನ್ನು ಯೆಹೋವ ದೇವರಿಗೆ ಸಮರ್ಪಿಸಬೇಕು. ಆದರೆ ಅವುಗಳನ್ನು ಬಲಿಪೀಠದ ಮೇಲೆ ಸುವಾಸನೆಗಾಗಿ ಸುಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವುಗಳನ್ನು ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬಹುದೇ ಹೊರತು ಯಜ್ಞವೇದಿಯ ಮೇಲೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಅವುಗಳನ್ನು ಹೋಮಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವುಗಳನ್ನು ಪ್ರಥಮ ಫಲವಾಗಿ ಸರ್ವೇಶ್ವರನಿಗೆ ಸಮರ್ಪಿಸಬಹುದೇ ಹೊರತು ಬಲಿಪೀಠದ ಮೇಲೆ ಸುವಾಸನೆಯನ್ನುಂಟುಮಾಡುವುದಕ್ಕಾಗಿ ಹೋಮ ಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವುಗಳನ್ನು ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬಹುದೇ ಹೊರತು ಯಜ್ಞವೇದಿಯ ಮೇಲೆ ಸುವಾಸನೆಯನ್ನುಂಟುಮಾಡುವದಕ್ಕಾಗಿ ಹೋಮಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀವು ಹುಳಿಯನ್ನು ಮತ್ತು ಜೇನುತುಪ್ಪವನ್ನು ಪ್ರಥಮಫಲವಾಗಿ ಅರ್ಪಿಸಬಹುದು. ಆದರೆ ಅವುಗಳನ್ನು ವೇದಿಕೆಯ ಮೇಲೆ ಹೋಮಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 2:12
15 ತಿಳಿವುಗಳ ಹೋಲಿಕೆ  

“ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಅತ್ಯುತ್ತಮವಾದದ್ದನ್ನು ನಿಮ್ಮ ಯೆಹೋವ ದೇವರ ಆಲಯಕ್ಕೆ ತರಬೇಕು. “ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ಸ್ತ್ರೀ ಸಹವಾಸದಿಂದ ಮಲಿನರಾಗದವರು ಇವರೇ. ಏಕೆಂದರೆ ಇವರು ಕನ್ಯೆಯರಂತೆ ನಿಷ್ಕಳಂಕರು. ಕುರಿಮರಿ ಆಗಿರುವವರು ಹೋದಡೆಯಲ್ಲೆಲ್ಲಾ ಅವರ ಹಿಂದೆ ಹೋಗುವವರು ಇವರೇ. ಇವರು ಮನುಷ್ಯರೊಳಗಿಂದ ಕೊಂಡುಕೊಳ್ಳಲಾಗಿ ದೇವರಿಗೂ ಕುರಿಮರಿಯಾಗಿರುವವರಿಗೂ ಪ್ರಥಮಫಲದಂತಾದರು.


ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ, ಇವುಗಳ ಮೊದಲನೆಯ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳವಾಗಿ ತಂದರು.


ಹೀಗಿರುವುದರಿಂದ ಯೆಹೋವ ದೇವರೇ, ನೀವು ನಮಗೆ ಕೊಟ್ಟ ಭೂಮಿಯ ಪ್ರಥಮ ಫಲವನ್ನು ತಂದಿದ್ದೇವೆ,” ಎಂದು ಹೇಳಬೇಕು. ಆಗ ಅದನ್ನು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿಟ್ಟು, ಅವರನ್ನು ಆರಾಧಿಸಬೇಕು.


ನೀವು ಕಣದಲ್ಲಿರುವ ಗೋಧಿಯಲ್ಲಿ ಪ್ರಥಮ ಫಲವನ್ನು ಕಾಣಿಕೆಯಾಗಿ ಅರ್ಪಿಸುವಂತೆ ಕಣಕದಿಂದ ಮಾಡುವ ನಿಮ್ಮ ಪ್ರಥಮ ಬೀಸಿದ ಹಿಟ್ಟಿನ ರೊಟ್ಟಿಯನ್ನು ಸಮರ್ಪಿಸಬೇಕು.


“ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿಯನ್ನು ಕೊಯ್ದರೆ, ನಿಮ್ಮ ಸುಗ್ಗಿಯ ಪ್ರಥಮ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.


ರೊಟ್ಟಿಗಳಲ್ಲದೆ, ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಬಲಿಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸಬೇಕು.


“ನಿನ್ನ ಧಾನ್ಯಗಳನ್ನೂ ಪಾನಗಳನ್ನೂ ನನಗೆ ಅರ್ಪಿಸುವುದಕ್ಕೆ ತಡಮಾಡಬೇಡ. “ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಮೀಸಲಾಗಿಡಬೇಕು.


ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲದಲ್ಲಿರುವ ಎಫ್ರೋನನ ಹೊಲವೂ, ಆ ಹೊಲದಲ್ಲಿರುವ ಗವಿಯೂ, ಆ ಹೊಲದ ಸುತ್ತಲೂ ಇರುವ ಎಲ್ಲಾ ಮರಗಳೂ,


ಆದರೆ ಈಗ ಕ್ರಿಸ್ತ ಯೇಸು ಸತ್ತವರೊಳಗಿಂದ ಎದ್ದು ಬಂದೇ ಇದ್ದಾರೆ. ನಿದ್ರೆ ಹೋದವರಲ್ಲಿ ಪ್ರಥಮಫಲವಾಗಿದ್ದಾರೆ.


“ಪ್ರಥಮ ಗೋಧಿ ಸುಗ್ಗಿಯ ವಾರಗಳ ಹಬ್ಬವನ್ನು ಮತ್ತು ವರ್ಷದ ಕೊನೆಯಲ್ಲಿ ಬೆಳೆ ಸಂಗ್ರಹದ ಹಬ್ಬವನ್ನು ಆಚರಿಸಬೇಕು.


ಇದಲ್ಲದೆ ನೀವು ನಿಮ್ಮ ಮನೆಗಳಿಂದ ತಂದ ಹಿಟ್ಟಿನಲ್ಲಿ ಎರಡೆರಡು ಓಮರ್ ಹಿಟ್ಟಿನಿಂದ ಎರಡು ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋಧಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವ ದೇವರಿಗೆ ನೈವೇದ್ಯವಾಗಿ ನಿವಾಳಿಸಬೇಕು.


“ಜನರು ಯೆಹೋವ ದೇವರಿಗೆ ಸಮರ್ಪಿಸುವ ಪ್ರಥಮ ಫಲಗಳನ್ನು ಅಂದರೆ ಎಲ್ಲಾ ಉತ್ತಮವಾದ ಎಣ್ಣೆಯೂ ಉತ್ತಮವಾದ ಹೊಸ ದ್ರಾಕ್ಷಾರಸ, ಧಾನ್ಯವೂ ನಿನಗೆ ಕೊಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು