Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 2:7 - ಕನ್ನಡ ಸಮಕಾಲಿಕ ಅನುವಾದ

7 ನಿನ್ನ ಕಾಣಿಕೆಯು ತವೆಯಲ್ಲಿ ಬೇಯಿಸಿದ ಧಾನ್ಯವಾಗಿದ್ದರೆ, ಅದು ನಯವಾದ ಎಣ್ಣೆಯಿಂದ ಕೂಡಿದ ಹಿಟ್ಟಿನಿಂದ ಮಾಡಿದ್ದಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀವು ಅರ್ಪಿಸುವ ಧಾನ್ಯ ನೈವೇದ್ಯ ಬಾಂಡ್ಲಿಯಲ್ಲಿ ಪಕ್ವಮಾಡಿದ್ದಾದರೆ ಅದು ಎಣ್ಣೆ ಹೊಯ್ದ ಗೋದಿಹಿಟ್ಟಿನದಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀವು ಅರ್ಪಿಸುವುದು ಬಾಂಡ್ಲಿಯಲ್ಲಿ ಪಕ್ವಮಾಡಿದ್ದಾದರೆ ಅದು ಎಣ್ಣೆ ಹೊಯ್ದ ಗೋದಿ ಹಿಟ್ಟಿನದಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀವು ಅರ್ಪಿಸುವದು ಬಾಂಡ್ಲೆಯಲ್ಲಿ ಪಕ್ವಮಾಡಿದ್ದಾದರೆ ಅದು ಎಣ್ಣೆ ಹೊಯಿದ ಗೋದಿಹಿಟ್ಟಿನದಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀವು ಬಾಂಡ್ಲಿಯಲ್ಲಿ ಪಕ್ವಮಾಡಿದ ಪದಾರ್ಥವನ್ನು ಅರ್ಪಿಸಿದರೆ, ಅದು ಎಣ್ಣೆ ಬೆರೆಸಿದ ಶ್ರೇಷ್ಠ ಗೋಧಿಹಿಟ್ಟಿನಿಂದ ಮಾಡಿದ್ದಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 2:7
5 ತಿಳಿವುಗಳ ಹೋಲಿಕೆ  

ಒಲೆಯಲ್ಲಿ ಬೇಯಿಸಿದ ಬಾಂಡ್ಲಿಯಲ್ಲಿಯೂ ಬೋಗುಣಿಯಲ್ಲಿಯೂ ತಯಾರಿಸಿದ ಎಲ್ಲಾ ಧಾನ್ಯ ಸಮರ್ಪಣೆಯು ಸಮರ್ಪಿಸಿದ ಯಾಜಕನದಾಗಿರಬೇಕು.


ನೀನು ಅದನ್ನು ತುಂಡುಗಳನ್ನಾಗಿ ವಿಭಾಗಿಸಿ, ಅದರ ಮೇಲೆ ಎಣ್ಣೆ ಸುರಿಯಬೇಕು, ಅದು ಆಹಾರ ಸಮರ್ಪಣೆಯಾಗಿದೆ.


ನೀನು ಇವುಗಳಿಂದ ಮಾಡಿದ ಧಾನ್ಯ ಸಮರ್ಪಣೆಯನ್ನು ಯೆಹೋವ ದೇವರಿಗೆ ತರಬೇಕು. ಅದು ಯಾಜಕನಿಗೆ ಒಪ್ಪಿಸಿದಾಗ, ಅವನು ಅದನ್ನು ಬಲಿಪೀಠದ ಬಳಿಗೆ ತರುವನು.


ಯೆಹೋವ ದೇವರ ಮಂದಿರದ ಸೇವೆಯ ಕಾರ್ಯದಲ್ಲಿರುವ ಸಮ್ಮುಖದ ರೊಟ್ಟಿಗೋಸ್ಕರವೂ, ಅರ್ಪಣೆ ಬಲಿಯ ನಯವಾದ ಹಿಟ್ಟಿಗೋಸ್ಕರವೂ, ಹುಳಿಯಿಲ್ಲದ ರೊಟ್ಟಿಗಳಿಗೋಸ್ಕರವೂ, ಬಾಂಡ್ಲಿಯಲ್ಲಿ ಮಾಡಿದ್ದಕ್ಕೋಸ್ಕರವೂ, ಕರಿದಿದ್ದಕ್ಕೋಸ್ಕರವೂ, ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳ ಬಳಿಯಲ್ಲಿ ಅವರಿಗೆ ನೇಮಕವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು