Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 2:9 - ಕನ್ನಡ ಸಮಕಾಲಿಕ ಅನುವಾದ

9 ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾಗಿ ಧಾನ್ಯ ಸಮರ್ಪಣೆಯನ್ನಾಗಿ ತೆಗೆದುಕೊಂಡು ಅದನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು, ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪಭಾಗವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯಾಜಕನು ಅದು ಸಮರ್ಪಿತವಾದುದೆಂದು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪ ಭಾಗವನ್ನು ಪ್ರತ್ಯೇಕಿಸಿ ಬಲಿಪೀಠದ ಮೇಲೆ ಹೋಮಮಾಡಲಿ. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ದಹನ ಬಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯಾಜಕನು ನೈವೇದ್ಯವನ್ನು ಸೂಚಿಸುವದಕ್ಕಾಗಿ ಅದರಲ್ಲಿ ಸ್ವಲ್ಪಭಾಗವನ್ನು ಪ್ರತ್ಯೇಕಿಸಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬಳಿಕ ಯಾಜಕನು ಧಾನ್ಯನೈವೇದ್ಯದ ಸ್ವಲ್ಪ ಭಾಗವನ್ನು ತೆಗೆದುಕೊಂಡು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ವೇದಿಕೆಯ ಮೇಲೆ ಹೋಮಮಾಡುವನು. ಅದು ಅಗ್ನಿಯ ಮೂಲಕ ಮಾಡಿದ ಸಮರ್ಪಣೆಯಾಗಿದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 2:9
19 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಪುತ್ರರ ಬಳಿಗೆ ತರಬೇಕು. ಅವನು ಹಿಟ್ಟಿನಲ್ಲಿಯೂ, ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜಕನು ಅದನ್ನು ಜ್ಞಾಪಕಾರ್ಥವಾಗಿ ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.


ನಾನು ಎಲ್ಲವನ್ನೂ ಪರಿಪೂರ್ಣವಾಗಿ ಹೊಂದಿದ್ದೇನೆ. ನನಗೆ ಅಗತ್ಯಕ್ಕಿಂತಲೂ ಹೆಚ್ಚು ದೊರೆತಿದೆ. ನೀವು ಎಪಫ್ರೊದೀತನಿಂದ ಕಳುಹಿಸುವವುಗಳು ಈಗ ನನಗೆ ತಲುಪಿದೆ; ನಿಮ್ಮ ಕೊಡುಗೆ ದೇವರನ್ನು ಮೆಚ್ಚಿಸುವ ಸುಗಂಧ ಕಾಣಿಕೆಯೂ ಸ್ವೀಕೃತವಾದ ಯಜ್ಞವೂ ಆಗಿರುತ್ತವೆ.


ಯಾಜಕನು ಧಾನ್ಯ ಸಮರ್ಪಣೆಯ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ, ಧಾನ್ಯ ಸಮರ್ಪಣೆಯ ಮೇಲಿರುವ ಅದರ ಎಣ್ಣೆಯನ್ನೂ, ಅದರ ಎಲ್ಲಾ ಸಾಂಬ್ರಾಣಿಯನ್ನೂ ತೆಗೆದುಕೊಂಡು ಜ್ಞಾಪಕಾರ್ಥವಾಗಿ ಯೆಹೋವ ದೇವರಿಗೆ ಬಲಿಪೀಠದ ಮೇಲೆ ಸುವಾಸನೆಗಾಗಿ ಅದನ್ನು ಸುಡಬೇಕು.


ನಿಮ್ಮ ವಿಶ್ವಾಸದಿಂದ ಬರುವ ಯಜ್ಞದ ಮೇಲೆಯೂ ಸೇವೆಯ ಮೇಲೆಯೂ ನಾನು ಪಾನಸಮರ್ಪಣೆಯಾದರೂ ಸಹ ಹರ್ಷದಿಂದ ನಿಮ್ಮೆಲ್ಲರೊಡನೆ ಆನಂದಿಸುವೆನು.


ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.


ಯೆಹೂದ್ಯರಲ್ಲದವರು ಪವಿತ್ರಾತ್ಮನಿಂದ ಪರಿಶುದ್ಧರಾಗಿ, ದೇವರಿಗೆ ಅಂಗೀಕೃತವಾದ ಕಾಣಿಕೆಗಳಾಗಬೇಕೆಂಬ ಕಾರಣದಿಂದ, ನಾನು ಯೆಹೂದ್ಯರಲ್ಲದವರಿಗೆ ಕ್ರಿಸ್ತ ಯೇಸುವಿನ ಸೇವಕನಾಗಿ ದೇವರ ಸುವಾರ್ತೆಯನ್ನು ಪ್ರಕಟಿಸಲು ದೇವರು ನನಗೆ ಕೃಪೆ ನೀಡಿದ್ದಾರೆ.


ಅದನ್ನೆಲ್ಲಾ ಬಲಿಪೀಠದ ಮೇಲೆ ಸುಡಬೇಕು. ಅದು ಯೆಹೋವ ದೇವರಿಗೆ ದಹನಬಲಿಯಾಗಿದೆ. ಅದು ಯೆಹೋವ ದೇವರಿಗೆ ಸುವಾಸನೆಯ ದಹನಬಲಿ.


ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು.


ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ, ಬೆಳ್ಳಿಯನ್ನು ಶುದ್ಧ ಮಾಡುವಂತೆ ಶುದ್ಧಮಾಡುವೆನು. ಬಂಗಾರವನ್ನು ಶೋಧಿಸುವ ಪ್ರಕಾರ ಅವರನ್ನು ಶೋಧಿಸುವೆನು. ಅವರು ನನ್ನ ಹೆಸರನ್ನು ಕರೆಯುವರು. ನಾನು ಅವರಿಗೆ ಉತ್ತರಕೊಡುವೆನು. ನಾನು, ‘ಇವರು ನನ್ನ ಜನರೆಂದು ಹೇಳುವೆನು,’ ‘ಯೆಹೋವ ದೇವರು ನಮ್ಮ ದೇವರು’ ಎಂದು ಅವರು ಹೇಳುವರು,” ಎಂದು ಹೇಳುತ್ತೇನೆ.


“ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಕುರುಬನನ್ನು ಹೊಡೆ, ಆಗ ಕುರಿಗಳು ಚದರಿಹೋಗುವುವು. ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.


ಆದರೂ ಆತನನ್ನು ಜಜ್ಜುವುದು ಯೆಹೋವ ದೇವರ ಚಿತ್ತವಾಗಿತ್ತು. ಯೆಹೋವ ದೇವರು ಆತನನ್ನು ಸಂಕಟಕ್ಕೆ ಒಳಪಡಿಸಿದನು. ಯೆಹೋವ ದೇವರು ಆತನ ಪ್ರಾಣವನ್ನು ದೋಷಪರಿಹಾರದ ಬಲಿಯನ್ನಾಗಿ ಮಾಡುವಾಗ, ಆತನು ತನ್ನ ಸಂತಾನವನ್ನು ಕಾಣುವನು. ಆತನು ತನ್ನ ದಿವಸಗಳನ್ನು ಉದ್ದ ಮಾಡಿದ ಮೇಲೆ ಮತ್ತು ಯೆಹೋವ ದೇವರ ಚಿತ್ತವು ಆತನ ಕೈಯಲ್ಲಿ ಸಫಲವಾಗುವುದು.


ನೀನು ಇವುಗಳಿಂದ ಮಾಡಿದ ಧಾನ್ಯ ಸಮರ್ಪಣೆಯನ್ನು ಯೆಹೋವ ದೇವರಿಗೆ ತರಬೇಕು. ಅದು ಯಾಜಕನಿಗೆ ಒಪ್ಪಿಸಿದಾಗ, ಅವನು ಅದನ್ನು ಬಲಿಪೀಠದ ಬಳಿಗೆ ತರುವನು.


ಯಾಜಕನು ಬಡಿದ ಕಾಳುಗಳಲ್ಲಿ ಕೆಲವು ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿಯನ್ನು ಜ್ಞಾಪಕಾರ್ಥವಾಗಿ ಸುಡಬೇಕು. ಇದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ.


ಅವನು ಸಮಾಧಾನ ಬಲಿಯ ಕೊಬ್ಬನ್ನು ತೆಗೆದಂತೆ, ಅದರ ಎಲ್ಲಾ ಕೊಬ್ಬನ್ನು ತೆಗೆಯಬೇಕು. ಯಾಜಕನು ಅದನ್ನು ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯಾಗಿ ಸುಡಬೇಕು. ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.


ತರುವಾಯ ಅವರು ಅದನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಜ್ಞಾಪಕಾರ್ಥವಾಗಿ ಅದರಿಂದ ತನ್ನ ಹಿಡಿಯಷ್ಟು ತೆಗೆದುಕೊಂಡು, ಬಲಿಪೀಠದ ಮೇಲೆ ಬೆಂಕಿಯ ಅರ್ಪಣೆಗಳಿಗನುಸಾರವಾಗಿ ಯೆಹೋವ ದೇವರಿಗಾಗಿ ಸುಡಬೇಕು. ಅದು ಪಾಪ ಪರಿಹಾರದ ಬಲಿಯಾಗಿರುವುದು.


ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾಗಿ ಇರುವಂತೆಯೂ, ಬೆಂಕಿಯ ಮೂಲಕ ಯೆಹೋವ ದೇವರಿಗೆ ಸಮರ್ಪಣೆಯಾಗುವಂತೆಯೂ, ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು.


ಆಗ ಯಾಜಕನು ಜ್ಞಾಪಕಾರ್ಥವಾಗಿ ಕಾಣಿಕೆಯಿಂದ ಒಂದು ಹಿಡಿ ತೆಗೆದುಕೊಂಡು, ಬಲಿಪೀಠದ ಮೇಲೆ ಸುಟ್ಟು, ಸ್ತ್ರೀಗೆ ಆ ನೀರನ್ನು ಕುಡಿಸಬೇಕು.


ಅದರ ಕರುಳುಗಳನ್ನೂ, ಕಾಲುಗಳನ್ನೂ ಅವರು ನೀರಿನಲ್ಲಿ ತೊಳೆಯಬೇಕು. ಯಾಜಕನು ಎಲ್ಲವನ್ನೂ ಬಲಿಪೀಠದ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ, ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು