Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 20:17 - ಕನ್ನಡ ಸಮಕಾಲಿಕ ಅನುವಾದ

17 “ ‘ಒಬ್ಬನು ತನ್ನ ತಂದೆಯ ಇಲ್ಲವೆ ತನ್ನ ತಾಯಿಯ ಮಗಳಾದ ತನ್ನ ಸಹೋದರಿಯ ಬೆತ್ತಲೆತನವನ್ನು ನೋಡಿದರೆ, ಇಲ್ಲವೆ ಅವಳು ಅವನ ಬೆತ್ತಲೆತನವನ್ನು ನೋಡಿದರೆ ಅದು ದುಷ್ಟತನವೇ. ಅವರನ್ನು ತಮ್ಮ ಜನರ ಮಧ್ಯದಿಂದ ತೆಗೆದುಹಾಕಬೇಕು. ಅವರ ರಕ್ತವು ಅವರ ಮೇಲೆ ಇರುವುದು. ಅವನು ತನ್ನ ಸಹೋದರಿಯನ್ನು ಸಂಗಮಿಸಿದ್ದರಿಂದ ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯಾವನಾದರೂ ತನ್ನ ಒಡಹುಟ್ಟಿದವಳನ್ನು ಅಂದರೆ ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಕರೆದುಕೊಂಡು ಅವಳ ಮಾನವನ್ನು ಇವನೂ ಹಾಗು ಇವನ ಮಾನವನ್ನು ಅವಳೂ ನೋಡಿದರೆ ಅದು ನಾಚಿಕೆಗೇಡಾದ ಕೆಲಸವಾಗಿರುವುದರಿಂದ ಅವರ ಕುಲದವರ ಎದುರಾಗಿಯೇ ಅವರಿಗೆ ಮರಣಶಿಕ್ಷೆಯನ್ನು ಮಾಡಿಸಬೇಕು. ಆ ಮನುಷ್ಯನು ಒಡಹುಟ್ಟಿದವಳನ್ನು ಸಂಗಮಿಸಿದ್ದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಯಾವನಾದರೂ ತನ್ನ ಒಡಹುಟ್ಟಿದವಳನ್ನು ಅಂದರೆ ತಂದೆಯ ಮಗಳನ್ನಾಗಲಿ ತಾಯಿಯ ಮಗಳನ್ನಾಗಲಿ ಕರೆದುಕೊಂಡು ಅವಳ ಮಾನವನ್ನು ಇವನೂ ಇವನ ಮಾನವನ್ನು ಅವಳೂ ನೋಡಿದರೆ ಅದು ನಾಚಿಕೆಗೇಡಾದ ಕೆಲಸವಾಗಿರುವುದರಿಂದ ಅವರ ಕುಲದವರ ಎದುರಾಗಿಯೇ ಅವರಿಗೆ ಮರಣಶಿಕ್ಷೆಯನ್ನು ಮಾಡಿಸಬೇಕು. ಆ ಮನುಷ್ಯನು ಒಡಹುಟ್ಟಿದವಳನ್ನು ಸಂಗಮಿಸಿದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯಾವನಾದರೂ ತನ್ನ ಒಡಹುಟ್ಟಿದವಳನ್ನು ಅಂದರೆ ತಂದೆಯ ಮಗಳನ್ನಾಗಲಿ ತಾಯಿಯ ಮಗಳನ್ನಾಗಲಿ ಕರೆದುಕೊಂಡು ಅವಳ ಮಾನವನ್ನು ಇವನೂ ಇವನ ಮಾನವನ್ನು ಅವಳೂ ನೋಡಿದರೆ ಅದು ನಾಚಿಕೆಗೇಡಾದ ಕೆಲಸವಾಗಿರುವದರಿಂದ ಅವರ ಕುಲದವರ ಎದುರಾಗಿಯೇ ಅವರಿಗೆ ಮರಣಶಿಕ್ಷೆಯನ್ನು ಮಾಡಿಸಬೇಕು. ಆ ಮನುಷ್ಯನು ಒಡಹುಟ್ಟಿದವಳನ್ನು ಸಂಗವಿುಸಿದದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಒಬ್ಬನು ತನ್ನ ಸಹೋದರಿಯನ್ನಾಗಲಿ ತನ್ನ ತಂದೆಯ ಅಥವಾ ತಾಯಿಯ ಮಗಳನ್ನಾಗಲಿ ಮದುವೆಯಾಗಿ ಲೈಂಗಿಕ ಸಂಬಂಧ ಬೆಳೆಸಿದರೆ, ಅದು ಅವಮಾನಕರವಾದ ಕಾರ್ಯವಾಗಿದೆ! ಅವರಿಗೆ ಬಹಿರಂಗವಾಗಿ ಶಿಕ್ಷೆಯಾಗಬೇಕು. ಅವರನ್ನು ಅವರ ಕುಲದಿಂದ ತೆಗೆದುಹಾಕಬೇಕು. ತನ್ನ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಿದ ಪುರುಷನಿಗೆ ಅವನು ಮಾಡಿದ ಪಾಪಕ್ಕಾಗಿ ಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 20:17
8 ತಿಳಿವುಗಳ ಹೋಲಿಕೆ  

“ ‘ನಿನ್ನ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಆಕೆ ನಿನ್ನ ತಂದೆಯ ಮಗಳಾಗಿರಬಹುದು ಇಲ್ಲವೆ ತಾಯಿಯ ಮಗಳಾಗಿರಬಹುದು. ಆಕೆ ಒಂದೇ ಮನೆಯಲ್ಲಿ ಹುಟ್ಟಿರಬಹುದು ಇಲ್ಲವೆ ಬೇರೆ ಕಡೆಯಲ್ಲಿ ಹುಟ್ಟಿರಬಹುದು ಆಕೆಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ.


ಅವರು, “ತನ್ನ ತಂದೆಯ ಮಗಳ ಸಂಗಡವಾಗಲಿ, ತಾಯಿಯ ಮಗಳ ಸಂಗಡವಾಗಲಿ ಅನೈತಿಕವಾಗಿ ನಡೆದುಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ಅಸಹ್ಯಕರವಾದದ್ದನ್ನು ಮಾಡಿದ್ದಾನೆ; ಮತ್ತೊಬ್ಬನು ಅತ್ಯಾಚಾರದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಮಾನಭಂಗಪಡಿಸಿದ್ದಾನೆ.


ಅದಕ್ಕವಳು, “ನನ್ನ ಸಹೋದರನೇ, ಬೇಡ. ನನ್ನನ್ನು ಒತ್ತಾಯ ಮಾಡಬೇಡ. ಏಕೆಂದರೆ ಇಸ್ರಾಯೇಲಿನಲ್ಲಿ ಇಂಥ ಕಾರ್ಯ ಮಾಡಕೂಡದು. ಇಂಥ ದುಷ್ಟತನದ ಕೆಲಸ ಮಾಡಬೇಡ.


ಇದಲ್ಲದೆ ನಿಜವಾಗಿಯೂ ಅವಳು ನನ್ನ ತಂಗಿ, ಆದರೆ ನನ್ನ ತಾಯಿಯ ಮಗಳಲ್ಲ, ನನ್ನ ತಂದೆಯ ಮಗಳೇ, ನನಗೆ ಹೆಂಡತಿಯಾದಳು.


“ ‘ಇದಲ್ಲದೆ ಒಬ್ಬ ಸ್ತ್ರೀಯು ಒಂದು ಪಶುವಿನೊಂದಿಗೆ ಸಂಗಮಿಸುವುದಕ್ಕಾಗಿ ಮಲಗಿಕೊಂಡರೆ, ನೀವು ಆ ಸ್ತ್ರೀಯನ್ನೂ, ಆ ಪಶುವನ್ನೂ ಕೊಲ್ಲಬೇಕು. ಅವರಿಗೆ ನಿಶ್ಚಯವಾಗಿ ಮರಣದಂಡನೆಯಾಗಬೇಕು. ಅವರ ಪಾಪವು ಅವರ ಮೇಲೆ ಇರುವುದು.


ಆಗ ಗಂಡನು ನಿರಪರಾಧಿಯಾಗಿರುವನು. ಆದರೆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು.’ ”


ಇದರ ಹಾಗೆ ತೈಲ ಮಾಡುವವನೂ ಯಾಜಕನಲ್ಲದವನ ಮೇಲೆ ಇದನ್ನು ಹಚ್ಚುವವನನ್ನು ಸ್ವಜನರೊಳಗಿಂದ ತೆಗೆದುಹಾಕಬೇಕು,’ ಎಂದು ಹೇಳು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು