Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 20:18 - ಕನ್ನಡ ಸಮಕಾಲಿಕ ಅನುವಾದ

18 “ ‘ಒಬ್ಬ ಮನುಷ್ಯನು ಮುಟ್ಟಾದ ಸ್ತ್ರೀಯೊಂದಿಗೆ ಮಲಗಿ, ಆಕೆಯೊಂದಿಗೆ ಲೈಂಗಿಕ ಸಂಪರ್ಕ ಮಾಡಿದರೆ, ಅವನು ಆಕೆಯ ಮುಟ್ಟಿನ ಮೂಲವನ್ನು ಬಹಿರಂಗಪಡಿಸಿದ್ದಾನೆ. ಆಕೆ ಅದನ್ನು ಬಹಿರಂಗಪಡಿಸಿದ್ದಾಳೆ. ಅವರಿಬ್ಬರನ್ನೂ ಸ್ವಜನರಿಂದ ಬಹಿಷ್ಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯಾವನಾದರೂ ಮುಟ್ಟಾದ ಸ್ತ್ರೀಯನ್ನು ಸಂಗಮಿಸಿದರೆ ಅವನು ಅವಳ ರಕ್ತಸ್ರಾವದ ಸ್ಥಾನವನ್ನು ಬಯಲುಪಡಿಸಿದವನು, ಅವಳು ಬಯಲುಪಡಿಸಿಕೊಂಡವಳು; ಆದುದರಿಂದ ಅವರಿಬ್ಬರನ್ನು ಕುಲದಿಂದ ಹೊರಗೆ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯಾವನಾದರೂ ಮುಟ್ಟಾದ ಸ್ತ್ರೀಯನ್ನು ಸಂಗಮಿಸಿದರೆ ಅವನು ಅವಳ ಶೋಣಿತಸ್ಥಾನವನ್ನು ಬಯಲುಪಡಿಸಿದವನು, ಅವಳು ಬಯಲುಪಡಿಸಿಕೊಂಡವಳು; ಆದ್ದರಿಂದ ಅವರಿಬ್ಬರೂ ಕುಲದಿಂದ ತೆಗೆದುಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯಾವನಾದರೂ ಮುಟ್ಟಾದ ಸ್ತ್ರೀಯನ್ನು ಸಂಗವಿುಸಿದರೆ ಅವನು ಅವಳ ಶೋಣಿತಸ್ಥಾನವನ್ನು ಬೈಲುಪಡಿಸಿದವನು. ಅವಳು ಬೈಲುಪಡಿಸಿಕೊಂಡವಳು; ಆದದರಿಂದ ಅವರಿಬ್ಬರೂ ಕುಲದಿಂದ ತೆಗೆದುಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಒಬ್ಬನು ಸ್ತ್ರೀಯನ್ನು ಅವಳ ತಿಂಗಳ ಮುಟ್ಟಿನ ಸಮಯದಲ್ಲಿ ಸಂಭೋಗ ಮಾಡಿದರೆ, ಅವರಿಬ್ಬರನ್ನೂ ಕುಲದಿಂದ ತೆಗೆದುಹಾಕಬೇಕು. ಯಾಕೆಂದರೆ ಅವನು ಅವಳ ಶೋಣಿತಸ್ಥಾನವನ್ನು ಬಯಲುಪಡಿಸಿದನು; ಅವಳು ಬಯಲುಪಡಿಸಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 20:18
6 ತಿಳಿವುಗಳ ಹೋಲಿಕೆ  

“ ‘ಮುಟ್ಟಿನಿಂದ ಅಶುದ್ಧಳಾದ ಸ್ತ್ರೀಯ ಸಂಪರ್ಕ ಮಾಡಬೇಡ.


“ ‘ಯಾವನಾದರೂ ಅವಳೊಂದಿಗೆ ಸಂಗಮಿಸಿದರೆ ಮತ್ತು ಅವಳ ಸ್ರಾವವು ಅವನಿಗೆ ತಗಲಿದರೆ, ಅವನು ಏಳು ದಿವಸ ಅಶುದ್ಧನಾಗಿರಬೇಕು. ಅವನು ಮಲಗಿಕೊಳ್ಳುವ ಹಾಸಿಗೆಯೆಲ್ಲಾ ಅಶುದ್ಧವಾಗಿರುವುದು.


ನಿಮ್ಮಲ್ಲಿ ತಂದೆಯ ಹಾಸಿಗೆಯನ್ನು ಅವಮಾನಿಸುವವರು ಇದ್ದಾರೆ, ನಿನ್ನಲ್ಲಿ ಮುಟ್ಟಿನಿಂದ ಅಶುದ್ಧಳಾದವಳನ್ನು ಕೂಡಿದ್ದಾರೆ.


ಪರ್ವತಗಳ ಪೂಜಾಸ್ಥಳಗಳಲ್ಲಿ ತಿನ್ನದೆ, ಇಸ್ರಾಯೇಲಿನ ಮನೆತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ, ಮುಟ್ಟಾಗಿರುವ ಸ್ತ್ರೀಯನ್ನು ಸಮೀಪಿಸದೆ,


“ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳು: ‘ಒಬ್ಬ ಸ್ತ್ರೀಯು ಗರ್ಭಧರಿಸಿ, ಗಂಡು ಮಗುವನ್ನು ಹೆತ್ತರೆ, ಅವಳು ಏಳು ದಿನಗಳು ಅಶುದ್ಧಳಾಗಿರಬೇಕು. ತನ್ನ ಮುಟ್ಟಿಗಾಗಿ ಪ್ರತ್ಯೇಕಿಸಿದ ದಿನಗಳ ಪ್ರಕಾರ ಅವಳು ಅಶುದ್ಧಳಾಗಿರಬೇಕು.


ಇದರ ಹಾಗೆ ತೈಲ ಮಾಡುವವನೂ ಯಾಜಕನಲ್ಲದವನ ಮೇಲೆ ಇದನ್ನು ಹಚ್ಚುವವನನ್ನು ಸ್ವಜನರೊಳಗಿಂದ ತೆಗೆದುಹಾಕಬೇಕು,’ ಎಂದು ಹೇಳು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು