ಯಾಜಕಕಾಂಡ 20:2 - ಕನ್ನಡ ಸಮಕಾಲಿಕ ಅನುವಾದ2 “ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು: ‘ಇಸ್ರಾಯೇಲರಲ್ಲಿಯಾಗಲಿ, ಇಸ್ರಾಯೇಲಿನಲ್ಲಿ ಪ್ರವಾಸಿಯಾದ ಪರಕೀಯರಲ್ಲಿಯಾಗಲಿ ಯಾವನಾದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ, ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು. ದೇಶದ ಜನರು ಅವನಿಗೆ ಕಲ್ಲೆಸೆಯಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಪರದೇಶದವರಲ್ಲಾಗಲಿ ಯಾವನಾದರೂ ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟರೆ, ಅವನಿಗೆ ಮರಣಶಿಕ್ಷೆಯಾಗಬೇಕು; ದೇಶದ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇಸ್ರಯೇಲರಲ್ಲೇ ಆಗಲಿ, ಅವರ ಮಧ್ಯೆ ವಾಸಿಸುವ ಅನ್ಯದೇಶೀಯರಲ್ಲೇ ಆಗಲಿ ಯಾವನಾದರು ತನ್ನ ಮಕ್ಕಳಲ್ಲಿ ಒಂದನ್ನು ಮೋಲೆಕ ದೇವತೆಗೆ ಅರ್ಪಿಸಿದರೆ ಅವನಿಗೆ ಮರಣ ಶಿಕ್ಷೆಯಾಗಬೇಕು; ನಾಡಿನ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀನು ಇಸ್ರಾಯೇಲ್ಯರಿಗೆ ಹೀಗೆ ಹೀಗೆ ಆಜ್ಞಾಪಿಸಬೇಕು - ಇಸ್ರಾಯೇಲ್ಯರಲ್ಲಾಗಲಿ ಅವರ ನಡುವೆ ಇಳುಕೊಂಡಿರುವ ಪರದೇಶದವರಲ್ಲಾಗಲಿ ಯಾವನಾದರೂ ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟರೆ ಅವನಿಗೆ ಮರಣಶಿಕ್ಷೆಯಾಗಬೇಕು; ದೇಶದ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸಬೇಕು. ನಿಮ್ಮ ದೇಶದಲ್ಲಿರುವ ಒಬ್ಬನು ತನ್ನ ಮಕ್ಕಳಲ್ಲಿ ಒಬ್ಬನನ್ನು ಸುಳ್ಳು ದೇವರಾದ ಮೊಲೆಕನಿಗೆ ಅರ್ಪಿಸಿದರೆ ಅವನನ್ನು ಕೊಲ್ಲಬೇಕು. ಅವನು ಸ್ವದೇಶಸ್ಥನಾದರೂ ಇಸ್ರೇಲರಲ್ಲಿ ವಾಸಿಸುವ ಪರದೇಶಸ್ಥನಾದರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅಧ್ಯಾಯವನ್ನು ನೋಡಿ |
ನಿಮ್ಮ ದಾನಗಳನ್ನು ತರುವಾಗಲೂ, ಬೆಂಕಿಯಲ್ಲಿ ನಿಮ್ಮ ಮಕ್ಕಳನ್ನು ಯಜ್ಞವಾಗಿ ಅರ್ಪಿಸುವಾಗಲೂ, ನೀವು ಇಂದಿನವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿಕೊಳ್ಳುತ್ತಿದ್ದೀರಿ. ಹೀಗಿರುವಾಗ ಇಸ್ರಾಯೇಲ್ ವಂಶದವರೇ, ನೀವು ನನ್ನನ್ನು ವಿಚಾರಿಸಲು ಅನುಮತಿಸಬೇಕೆ? ನನ್ನ ಜೀವದಾಣೆ ನಾನು ನಿಮ್ಮನ್ನು ವಿಚಾರಿಸಲು ಅನುಮತಿಸುವುದಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.