Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 20:23 - ಕನ್ನಡ ಸಮಕಾಲಿಕ ಅನುವಾದ

23 ನಾನು ನಿಮ್ಮೆದುರಿನಲ್ಲಿಯೇ ಹೊರಗೆ ಹಾಕಿದ ಜನಾಂಗಗಳಂತೆ ನೀವು ನಡೆಯಬಾರದು. ಏಕೆಂದರೆ ಅವರು ಇಂಥವುಗಳನ್ನೆಲ್ಲಾ ಮಾಡಿದ್ದಾರೆ. ಆದಕಾರಣ ನಾನು ಅವರನ್ನು ಕಂಡು ಅಸಹ್ಯಗೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಾನು ನಿಮಗಿಂತ ಮೊದಲು ಹೊರಡಿಸಿದ ಜನಾಂಗದ ಆಚಾರಗಳನ್ನು ನೀವು ಅನುಸರಿಸಬಾರದು; ಅವರು ಈ ದುರಾಚಾರಗಳನ್ನೆಲ್ಲಾ ನಡಿಸಿದ್ದರಿಂದ ನನಗೆ ಅಸಹ್ಯವಾದಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಾನು ನಿಮ್ಮ ಎದುರಿನಿಂದ ಹೊರಡಿಸುವ ಜನಾಂಗದ ಆಚಾರಗಳನ್ನು ನೀವು ಅನುಸರಿಸಬಾರದು; ಅವರು ಈ ದುರಾಚಾರಗಳನ್ನೆಲ್ಲಾ ನಡಿಸಿದುದರಿಂದ ನನಗೆ ಹೇಸಿಗೆಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಾನು ನಿಮ್ಮ ಎದುರಿನಿಂದ ಹೊರಡಿಸುವ ಜನಾಂಗದ ಆಚಾರಗಳನ್ನು ನೀವು ಅನುಸರಿಸಬಾರದು; ಅವರು ಈ ದುರಾಚಾರಗಳನ್ನೆಲ್ಲಾ ನಡಿಸಿದದರಿಂದ ನನಗೆ ಹೇಸಿಗೆಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆ ದೇಶವನ್ನು ಬಿಟ್ಟುಹೋಗುವಂತೆ ಅಲ್ಲಿಯ ಜನರನ್ನು ನಾನು ಹೊರಡಿಸಿಬಿಡುತ್ತಿದ್ದೇನೆ. ಯಾಕೆಂದರೆ ಅವರು ಆ ಪಾಪಗಳನ್ನೆಲ್ಲಾ ಮಾಡಿದರು. ನಾನು ಆ ಪಾಪಗಳನ್ನು ದ್ವೇಷಿಸುತ್ತೇನೆ. ಆದ್ದರಿಂದ ಅವರು ಜೀವಿಸಿದಂತೆ ನೀವು ಜೀವಿಸಬೇಡಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 20:23
11 ತಿಳಿವುಗಳ ಹೋಲಿಕೆ  

ನಿಮ್ಮ ನೀತಿಗೋಸ್ಕರವೂ, ನಿಮ್ಮ ಹೃದಯದ ಯಥಾರ್ಥತೆಗೋಸ್ಕರವೂ ನೀವು ಅವರ ದೇಶವನ್ನು ಸ್ವತಂತ್ರಿಸಿಕೊಳ್ಳುವುದಕ್ಕೆ ಬರುವುದಿಲ್ಲ. ಆ ಜನಾಂಗಗಳ ಕೆಟ್ಟತನಕ್ಕೋಸ್ಕರವೂ, ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರಡಿಸುತ್ತಾರೆ.


“ ‘ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು. ಏಕೆಂದರೆ ನಿಮ್ಮ ಮುಂದೆಯೇ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಿಂದ ಹೊಲೆಯಾಗಿವೆ.


ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”


ನೀವು ವಾಸವಾಗಿದ್ದ ಈಜಿಪ್ಟ್ ದೇಶದ ಆಚಾರಗಳನ್ನು ಅನುಸರಿಸಬಾರದು. ನಿಮ್ಮನ್ನು ಸೇರಿಸಲಿರುವ ಕಾನಾನ್ ದೇಶದವರ ಆಚಾರಗಳನ್ನು ನೀವು ಮಾಡಬಾರದು. ಇಲ್ಲವೆ ನೀವು ಅವರ ಪದ್ಧತಿಗಳನುಸಾರ ನಡೆಯಬಾರದು.


ನಿಮ್ಮೆದುರಿನಲ್ಲಿದ್ದ ಆ ದೇಶದವರು ಈ ಎಲ್ಲಾ ಅಸಹ್ಯವಾದವುಗಳನ್ನು ಮಾಡಿದ್ದರಿಂದ ದೇಶವೂ ಅಶುದ್ಧವಾಯಿತು.


ಇದಲ್ಲದೆ, ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು. ಮಂದೆಯು ನನ್ನನ್ನು ಅಸಹ್ಯಪಡಿಸಿತು, ಮತ್ತು ಅವುಗಳಿಂದ ನನಗೆ ಬೇಸರವಾಯಿತು.


ದೇವರು ಇದನ್ನು ಕಂಡಾಗ, ಬೇಸರಗೊಂಡು ಇಸ್ರಾಯೇಲನ್ನು ಪರಿಪೂರ್ಣವಾಗಿ ತಿರಸ್ಕರಿಸಿಬಿಟ್ಟರು.


ದೇಶವೂ ಅಶುದ್ಧವಾಗಿದೆ. ಆದ್ದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು. ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವುದು.


“ನೀನು ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳಬೇಕು, ‘ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು