Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 20:24 - ಕನ್ನಡ ಸಮಕಾಲಿಕ ಅನುವಾದ

24 ಆದರೆ, “ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ಆ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ.” ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಿಮಗಾದರೂ, ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ, ಹಾಲೂ ಮತ್ತು ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಿಮಗಾದರೋ - ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ; ಹಾಲೂ ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ? ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಿಮಗಾದರೋ - ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ; ಹಾಲೂ ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನೀವು ಅವರ ದೇಶವನ್ನು ಪಡೆಯುವಿರಿ ಎಂದು ನಾನು ನಿಮಗೆ ಹೇಳಿದ್ದೇನೆ. ನಾನು ಅವರ ದೇಶವನ್ನು ನಿಮಗೆ ಕೊಡುವೆ. ಅದು ನಿಮ್ಮ ದೇಶವಾಗಿರುವದು. ಅದು ಅನೇಕ ಒಳ್ಳೆ ಸಂಗತಿಗಳಿಂದ ತುಂಬಿದ ದೇಶವಾಗಿದೆ. ನಾನು ನಿಮ್ಮ ದೇವರಾಗಿರುವ ಯೆಹೋವನು! “ನಾನು ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿಕೊಂಡಿದ್ದೇನೆ. ನಾನು ನಿಮ್ಮನ್ನು ಇತರ ಜನರಿಂದ ಆರಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 20:24
17 ತಿಳಿವುಗಳ ಹೋಲಿಕೆ  

ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರೇ, ಯೆಹೋವ ದೇವರು ಭೂಮಿಯ ಮೇಲಿರುವ ಎಲ್ಲಾ ಜನರೊಳಗಿಂದ ನಿಮ್ಮನ್ನೇ ತಮ್ಮ ಅಮೂಲ್ಯವಾದ ಆಸ್ತಿಯಾಗಿ ಆಯ್ದುಕೊಂಡಿದ್ದಾರೆ.


ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರು. ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಭೂಮಿಯ ಮೇಲಿರುವ ಎಲ್ಲಾ ಜನರೊಳಗಿಂದ ತಮಗೆ ಸ್ವಂತ ಜನರಾಗಿರಲು ತಮ್ಮ ಆಸ್ತಿಯಾಗಿ ಆರಿಸಿಕೊಂಡಿದ್ದಾರೆ.


ನಾನು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಕೊಡುವೆನೆಂದು ಕೈಯನ್ನೆತ್ತಿ ಪ್ರಮಾಣ ಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸೊತ್ತಾಗಿ ಕೊಡುವೆನೆಂದು ಹೇಳಿದ ಯೆಹೋವ ದೇವರು ನಾನೇ,’ ಎಂದು ಹೇಳು,” ಎಂದರು.


ಈಜಿಪ್ಟಿನ ವ್ಯಥೆಯಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ಇರುವ ಹಾಲು ಜೇನು ಹರಿಯುವ ದೇಶಕ್ಕೆ ಬರಮಾಡುವೆನೆಂದು ವಾಗ್ದಾನ ಮಾಡಿದ್ದೇನೆ,’ ಎಂದು ಅವರಿಗೆ ತಿಳಿಸು.


ಆದಕಾರಣ ಅವರನ್ನು ಈಜಿಪ್ಟನವರ ಕೈಯೊಳಗಿಂದ ಬಿಡುಗಡೆ ಮಾಡುವುದಕ್ಕೆ ಬಂದಿದ್ದೇನೆ. ನಾನು ಅವರನ್ನು ಆ ದೇಶದಿಂದ ಬಿಡಿಸಿ, ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


ನೀವು ನನ್ನವರಾಗಿರುವಂತೆ ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಿಸಿದ ಯೆಹೋವ ದೇವರಾದ ನಾನು ಪರಿಶುದ್ಧನಾಗಿರುವುದರಿಂದ, ನೀವು ನನಗೆ ಪರಿಶುದ್ಧರಾಗಿರಬೇಕು.


ಏಕೆಂದರೆ ನನಗೂ ನಿಮ್ಮ ಜನರಿಗೂ ನಿಮ್ಮ ದೃಷ್ಟಿಯಲ್ಲಿ ದಯೆ ದೊರಕಿತೆಂದು ಯಾವುದರಿಂದ ತಿಳಿದುಬರುವುದು? ನೀವು ನನ್ನೊಂದಿಗೆ ಹೋಗುವುದರಿಂದಲ್ಲವೋ? ಹೀಗೆ ನಾನೂ ನಿಮ್ಮ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕವಾಗಿರುವೆವು,” ಎಂದನು.


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ನೀವು ಈಜಿಪ್ಟಿನಿಂದ ನಮ್ಮ ಪಿತೃಗಳನ್ನು ಹೊರಗೆ ತಂದಾಗ ನಿಮ್ಮ ಸೇವಕನಾದ ಮೋಶೆಯ ಮುಖಾಂತರವಾಗಿ ಹೇಳಿದ ಹಾಗೆಯೇ ಸಾರ್ವಭೌಮ ಯೆಹೋವ ದೇವರೇ, ಅವರನ್ನು ನಿಮ್ಮ ಬಾಧ್ಯತೆಯಾಗಿ ಭೂಮಿಯ ಸಮಸ್ತ ಜನರೊಳಗಿಂದ ಪ್ರತ್ಯೇಕಿಸಿರಿ,” ಎಂದನು.


ಬೆಟ್ಟಗಳ ತುದಿಯಿಂದ ಅವರನ್ನು ನೋಡುತ್ತೇನೆ. ಎತ್ತರದ ಗುಡ್ಡಗಳಿಂದ ಅವರನ್ನು ದೃಷ್ಟಿಸಿದ್ದೇನೆ. ನಾನು ಆ ಪ್ರತ್ಯೇಕವಾಗಿ ವಾಸಿಸುವ ಜನರನ್ನು ನೋಡುತ್ತೇನೆ. ಆ ಜನಾಂಗವು ತಾನು ಇತರ ಜನಾಂಗಗಳಂತೆ ಸಾಧಾರಣವೆಂದು ಎಣಿಸುವುದಿಲ್ಲ.


ಹಾಲೂ ಜೇನೂ ಹರಿಯುವ ದೇಶಕ್ಕೆ ಹೋಗು. ನಾನು ನಿಮ್ಮ ಸಂಗಡ ಹೋಗುವುದಿಲ್ಲ ಏಕೆಂದರೆ ನೀವು ಮಾತು ಕೇಳದ ಹಟಮಾರಿ ಜನರಾಗಿದ್ದೀರಿ ಮತ್ತು ಮಾರ್ಗದಲ್ಲಿ ನಾನು ನಿಮ್ಮನ್ನು ಸಂಹರಿಸಬೇಕಾಗಬಹುದು,” ಎಂದರು.


ಆದ್ದರಿಂದ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರ, ಹಿತ್ತಿಯರ, ಅಮೋರಿಯರ, ಹಿವ್ವಿಯರ, ಯೆಬೂಸಿಯರ ದೇಶಕ್ಕೆ ನಿಮ್ಮನ್ನು ಕರೆತಂದು ಅದನ್ನು ನಿಮಗೆ ಕೊಟ್ಟಾಗ ಈ ಹಬ್ಬವನ್ನು ಈ ತಿಂಗಳಲ್ಲಿ ಆಚರಿಸಬೇಕು.


ಆದ್ದರಿಂದ, “ಅವರ ನಡುವೆಯಿಂದ ಹೊರಟುಬಂದು ಪ್ರತ್ಯೇಕವಾಗಿರಿ. ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ನಾನು ನಿಮ್ಮನ್ನು ಸ್ವೀಕರಿಸುವೆನು ಎಂದು ಕರ್ತದೇವರು ಹೇಳುತ್ತಾರೆ.”


ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ಪ್ರೀತಿಸುತ್ತಿತ್ತು. ಆದರೆ ನೀವು ಲೋಕದವರಲ್ಲದೆ ಇರುವುದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಿಸುತ್ತದೆ.


ಯೆಹೋವ ದೇವರು ಮೋಶೆಗೆ, “ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ಜನರ ಸಂಗಡ ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ, ‘ನಿಮ್ಮ ಸಂತತಿಯವರಿಗೆ ಅದನ್ನು ಕೊಡುವೆನು,’ ಎಂದು ಹೇಳಿ ಪ್ರಮಾಣ ಮಾಡಿದ ದೇಶಕ್ಕೆ ಹೋಗು.


“ನಾನು ನಿಮಗೆ ಸೊತ್ತಾಗಿ ಕೊಡುವ ಕಾನಾನ್ ದೇಶದೊಳಗೆ ನೀವು ಬಂದ ಬಳಿಕ ನಾನು ನಿಮಗೆ ಸೊತ್ತಾಗಿ ಕೊಡುವ ಮನೆಯಲ್ಲಿ ಬೂಜನ್ನು ಬರಮಾಡಿದಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು