ಯಾಜಕಕಾಂಡ 20:5 - ಕನ್ನಡ ಸಮಕಾಲಿಕ ಅನುವಾದ5 ಆಗ ನಾನು ಆ ಮನುಷ್ಯನಿಗೂ, ಅವನ ಕುಟುಂಬಕ್ಕೂ ವಿರೋಧವಾಗಿಯೂ, ವಿಮುಖವಾಗಿಯೂ ಇರುವೆನು. ಮೋಲೆಕನನ್ನು ಪೂಜೆ ಮಾಡಿದ್ದಕ್ಕಾಗಿ ಅವನನ್ನೂ, ದೇವದ್ರೋಹಿಗಳಾಗಿ ಅವನನ್ನು ಹಿಂಬಾಲಿಸುವವರೆಲ್ಲರನ್ನೂ ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ನಾನು ಆ ಮನುಷ್ಯನಿಗೂ ಮತ್ತು ಅವನ ಕುಟುಂಬದವರಿಗೂ ವಿಮುಖನಾಗಿ ಅವನನ್ನು ಮಾತ್ರವಲ್ಲದೆ, ಅವನನ್ನು ಹೊಂದಿಕೊಂಡು ದೇವದ್ರೋಹಿಗಳಾಗಿ ಮೋಲೆಕನಿಗೆ ಸೇವೆ ಮಾಡಿದವರೆಲ್ಲರನ್ನು ಕುಲದಿಂದ ತೆಗೆದುಹಾಕುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಾನು ಆ ವ್ಯಕ್ತಿಗೂ ಅವನ ಕುಟುಂಬದವರಿಗೂ ವಿಮುಖನಾಗುವೆನು; ಅವನನ್ನು ಮಾತ್ರವಲ್ಲ, ಅವನನ್ನು ಹೊಂದಿಕೊಂಡು ದೇವದ್ರೋಹಿಗಳಾಗಿ ಮೋಲೆಕ ದೇವತೆಗೆ ಶರಣಾದವರೆಲ್ಲರನ್ನು ತಮ್ಮ ಜನದಿಂದ ತೆಗೆದುಹಾಕುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಾನಂತೂ ಆ ಮನುಷ್ಯನಿಗೂ ಅವನ ಕುಟುಂಬದವರಿಗೂ ವಿಮುಖನಾಗಿ ಅವನನ್ನು ಮಾತ್ರವಲ್ಲದೆ ಅವನನ್ನು ಹೊಂದಿಕೊಂಡು ದೇವದ್ರೋಹಿಗಳಾಗಿ ಮೋಲೆಕನಿಗೆ ಸೇವೆಮಾಡಿದವರೆಲ್ಲರನ್ನೂ ಕುಲದಿಂದ ತೆಗೆದುಹಾಕುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಾನು ಅವನಿಗೂ ಅವನ ಕುಟುಂಬಕ್ಕೂ ವಿರುದ್ಧನಾಗಿರುವೆನು; ನಾನು ಅವನನ್ನು ಅವನ ಜನರಿಂದ ಬೇರ್ಪಡಿಸುವೆನು. ಮೊಲೆಕನೊಡನೆ ಸೂಳೆತನ ಮಾಡುವ ಅವನನ್ನೂ ಅವನ ಹಿಂಬಾಲಕರನ್ನೂ ಅವರ ಜನರಿಂದ ಬೇರ್ಪಡಿಸುವೆನು. ಅಧ್ಯಾಯವನ್ನು ನೋಡಿ |