Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:10 - ಕನ್ನಡ ಸಮಕಾಲಿಕ ಅನುವಾದ

10 “ ‘ತನ್ನ ಸಹೋದರರೊಳಗೆ ಮಹಾಯಾಜಕನಾಗಿದ್ದು, ಯಾವನು ತೈಲಾಭಿಷೇಕ ಹೊಂದಿ, ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ, ಅವನು ತನ್ನ ತಲೆಯನ್ನು ಮುಚ್ಚಿಕೊಳ್ಳಲೂಬಾರದು, ತನ್ನ ಬಟ್ಟೆಗಳನ್ನು ಹರಿದುಕೊಳ್ಳಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “‘ಮಹಾಯಾಜಕನು ಅಂದರೆ ತನ್ನ ಸಹೋದರರಲ್ಲಿ ಪ್ರಧಾನನು, ಯಾವನು ತೈಲಾಭಿಷೇಕಹೊಂದಿ, ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ ಅವನು ದುಃಖಸೂಚನೆಗಾಗಿ ತನ್ನ ತಲೆಯ ಕೂದಲನ್ನು ಕೆದರಿಕೊಳ್ಳಬಾರದು, ಬಟ್ಟೆಗಳನ್ನು ಹರಿದುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಯಾಜಕರಲ್ಲಿ ಪ್ರಧಾನನು, ಅಂದರೆ ಯಾವನು ತೈಲಾಭಿಷೇಕ ಹೊಂದಿ ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ ಅವನು ಸಂತಾಪ ಸೂಚನೆಗಾಗಿ ತನ್ನ ತಲೆಗೂದಲನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯಾಜಕರಲ್ಲಿ ಪ್ರಧಾನನು ಅಂದರೆ ಯಾವನು ತೈಲಾಭಿಷೇಕಹೊಂದಿ ದೀಕ್ಷಾವಸ್ತ್ರಗಳನ್ನು ಧರಿಸಿ ಪಟ್ಟಕ್ಕೆ ಬರುವನೋ ಅವನು [ದುಃಖಸೂಚನೆಗಾಗಿ] ತನ್ನ ತಲೆಯ ಕೂದಲನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಪ್ರಧಾನಯಾಜಕನು ಅವನ ಸಹೋದರರೊಳಗಿಂದ ಆರಿಸಲ್ಪಟ್ಟವನಾಗಿದ್ದಾನೆ. ಅಭಿಷೇಕತೈಲವು ಅವನ ತಲೆಯ ಮೇಲೆ ಹೊಯ್ಯಲ್ಪಟ್ಟಿದೆ. ಈ ರೀತಿಯಾಗಿ ಅವನು ಪ್ರಧಾನಯಾಜಕನ ವಿಶೇಷ ಕೆಲಸಕ್ಕೆ ಆರಿಸಲ್ಪಟ್ಟಿದ್ದಾನೆ. ಅವನು ವಿಶೇಷ ಬಟ್ಟೆಗಳನ್ನು ಧರಿಸಿಕೊಳ್ಳಲು ಆರಿಸಲ್ಪಟ್ಟಿದ್ದಾನೆ. ಆದ್ದರಿಂದ ಅವನು ಬಹಿರಂಗವಾಗಿ ದುಃಖ ಸೂಚಿಸುವ ಕಾರ್ಯಗಳನ್ನು ಮಾಡಬಾರದು. ಅವನು ತನ್ನ ಕೂದಲನ್ನು ಕೆದರಿಕೊಳ್ಳಬಾರದು. ಅವನು ತನ್ನ ಬಟ್ಟೆಗಳನ್ನು ಹರಿದುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:10
18 ತಿಳಿವುಗಳ ಹೋಲಿಕೆ  

ಯಾವನು ತನ್ನ ತಂದೆಯ ಬದಲಾಗಿ ಮಹಾಯಾಜಕ ಉದ್ಯೋಗಕ್ಕೋಸ್ಕರ ಅಭಿಷಿಕ್ತನಾಗಿ ಪ್ರತಿಷ್ಟಿಸಲಾಗಿದ್ದಾನೋ, ಆ ಮಹಾಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. ಅವನು ಪರಿಶುದ್ಧ ಉಡುಪುಗಳಾದ ನಾರು ಬಟ್ಟೆಗಳನ್ನು ಧರಿಸಿಕೊಳ್ಳಬೇಕು.


ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಈತನು ದೇವದೂಷಣೆ ಮಾಡಿದ್ದಾನೆ. ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಏತಕ್ಕೆ? ನೋಡಿ, ಈಗ ಈತನ ದೇವದೂಷಣೆಯನ್ನು ನೀವೇ ಕೇಳಿದ್ದೀರಲ್ಲಾ


ಸಭೆಯು ಕೊಂದವನನ್ನು ರಕ್ತದ ಸೇಡು ತೀರಿಸುವವನ ಕೈಯಿಂದ ತಪ್ಪಿಸಿ, ಅವನು ಓಡಿ ಹೋದ ಆಶ್ರಯದ ಪಟ್ಟಣಕ್ಕೆ ತಿರುಗಿ ಸೇರಿಸಬೇಕು. ಅಲ್ಲೇ ಅವನು ಪರಿಶುದ್ಧ ಎಣ್ಣೆಯಿಂದ ಅಭಿಷೇಕ ಹೊಂದಿದ ಮಹಾಯಾಜಕನು ಸಾಯುವವರೆಗೂ ವಾಸಮಾಡಲಿ.


ಅವನು ಅಭಿಷೇಕ ತೈಲದಿಂದ ಆರೋನನ ತಲೆಯ ಮೇಲೆ ಸುರಿದು, ಅವನನ್ನು ಪವಿತ್ರ ಮಾಡುವುದಕ್ಕಾಗಿ ಅವನನ್ನು ಅಭಿಷೇಕಿಸಿದನು.


ಆ ಒಂದಾಗಿರುವಿಕೆಯು ತಲೆಯ ಮೇಲಿಂದ ಗಡ್ಡದ ಮೇಲೆ ಅಂದರೆ, ಆರೋನನ ಗಡ್ಡದ ಮೇಲೆ ಇಳಿದು, ಅವನ ವಸ್ತ್ರದ ಕೊರಳಪಟ್ಟಿಯವರೆಗೆ ಮೇಲೆ ಇಳಿಯುವ ಅಮೂಲ್ಯ ತೈಲದ ಹಾಗೆ ಇರುತ್ತದೆ.


ಅನಂತರ ಮೊರ್ದೆಕೈ ಪುನಃ ಅರಮನೆಯ ಬಾಗಿಲಿಗೆ ಬಂದನು. ಆದರೆ ಹಾಮಾನನು ದುಃಖಪಟ್ಟು ತಲೆಯನ್ನು ಮುಚ್ಚಿಕೊಂಡು ತನ್ನ ಮನೆಗೆ ಶೀಘ್ರವಾಗಿ ಹೋದನು.


ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿಕೊಂಡು, ಬರಿಗಾಲಿನಿಂದ ಎಣ್ಣೆಮರಗಳ ಗುಡ್ಡವನ್ನು ಏರಿದನು. ಅವನ ಸಂಗಡ ಇರುವ ಸಮಸ್ತ ಜನರೂ, ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆ ಏರಿದರು.


“ಚರ್ಮರೋಗ ಇರುವ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡವನಾಗಿ, ತಲೆಗೂದಲನ್ನು ಕೆದರಿಕೊಂಡು, ಮುಖದ ಕೆಳಭಾಗವನ್ನು ಮುಚ್ಚಿಕೊಂಡು, ‘ನಾನು ಅಶುದ್ಧನು, ಅಶುದ್ಧನು,’ ಎಂದು ಕೂಗಬೇಕು.


ಆಗ ಯಾಕೋಬನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗೋಸ್ಕರ ಬಹುದಿನ ದುಃಖಪಟ್ಟನು.


ಆಗ ಯೋಬನು ಎದ್ದು ತನ್ನ ಮೇಲಂಗಿಯನ್ನು ಹರಿದುಕೊಂಡನು. ನಂತರ ತನ್ನ ತಲೆ ಬೋಳಿಸಿಕೊಂಡು, ನೆಲಕ್ಕೆ ಬಿದ್ದು ಸಾಷ್ಟಾಂಗವೆರಗಿ,


ಅಭಿಷೇಕಿಸುವ ಎಣ್ಣೆಯನ್ನು ತೆಗೆದುಕೊಂಡು, ಅವನ ತಲೆಯ ಮೇಲೆ ಹೊಯ್ದು, ಅವನನ್ನು ಅಭಿಷೇಕಿಸಬೇಕು.


ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖ ತೋರಿಸಬೇಡ. ಮುಂಡಾಸವನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ನಿನ್ನ ಮೀಸೆ ಮತ್ತು ಗಡ್ಡವನ್ನು ಮುಚ್ಚಿಕೊಳ್ಳಬೇಡ, ದುಃಖಿಸುವವರ ಸಾಂಪ್ರದಾಯಿಕ ಆಹಾರವನ್ನು ತಿನ್ನಬೇಡಿರಿ.”


“ ‘ಅಭಿಷಿಕ್ತನಾದ ಯಾಜಕನು ಪಾಪಮಾಡಿ ಜನರ ಮೇಲೆ ಅಪರಾಧವನ್ನು ತಂದರೆ, ತಾನು ಮಾಡಿದ ಪಾಪಕ್ಕಾಗಿ ಕಳಂಕರಹಿತವಾದ ಒಂದು ಎಳೆಯ ಹೋರಿಯನ್ನು ದೋಷಪರಿಹಾರಕ ಬಲಿಯಾಗಿ ಯೆಹೋವ ದೇವರಿಗೆ ಸಮರ್ಪಿಸಬೇಕು.


ಅವರು ತಂದೆತಾಯಿ, ಸಹೋದರ ಸಹೋದರಿ ಸತ್ತರೂ ಅವರು ಅವರಿಗೋಸ್ಕರ ಅಪವಿತ್ರರಾಗಬಾರದು. ಏಕೆಂದರೆ ದೇವರಿಗೆ ಅವರ ಸಮರ್ಪಣೆಯ ಸಂಕೇತವು ಅವರ ತಲೆಯ ಮೇಲೆ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು