ಯಾಜಕಕಾಂಡ 21:12 - ಕನ್ನಡ ಸಮಕಾಲಿಕ ಅನುವಾದ12 ಇದಲ್ಲದೆ ಪರಿಶುದ್ಧ ಸ್ಥಳದಿಂದ ಹೊರಗೆ ಹೋಗಬಾರದು ಮತ್ತು ತನ್ನ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು. ಏಕೆಂದರೆ ತನ್ನ ದೇವರ ಅಭಿಷೇಕ ತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನೆ. ನಾನೇ ಯೆಹೋವ ದೇವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇದಕ್ಕಾಗಿ ಅವನು ದೇವಸ್ಥಾನವನ್ನು ಬಿಡಲೇ ಬಾರದು; ಬಿಟ್ಟುಹೋದರೆ ತಾನು ಸೇವೆಮಾಡುವ ದೇವರ ಮಂದಿರದ ಗೌರವಕ್ಕೆ ಕುಂದು ಬರುವುದು. ತನ್ನ ದೇವರ ಅಭಿಷೇಕತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನಲ್ಲಾ, ನಾನು ಯೆಹೋವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇದಕ್ಕಾಗಿ ದೇವಸ್ಥಾನವನ್ನು ಬಿಡಲೇಬಾರದು; ಬಿಟ್ಟುಹೋದರೆ ತಾನು ಸೇವೆಮಾಡುವ ದೇವಮಂದಿರದ ಗೌರವಕ್ಕೆ ಕುಂದುಬರುವುದು. ಏಕೆಂದರೆ ತನ್ನ ದೇವರ ಅಭಿಷೇಕ ತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನೆ. ನಾನು ಸರ್ವೇಶ್ವರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇದಕ್ಕಾಗಿ ದೇವಸ್ಥಾನವನ್ನು ಬಿಡಲೇಬಾರದು; ಬಿಟ್ಟುಹೋದರೆ ತಾನು ಸೇವಿಸುವ ದೇವರ ಮಂದಿರದ ಗೌರವಕ್ಕೆ ಕುಂದುಬರುವದು. ತನ್ನ ದೇವರ ಅಭಿಷೇಕತೈಲವನ್ನು ತಲೆಯ ಮೇಲೆ ಹೊಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನಲ್ಲಾ; ನಾನು ಯೆಹೋವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಪ್ರಧಾನಯಾಜಕನು ದೇವರ ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗೆ ಹೋದರೆ ಅಶುದ್ಧನಾಗುವನು. ಅಲ್ಲದೆ ಅವನಿಂದ ದೇವರ ಪರಿಶುದ್ಧಸ್ಥಳವು ಅಶುದ್ಧವಾಗುವುದು. ಅಭಿಷೇಕತೈಲವು ಪ್ರಧಾನಯಾಜಕನ ತಲೆಯ ಮೇಲೆ ಹೊಯ್ಯಲ್ಪಟ್ಟಿದೆ. ಇದು ಅವನನ್ನು ಇತರ ಜನರಿಂದ ಪ್ರತ್ಯೇಕಗೊಳಿಸಿದೆ. ನಾನೇ ಯೆಹೋವನು! ಅಧ್ಯಾಯವನ್ನು ನೋಡಿ |