ಯಾಜಕಕಾಂಡ 21:14 - ಕನ್ನಡ ಸಮಕಾಲಿಕ ಅನುವಾದ14 ವಿಧವೆಯನ್ನಾಗಲಿ, ಗಂಡ ಬಿಟ್ಟ ಸ್ತ್ರೀಯನ್ನಾಗಲಿ, ಇಲ್ಲವೆ ಅಪವಿತ್ರಳನ್ನಾಗಲಿ, ವೇಶ್ಯೆಯನ್ನಾಗಲಿ, ಇಂಥವರನ್ನು ಅವನು ಮದುವೆಯಾಗಬಾರದು. ಆದರೆ ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ನಿಕೆಯನ್ನು ತನಗೆ ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವನು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ವೇಶ್ಯ ಸ್ತ್ರೀಯನ್ನಾಗಲಿ ಹೆಂಡತಿಯನ್ನಾಗಿ ಮಾಡಿಕೊಳ್ಳಬಾರದು. ಸ್ವದೇಶದವರಲ್ಲಿಯ ಕನ್ನಿಕೆಯನ್ನೇ ಮದುವೆ ಮಾಡಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ, ಶೀಲಭ್ರಷ್ಟ ಸ್ತ್ರೀಯನ್ನಾಗಲಿ, ವೇಶ್ಯೆಯನ್ನಾಗಲಿ ಮದುವೆ ಮಾಡಿಕೊಳ್ಳಬಾರದು. ಸ್ವದೇಶದವರಲ್ಲಿಯೇ ಹೆಣ್ಣನ್ನು ಪರಿಗ್ರಹಿಸಬೇಕು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ವಿಧವೆಯನ್ನಾಗಲಿ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಮಾನವನ್ನು ಭಂಗಪಡಿಸಿಕೊಂಡವಳನ್ನಾಗಲಿ ವೇಶ್ಯಾಸ್ತ್ರೀಯನ್ನಾಗಲಿ ಹೆಂಡತಿಯನ್ನಾಗಿ ಮಾಡಿಕೊಳ್ಳಬಾರದು. ಸ್ವದೇಶದವರಲ್ಲಿಯೇ ಹೆಣ್ಣನ್ನು ಪರಿಗ್ರಹಿಸಬೇಕು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಪ್ರಧಾನಯಾಜಕನು ಬೇರೆ ಪುರುಷನೊಡನೆ ಲೈಂಗಿಕ ಸಂಬಂಧ ಮಾಡಿದ ಸ್ತ್ರೀಯನ್ನು ಮದುವೆಯಾಗಬಾರದು. ಪ್ರಧಾನಯಾಜಕನು ವೇಶ್ಯಾ ಸ್ತ್ರೀಯನ್ನಾಗಲಿ ಗಂಡ ಬಿಟ್ಟವಳನ್ನಾಗಲಿ ಅಥವಾ ವಿಧವೆಯನ್ನಾಗಲಿ ಮದುವೆಯಾಗಬಾರದು. ಪ್ರಧಾನಯಾಜಕನು ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ಯೆಯನ್ನು ಮದುವೆಯಾಗಬೇಕು. ಅಧ್ಯಾಯವನ್ನು ನೋಡಿ |